ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮಂಗಳೂರಿನ ಆರ್‌ಟಿಒ ಕಚೇರಿಗೆ ಬಾಂಬ್ ಬೆದರಿಕೆ

ಮಂಗಳೂರು: Tulu Times | ಮಂಗಳೂರಿನ  ಆರ್‌ಟಿಒ ಕಚೇರಿಗೆ ಹುಸಿ ಬಾಂಬ್‌ ಬೆದರಿಕೆಯನ್ನು ಇ-ಮೇಲ್‌  ಮೂಲಕ ಕಳುಹಿಸಲಾಗಿದ್ದ, ತಕ್ಷಣವೇ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳದ ಸಿಬ್ಬಂದಿ  ಕಚೇರಿಯನ್ನು ಪರಿಶೀಲನೆ ನಡೆಸಿದ ನಂತರ  ಎಲ್ಲೂ ಬಾಂಬ್‌ ಪತ್ತೆಯಾಗಿಲ್ಲ.

ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು  ಸೋಮವಾರ ಬೆದರಿಕೆ ಒಡ್ಡಲಾಗಿದೆ. ಬಾಂಬ್ ಇಟ್ಟಿರುವ ಬಗ್ಗೆ ಮುಂಜಾನೆ 1 ಗಂಟೆ 19 ನಿಮಿಷಕ್ಕೆ ಕಚೇರಿಯ ಇ-ಮೇಲ್ ವಿಳಾಸಕ್ಕೆ  ಇಮೇಲ್‌  ಒಂದು ಬಂದಿತ್ತು.  ಮಧ್ಯಾಹ್ನ 12 ಗಂಟೆಗೆ  ಕಚೇರಿಯ ಸಿಬ್ಬಂದಿ ಇಮೇಲ್ ಓದಿದ್ದರು.

ಇ-ಮೇಲ್‌ನಲ್ಲಿ ಏನು ಬರೆಯಲಾಗಿತ್ತು..?

ಉಪ ಸಾರಿಗೆ ಆಯುಕ್ತ ಮುರುಗೇಂದ್ರ ಬಿ.ಶಿರೋಲ್ಕರ್‌ ಈ ಬಗ್ಗೆ ನಗರ ದಕ್ಷಿಣ ಠಾಣೆಗೆ ದೂರು ನೀಡಿ, ಆರ್‌ಟಿಒ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸಲು ಪಾಕಿಸ್ತಾನದ ಐಎಸ್‌ಐ ಕೋಶಗಳ ತಮಿಳುನಾಡು ವಿಭಾಗ ಮಾಜಿ ಎಲ್‌ಟಿಟಿಇಯವರ ಜೊತೆ ಸೇರಿಕೊಂಡಿದೆ. ಐದು ಕಡೆ ಬಾಂಬ್‌ಗಳನ್ನು ಇಡಲಾಗಿದೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು. ಹುಸಿ ಸಂದೇಶ ಕಳುಹಿಸಿದ ಬಗ್ಗೆ ನಗರ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.  ಡಿಟಿಒ ಅವರಿಂದ ಬಂದ ದೂರನ್ನು ಆಧರಿಸಿ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಎಲ್ಲೂ ಬಾಂಬ್ ಪತ್ತೆಯಾಗಿಲ್ಲ. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಕಮಿಷನರ್‌ ಸುಧೀರ್‌ ಕುಮಾರ್ ರೆಡ್ಡಿ ಸಿ.ಎಚ್‌. ತಿಳಿಸಿದ್ದಾರೆ.

ಇದನ್ನೂ ಓದಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರಿಗೆ ಗುಡ್ ನ್ಯೂಸ್ ಏನದು..?

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೋರ್ವ ನೇಣಿಗೆ ಶರಣು!

ಪ್ರತ್ಯೇಕ ಪ್ರಕರಣದಲ್ಲಿ, ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರಾದ ವ್ಯಕ್ತಿಯನ್ನು ಕುಶಲ್ ಶೆಟ್ಟಿ ಶೆಟ್ಟಿ (67) ಎಂದು ಗುರುತಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಮೃತರ ಮಗ ಅತುಲ್ ಕೆ ಶೆಟ್ಟಿ ಪೊಲೀಸ್ ಕಂಪ್ಲೆಂಟ್ ಕೊಟ್ಟಿದ್ದಾರೆ. ಕುಶಲ್ ಶೆಟ್ಟಿ ಕಳೆದ ಎರಡು ದಿನಗಳ ಹಿಂದೆ ಸಂಜೆ 5 ಗಂಟೆಗೆ ತಮ್ಮ ಮನೆಯಿಂದ ಹೇರೂರು ಗ್ರಾಮದ ಅಕ್ಷರ ಮನೆಯಿಂದ ಹಳ ಮನೆಯಾದ ಚೇರ್ಕಾಡಿಗೆ ಮನೆಗೆ ಹೋಗಿದ್ದರು. ನಿನ್ನೆ 9 ಗಂಟೆಯಾದರೂ ಮನೆಗೆ ಬಂದಿಲ್ಲ. ಫೋನ್ ಮಾಡಿದ್ದರೂ ಸ್ವೀಕರಿಸಿಲ್ಲ. ಕೊನೆಗೆ ಮನೆಗೆ ಹೋಗಿ ನೋಡಿದಾಗ ಮನೆಯ ಉಪ್ಪರಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯು.ಡಿ.ಆರ್ 88/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.

Bomb threat to RTO office in Mangalore- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page