ಕರ್ನಾಟಕ: Tulu Times | ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ನಿತಿನ್ ನಬೀನ್ ಜೀ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್..!
‘ಯುವ ಸಮೂಹ’ ಸಂಘಟನೆಯ ಬಹುದೊಡ್ಡ ಶಕ್ತಿ, ಈ ನಿಟ್ಟಿನಲ್ಲಿ ಯುವ ಉತ್ಸಾಹಿಗಳನ್ನು ಗುರುತಿಸುವುದು ಭಾರತೀಯ ಜನತಾ ಪಾರ್ಟಿಯ ಆದ್ಯತೆ ಹಾಗೂ ಬದ್ಧತೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಜೀ, ರಾಷ್ಟ್ರೀಯ ಅಧ್ಯಕ್ಷರೂ ಆದ ಕೇಂದ್ರ ಸಚಿವ ಜೆ.ಪಿ.ನಡ್ಡಾಜೀ, ಗೃಹ ಸಚಿವ ಅಮಿತ್ ಶಾ ಜೀ ಹಾಗೂ ಪಕ್ಷದ ಇತರ ವರಿಷ್ಠರು ಯುವ ನಾಯಕ ನಿತಿನ್ ನಬೀನ್ ಅವರನ್ನು ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ದೇಶದ ಯುವ ಜನರಿಗೆ ಸ್ಫೂರ್ತಿಯ ಸಂದೇಶ ರವಾನಿಸಿದ್ದಾರೆ ಎಂದು ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಮದುವೆಯಾದ ಹೆಣ್ಣು ಮಕ್ಕಳು ಜವಾಬ್ದಾರಿಗಳನ್ನು ಮರೆಯೋದ್ಯಾಕೆ..?
ಬಿಜೆಪಿ, ಇತಿಹಾಸದಲ್ಲಿ ಅತ್ಯುನ್ನತ ಜವಾಬ್ದಾರಿ ವಹಿಸಿಕೊಂಡ ಯುವ ನಾಯಕ ಎಂಬ ಹೆಗ್ಗಳಿಕೆಗೆ ನಿತಿನ್ ನಬೀನ್ ಜೀ ಪಾತ್ರರಾಗಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಪಕ್ಷ ನಿಷ್ಠೆ, ಕ್ರಿಯಾಶೀಲತೆ, ರಾಷ್ಟ್ರಬದ್ಧತೆ ಹಾಗೂ ಸಂಘಟನಾ ಸಾಮಥ್ರ್ಯವನ್ನು ಸಮರ್ಥವಾಗಿ ನಿರೂಪಿಸಿದ್ದಾರೆ. ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಹಾರದಲ್ಲಿ ಅಪಾರ ಜನಮನ್ನಣೆ ಗಳಿಸಿದ ಜನನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ತಿಳಿಸಿದ್ದಾರೆ. ನಿತಿನ್ ನಬೀನ್‍ರವರು ಪ್ರಸ್ತುತ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನದ ಮೂಲಕ ನಮ್ಮಂತವರಿಗೆ ಪ್ರೇರಣೆಯ ಶಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಅವರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬಲವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಕಂದಾಯ ಸಚಿವರ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ!
ಬೆಳಗಾವಿ: ‘ಮಿಸ್ಟರ್ ಕ್ಲೀನ್’ ಎಂದು ಬಿಂಬಿಸಿಕೊಳ್ಳುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭ್ರಷ್ಟಾಚಾರದ ಕೂಪದಲ್ಲಿ ಸಿಲುಕಿದ್ದು, ತಕ್ಷಣ ರಾಜೀನಾಮೆ ಕೊಡಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಭೂದಾಖಲೆಗಳನ್ನು ಪ್ರದರ್ಶಿಸಿದರು. ಸ್ಮಶಾನ ಭೂಮಿ ಮತ್ತು ಕೆರೆ ಭೂಮಿಯನ್ನು ವರ್ಗಾಯಿಸಿದ್ದರ ಕುರಿತು ಸರಕಾರ ತನಿಖೆ ನಡೆಸಬೇಕು. ಇದರ ಕುರಿತು ಸದನದಲ್ಲಿ ಉತ್ತರಿಸಬೇಕೆಂದು ಆಗ್ರಹಿಸಿದರು.
ಇದು ಕೋಲಾರ ಜಿಲ್ಲೆ ನರಸಾಪುರ ಹೋಬಳಿ ಗರುಡನಪಾಳ್ಯ ಗ್ರಾಮದ ಸರ್ವೇ ನಂಬರ್ 47ರ 1 ಎಕರೆ ಜಾಗ ಮತ್ತು 46 ಸರ್ವೇ ನಂಬರ್‍ನ ವಿಚಾರ. ಎರಡನೆಯದು ಕೆರೆ ಅಂಗಳ, 20 ಎಕರೆ 16 ಗುಂಟೆ ಜಾಗ. ಒಟ್ಟು ಸೇರಿದರೆ 21 ಎಕರೆ 16 ಗುಂಟೆ. ಪ್ರತಿ ಎಕರೆಗೆ 5ರಿಂದ 6 ಕೋಟಿ ಬೆಲೆಯ ಜಮೀನುಗಳು ಇವು. ಸರ್ವೇ ನಂಬರ್ 47ರ 1 ಎಕರೆ ಜಾಗ ಸ್ಮಶಾನದ ಜಮೀನು. ಇದನ್ನು ಯಾರೂ ತಮ್ಮ ಹೆಸರಿಗೆ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಗಮನ ಸೆಳೆದರು. ಮಾನ್ಯ ಕೃಷ್ಣಬೈರೇಗೌಡ, ಬಿನ್ ಲೇಟ್ ಸಿ.ಬೈರೇಗೌಡ (ಮಾಜಿ ಸಚಿವ) ಅವರು ಪಂಚಾಯತ್ ಪಾರೀಖ ಮಾಡಿ, ಇವೆರಡನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ದಾಖಲೆಗಳೊಂದಿಗೆ ಮಾಹಿತಿ ಕೊಟ್ಟರು.
Nitin Nabin Ji elected as new BJP working president- ತುಳುಟೈಮ್ಸ್
ಇದನ್ನೂ ಓದಿ: ನೀವು ದಿನವಿಡೀ ನಿದ್ರೆ ಮಂಪರಿನಲ್ಲಿ ಇರುತ್ತೀರಾ? ಹಾಗಾದ್ರೆ ಈ ತಪ್ಪು ಮಾಡದಿರಿ!











