B.C Road: ರಸ್ತೆ ಪಕ್ಕದಲ್ಲಿ ಕಾರು ರಿಪೇರಿಯಲ್ಲಿ ತೊಡಗಿದ್ದ ಮೆಕ್ಯಾನಿಕ್ ಒಬ್ಬರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಅ. 14ರ ಮಂಗಳವಾರದಂದು ಭೀಕರ ಅಪಘಾತ ಸಂಭವಿಸಿದೆ.
ಬೋಳಂತೂರು ನಿವಾಸಿ ಜಬ್ಬಾರ್ (33) ಮೃತಪಟ್ಟ ವ್ಯಕ್ತಿ. ಅವಿವಾಹಿತರಾಗಿದ್ದ ಜಬ್ಬಾರ್ ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿ ಆಟೋ ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
ವರದಿಗಳ ಪ್ರಕಾರ, ಮಧ್ಯಾಹ್ನದ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ, ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಕಾರು ಬಂಟ್ವಾಳ ಬೈಪಾಸ್ ಕಡೆಯಿಂದ ಬಂದು ಅವರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಜಬ್ಬಾರ್ ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Puttur: ಹಾಡಹಗಲೇ ಚಿನ್ನಾಭರಣ ಕಳವು – ಆರೋಪಿಯ ಬಂಧನ
ವೀಡಿಯೋ ಸುದ್ದಿಗಳನ್ನು ವೀಕ್ಷಿಸಲು ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ Subscribe ಮಾಡಿ:https://www.youtube.com/watch?v=JJgZvG3Eep4











