ಬೆಂಗಳೂರು : Tulu Times | 2025-26 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಸಲು ಆದೇಶಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸರ್ಕಾರದ ಆದೇಶದಂತೆ ಕಲಬುರಗಿ ಜಿಲ್ಲೆಗೆ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ, ಕಲಬುರಗಿ ಸಂಸ್ಥೆಯನ್ನು ರಾಜ್ಯ ಖರೀದಿ ಸಂಸ್ಥೆಗಳಾಗಿ ನೇಮಿಸಲಾಗಿರುತ್ತದೆ. ಇದೀಗ, ನೋಂದಣಿ ಕಾರ್ಯ ಪ್ರಾರಂಭವಾಗಿದ್ದು, ಮಾರ್ಚ್ 06, 2026 ರವರೆಗೆ ಮುಂದುವರಿಯಲಿದೆ. ರೈತರಿಂದ ಖರೀದಿಸಿದ ಉತ್ಪನ್ನದ ಮೌಲ್ಯವನ್ನು ಡಿಬಿಟಿ ಪೋರ್ಟಲ್ ಮೂಲಕ ಪಾವತಿಸಲಾಗುವುದು ಎಂದು ವರದಿಯಾಗಿದೆ.
ಹೆಚ್ಚಿನ ದರದಲ್ಲಿ ಖರೀದಿ ಕೈಗೊಳ್ಳಲಿದ್ದು, ಜಿಲ್ಲೆಯ ರೈತ ಬಾಂಧವರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಂಡು, ತಮ್ಮ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮತ್ತು ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿರುವ ತೊಗರಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ತಾವು ಬೆಳೆದ ತೊಗರಿಯನ್ನು ನಿಗದಿತ ಅವಧಿಯಲ್ಲಿ ಮಾರಾಟಕ್ಕೆ ನೋಂದಾಯಿಸಿಕೊಂಡು ಮಾರಾಟ ಮಾಡಬೇಕಾಗಿ ಕೋರಲಾಗಿದೆ.
ಬೆಂಬಲ ಬೆಲೆ ಯೋಜನೆಯಡಿ ತೊಗರಿ ಪ್ರತಿ ಕ್ವಿಂಟಾಲ್ ₹ 8,000 ದರದಲ್ಲಿ ಪ್ರತಿ ಎಕರೆಗೆ 4 ಕ್ವಿಂಟಾಲ್ ನಂತೆ, ರೈತರು ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಲ್ಲಿ ತೊಗರಿಯನ್ನು ಖರೀದಿಸಲು ಅನುಮತಿ ನೀಡಲಾಗಿರುತ್ತದೆ. ಸರ್ಕಾರದ ಆದೇಶದಂತೆ ಕಲಬುರಗಿ ಜಿಲ್ಲೆಗೆ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ, ಕಲಬುರಗಿ ಸಂಸ್ಥೆಯನ್ನು ರಾಜ್ಯ ಖರೀದಿ ಸಂಸ್ಥೆಗಳಾಗಿ ನೇಮಿಸಲಾಗಿರುತ್ತದೆ. Order for purchase of togari under government support price scheme – ತುಳು ಟೈಮ್ಸ್
ಇದನ್ನೂ ಓದಿ :ಒಂದೇ ದಿನ ಶಿಕ್ಷಕಿ ಸೇರಿದಂತೆ ಮೂವರು ಹೃದಯಾಘಾತಕ್ಕೆ ಬಲಿ!
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/MOqjEYxAJa8?si=ZnMAz2_LgUHSxqn9











