ಕರ್ನಾಟಕ: Tulu Times | ರಾಜ್ಯಾದ್ಯಂತ ಪಲ್ಸ್ ಡಿ.21 ರಿಂದ 24 ವರೆಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಜಿಲ್ಲೆಗಳ 33,258 ಬೂತ್‌ಗಳಲ್ಲಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ರಾಜ್ಯ ಸರಕಾರ ನೀಡುತ್ತಿದೆ.
ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗಿದ್ದು, ಪೋಲಿಯೋ ಬೂತ್‌ಗಳಲ್ಲಿ ಹಾಗೂ ನಂತರದ 3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶ, ನಗರ ಪ್ರದೇಶದ ವಲಸಿಗ ಸಮುದಾಯದ ಮತ್ತು ಸ್ಲಂಗಳಲ್ಲಿ ವಾಸಿಸುವ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ.
ಒಟ್ಟು ಎಷ್ಟು ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ..?
ರಾಜ್ಯದಲ್ಲಿ 33,258 ಬೂತ್‌ಗಳನ್ನು ಸ್ಥಾಪಿಸಲಾಗಿದೆ. 62,40,114 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಇಟ್ಟುಕೊಳ್ಳಲಾಗಿದ್ದು, 1,030 ಸಂಚಾರಿ ತಂಡ, 2,096 ಟ್ರಾನ್ಸಿಟ್ ತಂಡ, 1,13,115 ಲಸಿಕಾ ಕಾರ್ಯಕರ್ತರು, 7,322 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ಸರಕಾರ ತಿಳಿಸಿದೆ.
ಬೂತ್‌ಗಳನ್ನು ಸ್ಥಾಪಿಸಿ ಪೋಲಿಯೋ ಲಸಿಕೆ!
ರೈಲ್ವೆ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿಯೂ ಬೂತ್‌ಗಳನ್ನು ಸ್ಥಾಪಿಸಿ ಪೋಲಿಯೋ ಲಸಿಕೆ ನೀಡಲು ಕ್ರಮ ವಹಿಸಲಾಗಿದ್ದು, ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲದೆ, ಹಳ್ಳಿಗಳು, ಗುಡ್ಡಗಾಡು ಪ್ರದೇಶ, ಕೊಳಚೆ ಪ್ರದೇಶಗಳು, ವಲಸೆ ಪ್ರದೇಶಗಳು, ತೋಟದ ಮನೆಗಳು, ನಗರ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ಲಸಿಕೆ ನೀಡಲು ವಿಶೇಷ ಗಮನ ನೀಡಲಾಗಿದೆ.
ಪಲ್ಸ್ ಪೋಲಿಯೋ ಲಸಿಕೆ ನೀಡುವ ಉದ್ದೇಶವೇನು..?
ಪಲ್ಸ್ ಪೋಲಿಯೋ ಅಭಿಯಾನವು ಪೋಲಿಯೋ ಮುಕ್ತ ಸಮಾಜವನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ. 2026 ರ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನವು ಭಾರತದಾದ್ಯಂತ ನಡೆಯುತ್ತಿದೆ, ಪ್ರಮುಖವಾಗಿ ಡಿಸೆಂಬರ್ 21, 2025 ರಂದು ರಾಷ್ಟ್ರೀಯ ಅಭಿಯಾನ ಪ್ರಾರಂಭವಾಗಿದೆ, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುತ್ತಿದೆ, ಮತ್ತು ಈ ಅಭಿಯಾನವು 2026ರಲ್ಲೂ ಮುಂದುವರಿಯಲಿದೆ, ಪೋಲಿಯೋ ನಿರ್ಮೂಲನೆ ಗುರಿಯೊಂದಿಗೆ ಮನೆ ಮನೆಗೆ ಲಸಿಕೆ ತಲುಪಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಲಸಿಕಾ ಕೇಂದ್ರಗಳಿಗೆ ಕರೆತಂದು ಅಥವಾ ಆರೋಗ್ಯ ಕಾರ್ಯಕರ್ತರು ಮನೆಗೆ ಬಂದಾಗ ಲಸಿಕೆ ಹಾಕಿಸಬೇಕು. ಪೋಷಕರು ಮಕ್ಕಳಿಗೆ ಲಸಿಕೆ ಹಾಕುವುದರ ಬಗ್ಗೆ ಯೋಚಿಸಬೇಕಾದ ವಿಚಾರಗಳೇನು ಅನ್ನೋದನ್ನು ನೋಡೋದಾದ್ರೆ, ನಿಮ್ಮ ಹತ್ತಿರದ ಪೋಲಿಯೋ ಬೂತ್‌ಗೆ ಭೇಟಿ ನೀಡಿ, ಮನೆಗೆ ಬರುವ ಆರೋಗ್ಯ ಕಾರ್ಯಕರ್ತರಿಗೆ ಸಹಕರಿಸಿ, ಯಾವುದೇ ಮಗುವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ.
Pulse polio vaccination from December 21 to 24 across the state- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











