ಬ್ರೇಕಿಂಗ್ ನ್ಯೂಸ್
ಕರ್ನಾಟಕ

‘ಗೃಹಲಕ್ಷ್ಮೀ’ ತಪ್ಪು ಲೆಕ್ಕಾಚಾರದಿಂದ ಸದನದಲ್ಲಿ ಗದ್ದಲ : ತಪ್ಪು ಒಪ್ಪಿಕೊಂಡ ಲಕ್ಷ್ಮೀ ಹೆಬ್ಬಾಳ್‌ಕರ್

ಗೃಹಲಕ್ಷ್ಮೀ ಯೋಜನೆ : Tulu Time | ಎರಡು ತಿಂಗಳ ಗೃಹಲಕ್ಷ್ಮೀ ಹಣವನ್ನು ಮಹಿಳೆಯರ ಖಾತೆಗೆ ಹಾಕಲಿಲ್ಲ ಎಂಬ ವಿಚಾರವಾಗಿ ಸದನದಲ್ಲಿ ದೊಡ್ಡ ಗಲಾಟೆಗೆ ಕಾರಣವಾಗಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ತಪ್ಪು ಮಾಹಿತಿಯನ್ನು ನೀಡಿದ್ದಾರೆ., ಉತ್ತರ ಕೊಡಲೇಬೇಕೆಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದರು. ಅಂತಿಮವಾಗಿ ಈ ಗಲಾಟೆಯಲ್ಲಿ ಸತ್ಯವನ್ನು ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್ ಎರಡು ತಿಂಗಳ ಹಣ ಜಮೆ ಆಗಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಬಾಕಿ ಹಣ ಯಾವಾಗ ಜಮೆ ಆಗುತ್ತದೆ ಎಂಬುದಾಗಿ ಸದನದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇತ್ತು. ಮೋಸ, ದಿವಾಳಿ ನಡೆಯುತ್ತಿದೆ. ಎಲ್ಲಿ ಹೋಯಿತು 5 ಸಾವಿರ ಕೋಟಿ ಎಂಬುದಾಗಿ ವಿಪಕ್ಷಗಳು ಪ್ರಶ್ನೆಯನ್ನು ಮಾಡುತ್ತಲೇ ಇದ್ದರು.

ಎರಡು ತಿಂಗಳ ಹಣ ಜಮೆಯಾಗಿಲ್ಲ ;

ಆಗಸ್ಟ್ ವರೆಗೆ ಹಣ ಜಮೆ ಆಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದರು. ಹಣ ಜಮೆ ಆಗಿದ್ಯಾ ಎಂದು ರಿಯಾಲಿಟಿ ಚೆಕ್ ಮಾಡಿದಾಗ ಸದನದಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಬಿಜೆಪಿ ನಾಯಕರು ಪ್ರಶ್ನೆ ಮೇಲೆ ಪ್ರಶ್ನೆಯನ್ನು ಮಾಡುತ್ತಿದ್ದರು. ಕೊನೆಗೂ ಎರಡು ತಿಂಗಳ ಹಣ ಜಮೆಯಾಗಿಲ್ಲ ಎಂಬುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಸತ್ಯವನ್ನು ಒಪ್ಪಿಕೊಂಡಿದ್ದರು. ಈ ಸಲುವಾಗಿ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಸಮಸ್ಯೆಯನ್ನು ಬಗೆಹರಿಸುತ್ತೇವೆ. ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಈ ವಿಷಯವನ್ನು ಆದಷ್ಟು ಬೇಗ ಪರಿಹರಿಸುವುದಾಗಿ ತಿಳಿಸಿದ್ದಾರೆ.

ವಿಷಾದ ಅಲ್ಲ ಮೊದಲು ಕ್ಷಮೆ ಕೇಳಲಿ ;

ಹಣವನ್ನು ಬೇರೆ ಕಡೆಗೆ ವರ್ಗಾಯಿಸಲಾಗಿಲ್ಲ. ಹಾಗೆ ದುರುಪಯೋಗವೂ ಆಗಿಲ್ಲ‌. ಎರಡು ತಿಂಗಳ ಹಣ ಪಾವತಿಯಲ್ಲಿ ವ್ಯತ್ಯಯವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಲಾಗುವುದು. ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಹೀಗೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಬಗ್ಗೆ ಮಾತನಾಡುತ್ತಿರುವಾಗಲೇ ವಿರೋಧ ಪಕ್ಷದವರು ಕ್ಷಮೆ ಕೇಳಬೇಕು ಅಂತ ಹೇಳಿ. ವಿಷಾದ ಅಲ್ಲ ಮೊದಲು ಕ್ಷಮೆ ಕೇಳಲಿ ಎಂದು ಒತ್ತಾಯಿಸಿದ್ದಾರೆ. ಈ ವೇಳೆ ಸದನದಲ್ಲಿ ಹೆಚ್ಚು ಗದ್ದಲ ಎದ್ದಿರುವುದು ವರದಿಯಾಗಿದೆ.

‘Grihalakshmi’ miscalculation causes uproar in the House: Lakshmi Hebbalkar admits mistake – ತುಳು ಟೈಮ್ಸ್

ಇದನ್ನೂ ಓದಿ :ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಧಿಡೀರ್‌ ಏರುಪೇರು!

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/MOqjEYxAJa8?si=2uWsULpUSalxRjy9

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page