Bantwala: ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಅಪಘಾತ ನಡೆದಿತ್ತು. ಬಂಟ್ವಾಳ ಹೊಸ್ಮಾರು ನಿವಾಸಿ ಗೋಪಾಲ ಎಂಬವರ ಪುತ್ರ ಧನುಷ್ (23) ಮೃತಪಟ್ಟ ಯುವಕ.
ಸರ್ವೆ ಇಲಾಖೆಯ ಗುತ್ತಿಗೆ ಆಧಾರದ ಉದ್ಯೋಗಿಯಾಗಿರುವ ಧನುಷ್, ಮಂಗಳೂರು ಕಡೆಯಿಂದ ಬಂಟ್ವಾಳ ಹೊಸ್ಮಾರು ಮನೆಗೆ ಸಂಜೆ ಮರಳುವ ವೇಳೆ ರಾಮಲಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಿಂತಾಜನಕ ಸ್ಥಿತಿಯಲ್ಲಿದ್ದ ಧನುಷ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಗಿ ಪೋಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: B.C Road: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್ ಮೃತ್ಯು
ವೀಡಿಯೋ ಸುದ್ದಿಗಳನ್ನು ವೀಕ್ಷಿಸಲು ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ Subscribe ಮಾಡಿ:https://www.youtube.com/watch?v=JJgZvG3Eep4











