Udupi: ಶ್ರೀ ಕೃಷ್ಣ ಮಠಕ್ಕೆ ಸಾಲು ಸಾಲು ಗಣ್ಯರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಚಿತ್ರನಟರು, ಕ್ರೀಡಾಪಟುಗಳು, ಸಂಘಟನೆಯ ಪ್ರಮುಖರು ಭೇಟಿಯಿತ್ತು ದೇವರ ದರ್ಶನ ಮಾಡುತ್ತಿದ್ದಾರೆ.
ಒಲಿಂಪಿಕ್ ಪದಕ ವಿಜೇತೆ, ಖ್ಯಾತ ಟೆನ್ನಿಸ್ ಆಟಗಾರ್ತಿ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೈನಾ ನೆಹ್ವಾಲ್ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಇವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನವಗ್ರಹ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದ ಟೆನ್ನಿಸ್ ತಾರೆ ಸೈನಾ, ಭಾವಪರವಶರಾದರು. ನಂತರ ಪರ್ಯಾಯ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶೀಂದ್ರ ತೀರ್ಥ ಶ್ರೀಗಳಿಂದ ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ಅನುಗ್ರಹ ಪಡೆದುಕೊಂಡರು.

ಇದನ್ನೂ ಓದಿ: Kasargod: ಆತ್ಮಹತ್ಯೆಗೆ ಯತ್ನಿಸಿದ್ದಾಕೆ ಅಪಘಾತದಲ್ಲಿ ಮೃತ್ಯು
ವೀಡಿಯೋ ಸುದ್ದಿಗಳನ್ನು ವೀಕ್ಷಿಸಲು ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ Subscribe ಮಾಡಿ:https://www.youtube.com/watch?v=JJgZvG3Eep4











