ಸುರತ್ಕಲ್: Tulu Times | ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ಸಹೋದರಿಯನ್ನೇ ಸಹೋದರ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.
ಈ ಪೈಶಾಚಿಕ ಕೃತ್ಯಕ್ಕೆ ಕರಾವಳಿ ಬೆಚ್ಚಿ ಬಿದ್ದಿದೆ. ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ. ಕುಳಾಯಿ ನಿವಾಸಿ ವಿಠಲ ಕುಂಬಾರ ಎಂಬುವವರು ಆರೋಪಿಯಾಗಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಇನ್ನು ಈ ಸಂಗತಿಯನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮಂಗಳೂರಿನ ಆರ್‌ಟಿಒ ಕಚೇರಿಗೆ ಹುಸಿ ಬಾಂಬ್ ಬೆದರಿಕೆ
ಪ್ರತ್ಯೇಕ ಪ್ರಕರಣದಲ್ಲಿ, ಮಂಗಳೂರಿನ ಆರ್‌ಟಿಒ ಕಚೇರಿಗೆ ಹುಸಿ ಬಾಂಬ್ ಬೆದರಿಕೆಯನ್ನು ಇ-ಮೇಲ್ ಮೂಲಕ ಕಳುಹಿಸಲಾಗಿದ್ದ ತಕ್ಷಣವೇ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳದ ಸಿಬ್ಬಂದಿ ಕಚೇರಿಯನ್ನು ಪರಿಶೀಲನೆ ನಡೆಸಿದ ನಂತರ ಎಲ್ಲೂ ಬಾಂಬ್ ಪತ್ತೆಯಾಗಿಲ್ಲ.
ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ಬೆದರಿಕೆ ಒಡ್ಡಲಾಗಿದೆ. ಬಾಂಬ್ ಇಟ್ಟಿರುವ ಬಗ್ಗೆ ಮುಂಜಾನೆ 1 ಗಂಟೆ 19 ನಿಮಿಷಕ್ಕೆ ಕಚೇರಿಯ ಇ-ಮೇಲ್ ವಿಳಾಸಕ್ಕೆ ಇಮೇಲ್ ಒಂದು ಬಂದಿತ್ತು. ಮಧ್ಯಾಹ್ನ 12 ಗಂಟೆಗೆ ಕಚೇರಿಯ ಸಿಬ್ಬಂದಿ ಇಮೇಲ್ ಓದಿದ್ದರು.
ಇ-ಮೇಲ್‌ನಲ್ಲಿ ಏನು ಬರೆಯಲಾಗಿತ್ತು..?
ಉಪ ಸಾರಿಗೆ ಆಯುಕ್ತ ಮುರುಗೇಂದ್ರ ಬಿ.ಶಿರೋಲ್ಕರ್ ಈ ಬಗ್ಗೆ ನಗರ ದಕ್ಷಿಣ ಠಾಣೆಗೆ ದೂರು ನೀಡಿ, ಆರ್‌ಟಿಒ ಕಚೇರಿಯಲ್ಲಿ ಬಾಂಬ್ ಸ್ಫೋಟಿಸಲು ಪಾಕಿಸ್ತಾನದ ಐಎಸ್‌ಐ ಕೋಶಗಳ ತಮಿಳುನಾಡು ವಿಭಾಗ ಮಾಜಿ ಎಲ್ ಟಿಟಿಇಯವರ ಜೊತೆ ಸೇರಿಕೊಂಡಿದೆ. ಐದು ಕಡೆ ಬಾಂಬ್‌ಗಳನ್ನು ಇಡಲಾಗಿದೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು. ಹುಸಿ ಸಂದೇಶ ಕಳುಹಿಸಿದ ಬಗ್ಗೆ ನಗರ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಡಿಟಿಒ ಅವರಿಂದ ಬಂದ ದೂರನ್ನು ಆಧರಿಸಿ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಎಲ್ಲೂ ಬಾಂಬ್ ಪತ್ತೆಯಾಗಿಲ್ಲ. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್. ತಿಳಿಸಿದ್ದಾರೆ.
brother rapes sister in Suratkal- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











