Udupi: ಸಮುದ್ರಕ್ಕೆ ಇಳಿದ ಮೂರು ಮಕ್ಕಳು ನೀರುಪಾಲಾಗಿದ್ದಾರೆ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯ ಹೊಸಹಿತ್ಲು ಕಡಲ ತೀರದಲ್ಲಿ ಈ ದುರಂತ ನಡೆದಿದೆ. ಕಿರಿಮಂಜೇಶ್ವರ ಗ್ರಾಮದ ಸಂಕೇತ್ (16), ಸೂರಜ್ (15 ) ಹಾಗೂ ಆಶಿಶ್ (14) ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಮಕ್ಕಳು.
ನಾಲ್ಕು ಮಂದಿ ಮಕ್ಕಳು ಸಂಜೆ ವಾಲಿಬಾಲ್ ಆಟವಾಡಿ, ನಂತರ ಗಾಳ ಹಾಕಲೆಂದು ಕಡಲ ತೀರಕ್ಕೆ ಹೋಗಿದ್ದಾರೆ. ನೀರಿನ ಬಗ್ಗೆ ಅಂದಾಜು ಸಿಗದೆ ಮುಂದೆ ಹೋದ ಕಾರಣ, ಮುಳುಗಡೆಯಾಗಿದ್ದಾರೆ. ಈ ಪೈಕಿ ಓರ್ವ ಬಾಲಕ ಈಜಿಕೊಂಡು ಬಂದು ಸ್ಥಳದಲ್ಲಿದ್ದ ಮೀನುಗಾರರಿಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಕಡಲಿಗೆ ಹಾರಿ ಮೂವರು ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಷ್ಟರಲ್ಲಿಯೇ ಕಡಲ ಅಲೆಗಳಲ್ಲಿ ಮೂವರು ಮಕ್ಕಳು ಉಸಿರು ಚೆಲ್ಲಿದ್ದಾರೆ. ತಕ್ಷಣವೇ ಶವಗಳನ್ನು ಮೇಲಕ್ಕೆತ್ತಲಾಗಿದೆ.
ಕಿರಿಮಂಜೇಶ್ವರ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷ ವಯಸ್ಸಿನ ಆಶಿಶ್ ದೇವಾಡಿಗ, ಕಿರಿ ಮಂಜೇಶ್ವರ ಹೈಸ್ಕೂಲ್ನಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷ ವಯಸ್ಸಿನ ಸೂರಜ್ ಪೂಜಾರಿ ಹಾಗೂ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ 18 ವರ್ಷ ವಯಸ್ಸಿನ ಸಂಕೇತ ದೇವಾಡಿಗ ಮೃತ ಬಾಲಕರು. ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಚ್ಚರಿಕೆ: ಕಡಲ ತೀರಗಳಿಗೆ ಹೋಗುವಾಗ ಪೋಷಕರು, ಮಕ್ಕಳು, ಯುವಕರು ಎಚ್ಚರಿಕೆಯಿಂದ ಇರಬೇಕು. ಕಡಲಿನಲ್ಲಿ ಹವಾಮಾನದ ವೈಪರೀತ್ಯಗಳು ನಡೆಯುತ್ತಲೇ ಇರುತ್ತದೆ. ಇದನ್ನು ಅಂದಾಜಿಸಲು ಸಾಧ್ಯವಿಲ್ಲ. ಕಡಲಿಗಿಳಿಯುವಾಗ ಕಟ್ಟೆಚ್ಚರ ವಹಿಸುವುದು ಅಗತ್ಯವಾಗಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ.
ಇದನ್ನೂ ಓದಿ: Davanagere: ಮಾದಕ ವ್ಯಸನಿಗಳು ನಶೆಗಾಗಿ ಕೆಮ್ಮು ಸಿರಪ್ ಬಳಕೆ – ಐವರ ಬಂಧನ
ವೀಡಿಯೋ ಸುದ್ದಿಗಳನ್ನು ವೀಕ್ಷಿಸಲು ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ Subscribe ಮಾಡಿ:https://www.youtube.com/watch?v=JJgZvG3Eep4











