ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಪುತ್ತೂರು

ಕೋಳಿ ಅಂಕಕ್ಕೆ ಪ್ರಚೋದನೆ: ಅಶೋಕ್ ರೈ ವಿರುದ್ಧ ಎಫ್‌ಐಆರ್

ದಕ್ಷಿಣ ಕನ್ನಡ:‌ Tulu Times | ಕೋಳಿ ಅಂಕಕ್ಕೆ ಪ್ರಚೋದನೆ  ನೀಡಿದ ಆರೋಪದಡಿ ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಾನೂನು ಬಾಹಿರವಾಗಿ ಕೋಳಿ ಅಂಕ 

ಕೋಳಿ ಅಂಕಕ್ಕೆ ಬಳಸಿದ್ದ 22 ಹುಂಜಗಳನ್ನು ಹಾಗೂ ಬಾಲುಗಳನ್ನು ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕೇಪು ಗ್ರಾಮದಲ್ಲಿ  ವಶಪಡಿಸಿಕೊಳ್ಳಲಾಗಿದೆ.  ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ, 6 ಜನರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು ಕೋಳಿ ಅಂಕ ನಡೆಸಲು ಅವಕಾಶ ಮಾಡಿಕೊಟ್ಟ ಪುತ್ತೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರು ಕೋಳಿ ಅಂಕದ ಸ್ಥಳದಲ್ಲಿ ಹಾಜರಿದ್ದ ಹಾಗೂ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಜನರಿಗೆ ಪ್ರಚೋದನೆ ನೀಡಿರುವ ಆರೋಪ ಕೇಳಿಬಂದಿದೆ.  ಇನ್ನು ಕಾನೂನು ಬಾಹಿರ ಕೃತ್ಯಕ್ಕೆ ಅನುವು ಮಾಡಿಕೊಟ್ಟ ಆರೋಪದ ಮೇಲೆ ಮರಳೀಧರ ರೈ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯಾವುದೇ ಪರವಾನಗಿ ಪಡೆಯದೇ  ಕೋಳಿ ಅಂಕ ನಡೆಸಲು ಮರಳೀಧರ ರೈ ಜಾಗ ಕೊಟ್ಟಿದ್ದರು ಎನ್ನಲಾಗಿದೆ.

ಖಾಸಗಿ ಬಸ್ ಬೈಕಿಗೆ ಢಿಕ್ಕಿಯಾಗಿ ಬೈಕ್ ಸವಾರ ಕೊನೆಯುಸಿರು

ಪ್ರತ್ಯೇಕ ಪ್ರಕರಣದಲ್ಲಿ, ಖಾಸಗಿ ಬಸ್ ಬೈಕಿಗೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಡಿ.19 ಶುಕ್ರವಾರದಂದು ನಡೆದಿದೆ. ಕೊನೆಯುಸಿರೆಳೆದ ಯುವಕನನ್ನು ಪವನ್ ಎಂದು ಗುರುತಿಸಲಾಗಿದೆ

ಅಪಘಾತ ಸಂಭವಿಸಿದ್ದು ಹೇಗೆ..?

ಬೈಕ್ ಸವಾರ ಪವನ್ ತನ್ನ ಬೈಕಿನಲ್ಲಿ ಬಾರ್ಕೂರು ಕಡೆಯಿಂದ ಬ್ರಹ್ಮಾವರ ಕಡೆ ರಸ್ತೆಯಲ್ಲಿ ಬಂದು, ಬಲಗಡೆ ಇಂಡಿಕೇಟರ್ ಹಾಕಿ ಅಂಬಿಕಾ ಫಾರಂ ಬಳಿಯ ಅಮ್ಮ ಶಾಮಿಯಾನ್ ಅಂಗಡಿ ಕಡೆಗೆ ತಿರುಗಿಸುತ್ತಿದ್ದರು. ಆಗ ಅದೇ ರಸ್ತೆಯಲ್ಲಿ ಬರುತ್ತಿದ್ದಂತಹ ಬಸ್, ಹಿಂದಿನಿಂದ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ನೆಲಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದೆ. ಬೈಕ್ ಸವಾರ ಪವನ್, ಬಸ್ಸಿಗೆ ಬಡಿದು ರಸ್ತೆಗೆ ಬಿದ್ದು ಉರುಳಿಕೊಂಡು ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದ್ದಾರೆ. ಬೈಕ್ ಅನ್ನು ಬಸ್ 50 ಅಡಿ ದೂರ ರಸ್ತೆಯಲ್ಲಿ ಎಳೆದುಕೊಂಡು ಹೋಗಿದೆ. ಪವನ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

incitement-to-cock-fight- fir-against-ashok-rai- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 172

You cannot copy content of this page