ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ

ಸಿ ಎಂ ಸಿದ್ಧರಾಮಯ್ಯ : Tulu Times | ಪ್ರಾಚೀನ ಕಾಲದಿಂದಲೇ ಆಟಗಳು ಮಾನವ ಸಮಾಜದ ಸಂಸ್ಕೃತಿ, ಪರಂಪರೆ ಮತ್ತು ಜೀವನಶೈಲಿಯ ಭಾಗವಾಗಿವೆ. ಆದರೆ, ಇಂದಿನ ದಿನಗಳಲ್ಲಿ ಕ್ರೀಡೆಗಳು ದೇಶದ ಅಭಿವೃದ್ಧಿಗೆ, ಜಾಗತಿಕ ಗುರುತಿಗೆ ಮತ್ತು ಯುವಕರಲ್ಲಿನ ಹೊಸ ಹುರುಪಿಗೆ ಪ್ರಮುಖ ಕಾರಣವಾಗಿವೆ. ಇನ್ನು ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕೇವಲ ಆಟಗಾರರಲ್ಲ, ಅವರು ದೇಶದ ಯುವಕರ ಪ್ರೇರಣೆ, ಸಾಧನೆಯ ಪ್ರತೀಕವೆಂದೂ ಕರೆಯಲಾಗುತ್ತದೆ. ಹಾಗೆಯೇ, ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಶಿಸ್ತು ಮತ್ತು ಸಮರ್ಪಣೆ ಇವೆಲ್ಲವೂ ಅವರಿಗೆ ಶ್ರೇಷ್ಠ ಸ್ಥಾನವನ್ನು ತರುವುದರಲ್ಲಿ ಬೇರೆ ಮಾತಿಲ್ಲ. ಇನ್ನು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3, ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ;

ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಕಾಮನ್ವೆಲ್ತ್‌, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆ, ಪೊಲೀಸ್‌ ಇಲಾಖೆ ಹಾಗೂ ವಿವಿಧ ಇಲಾಖೆಗಳಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು. ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ನೀಡಿದರು.

Reservation in government jobs for sportspersons and encouragement for Kabbadi sport – ತುಳು ಟೈಮ್ಸ್

ಇದನ್ನೂ ಓದಿ :ಜನೌಷಧಿ ಮುಚ್ಚುವ ನಿರ್ಧಾರ ರದ್ದುಗೊಳಿಸಿದ ಹೈಕೋರ್ಟ್

======

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/z7Cg1RxfZUI?si=_td0VgNf95KJtYXF

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page