ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮಡಿಕೇರಿಯಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಪ್ರವಾಸಿಗರ ಬಸ್‌

ಮಡಿಕೇರಿ: Tulu Times | ಮಡಿಕೇರಿಯ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ
ಪ್ರವಾಸಿಗರ ಬಸ್ಸೊಂದು ರಸ್ತೆ ಮಧ್ಯೆ ಹೊತ್ತಿದೆ. ಬೆಂಕಿ ಗೊತ್ತಿ ಉರಿದ ಪರಿಣಾಮ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ.

ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದ್ದು, ಬಸ್‌ ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು ಎನ್ನಲಾಗಿದೆ. ಬಸ್ ಕೇರಳ ನೋಂದಣಿಯ ಖಾಸಗಿ ಬಸ್ ಎಂದು ತಿಳಿದುಬಂದಿದೆ.‌ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಒಂದು ವೇಳೆ ಬಸ್‌ ನಲ್ಲಿ ಪ್ರವಾಸಿಗರು ಇದ್ದರೆ, ಭಾರೀ ಅನಾಹುತ ಸಂಭವಿಸಿದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುಂಜಾಲಕಟ್ಟೆಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ದಾಖಲು!

ಪ್ರತ್ಯೇಕ ಪ್ರಕರಣದಲ್ಲಿ, ಪುಂಜಾಲಕಟ್ಟೆಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ದಾಖಲಾಗಿದ್ದು, ಜಾನುವಾರು ನೀಡಿದ ಮಾಲೀಕನ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ ಅಟೋವನ್ನು ತಡೆದು ಪರಿಶೀಲಿಸಿದಾಗ ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆ ಹಚ್ಚಲಾಗಿದೆ.

ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ (56) ಜಾನುವಾರು ಸಾಗಿಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ. ಈ ಜಾನುವಾರನ್ನು ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಸಾಗಾಟ ಮಾಡಲಾಗಿದೆ ಎನ್ನುವುದು ತಿಳಿದುಬಂದಿದೆ. ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಒಂದು ಜಾನುವಾರು, ಆಟೋ, ಒಂದು ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಡಿ.14 ರಂದು ಕಾನೂನು ಪ್ರಕ್ರಿಯೆಯಂತೆ, ಜಾನುವಾರು ನೀಡಿದ ಆರೋಪಿ ಬಂಟ್ವಾಳ ಗ್ರಾಮದ ಸರಪ್ಪಾಡಿ ನಿವಾಸಿ ಭೋಜ ಮೂಲ್ಯರವರ ಮನೆ ಹಾಗೂ ಜಾನುವಾರು ಕೊಟ್ಟಿಗೆ ಆವರಣವನ್ನು ಜಪ್ತಿ ಮಾಡಿದ್ದಾರೆ.

Tourist bus catches fire in the middle of the road in Madikeri- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page