ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ಕರ್ನಾಟಕ:  Tulu Times | ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ  ಹಿರಿಯ ಕಾಂಗ್ರೆಸ್​​​ನ ಶಾಸಕ ಶಾಮನೂರು ಶಿವಶಂಕರಪ್ಪ (94)  ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ದಾವಣಗೆರೆ  ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಭಾರತದಲ್ಲೇ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇದನ್ನೂ ಓದಿ: ಮದುವೆಯಾದ ಹೆಣ್ಣು ಮಕ್ಕಳು ಪ್ರೆಗ್ನೆನ್ಸಿ ಪ್ಲ್ಯಾನ್ ಮಾಡುತ್ತಿದ್ದೀರಾ ಹಾಗಾದ್ರೆ ಗಮನಿಸಿ!

ಈ ಹಿಂದೆ  ಶಾಮನೂರು ಶಿವಶಂಕರಪ್ಪಅವರ ಮಗ ಸಚಿವ ಎಸ್​​ಎಸ್​ ಮಲ್ಲಿಕಾರ್ಜುನ ಆವರು ಪ್ರತಿಕ್ರಿಯಿಸಿ ತಮ್ಮ ತಂದೆ ಚೆನ್ನಾಗಿದ್ದಾರೆ. ಗುರು ಹಿರಿಯರ ಆಶೀರ್ವಾದದಿಂದ ಇನ್ನೊಂದು ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಇನ್ನು ಇವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ,  ನಾಯಕನ ಅಗಲಿಕೆಗೆ  ಅಭಿಮಾನಿಗಳು,  ಶಾಮನೂರು ಶಿವಶಂಕರಪ್ಪನವರ ನಿವಾಸದತ್ತ ದೌಡಾಯಿಸುತ್ತಿದ್ದಾರೆ. ಇನ್ನು ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅವರ ಅಭಿಮಾನಿಳಿಂದ ಪ್ರಾರ್ಥನೆ, ಪೂಜೆಗಳು ನಡೆದಿದ್ದವು. ವಿಚಾರ ತಿಳಿಯುತ್ತಿದ್ದಂತೆ  ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:‌ ನಿರ್ದೇಶಕ ಸಿಂಪಲ್‌ ಸುನಿ ಮುಂದಿನ ಸಿನಿಮಾ ಯಾವುದು ಗೊತ್ತಾ?

ಹಿರಿಯ ಶಾಸಕರಾಗಿ ಎನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ  ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿ, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ  ಛಾಪು ಮೂಡಿಸಿದ್ದರು. ಇನ್ನು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷ, ಅಖಿಲ ಭಾರತ ವೀರಶಿವ ಮಹಾಸಭೆಯ ಅಧ್ಯಕ್ಷ, ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆ ಹಾಗೂ ಬಾಪುಜಿ ಎಂಜಿನಿಯರಿಂಗ್ ಅಸೋಸಿಯೇಷನ್‍ ಅಧ್ಯಕ್ಷರಾಗಿದ್ದರು. ಹಲವು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

congress-mla-shamanur-shivashankarappa-passes-away-in-bengaluru- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page