ಬ್ರೇಕಿಂಗ್ ನ್ಯೂಸ್
ಕರ್ನಾಟಕಬಂಟ್ವಾಳ

ಪುಂಜಾಲಕಟ್ಟೆಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ದಾಖಲು

ಬೆಳ್ತಂಗಡಿ: Tulu Times | ಪುಂಜಾಲಕಟ್ಟೆಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ದಾಖಲಾಗಿದ್ದು,  ಜಾನುವಾರು ನೀಡಿದ ಮಾಲೀಕನ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಲಾಗಿದೆ.

ಪುಂಜಾಲಕಟ್ಟೆ ಪೊಲೀಸರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ  ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ ಅಟೋವನ್ನು ತಡೆದು ಪರಿಶೀಲಿಸಿದಾಗ ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆ ಹಚ್ಚಲಾಗಿದೆ.

ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ (56) ಜಾನುವಾರು ಸಾಗಿಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.   ಈ ಜಾನುವಾರನ್ನು ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನುಸಾಗಾಟ ಮಾಡಲಾಗಿದೆ ಎನ್ನುವುದು ತಿಳಿದುಬಂದಿದೆ. ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಒಂದು ಜಾನುವಾರು, ಆಟೋ, ಒಂದು ಮೊಬೈಲ್ ಫೋನ್  ಅನ್ನು ವಶಕ್ಕೆ ಪಡೆಯಲಾಗಿದೆ.  ಪುಂಜಾಲಕಟ್ಟೆ ಪೊಲೀಸರು ಡಿ.14 ರಂದು ಕಾನೂನು ಪ್ರಕ್ರಿಯೆಯಂತೆ, ಜಾನುವಾರು ನೀಡಿದ ಆರೋಪಿ ಬಂಟ್ವಾಳ ಗ್ರಾಮದ ಸರಪ್ಪಾಡಿ ನಿವಾಸಿ ಭೋಜ ಮೂಲ್ಯರವರ ಮನೆ ಹಾಗೂ ಜಾನುವಾರು ಕೊಟ್ಟಿಗೆ  ಆವರಣವನ್ನು  ಜಪ್ತಿ ಮಾಡಿದ್ದಾರೆ.

ಕಾಂಗ್ರೆಸ್‌ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ!

ಪ್ರತ್ಯೇಕ ಪ್ರಕರಣದಲ್ಲಿ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್‌ನ ಶಾಸಕ ಶಾಮನೂರು ಶಿವಶಂಕರಪ್ಪ (94) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಭಾರತದಲ್ಲೇ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರ ಮಗ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ ಅವರು ಪ್ರತಿಕ್ರಿಯಿಸಿ ತಮ್ಮ ತಂದೆ ಚೆನ್ನಾಗಿದ್ದಾರೆ. ಗುರು ಹಿರಿಯರ ಆಶೀರ್ವಾದದಿಂದ ಇನ್ನೊಂದು ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಲಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಇನ್ನು ಇವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ನಾಯಕನ ಅಗಲಿಕೆಗೆ ಅಭಿಮಾನಿಗಳು, ಶಾಮನೂರು ಶಿವಶಂಕರಪ್ಪನವರ ನಿವಾಸದತ್ತ ದೌಡಾಯಿಸುತ್ತಿದ್ದಾರೆ. ಇನ್ನು ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅವರ ಅಭಿಮಾನಿಳಿಂದ ಪ್ರಾರ್ಥನೆ, ಪೂಜೆಗಳು ನಡೆದಿದ್ದವು. ವಿಚಾರ ತಿಳಿಯುತ್ತಿದ್ದಂತೆ ರಾಜಕೀಯ ನಾಯಕರು ಸಂತಾವ ಸೂಚಿಸಿದ್ದಾರೆ.

Case registered for illegal cow trafficking in Punjalakatte- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page