ವಿಟ್ಲ: Tulu Times | ಬಾಂಗ್ಲಾ ದೇಶದ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಾಯ ಮಾಡಿದ ಪೊಲೀಸ್ ಪೇದೆ ಪ್ರದೀಪ್ ಎಂಬಾತ ನಂತರ ಸಾಕ್ಷ್ಯ ನಾಶ ಮಾಡಿದ ಪ್ರಕರಣ ಸಂಬಂಧ ನಕಲಿ ದಾಖಲೆ ನೀಡಿ ಪಾಸ್ ಪೋರ್ಟ್ ಮಾಡಿಸಿಕೊಂಡ ಶಂಕಿತ ಬಾಂಗ್ಲಾದೇಶ ಪ್ರಜೆ ಶಕ್ತಿ ದಾಸ್ ಮತ್ತು ವಿಟ್ಲ ಪೊಲೀಸ್ ಪೇದೆ ಪ್ರದೀಪ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಸಾಬು ಮಿರ್ಜಿ ಎಂಬವರು ನೀಡಿದ ದೂರಿನ ಮೇರೆಗೆ ದೂರು ನೀಡಲಾಗಿದೆ.
ಇದನ್ನೂ ಓದಿ: ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ
ಬಾಂಗ್ಲಾದೇಶ ಪ್ರಜೆ ಶಕ್ತಿ ದಾಸ್ ಎಂಬಾತ 2025 ಫೆಬ್ರವರಿ ತಿಂಗಳಲ್ಲಿ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ವೆರಿಫಿಕೇಶನ್ ಮಾಡುವಾಗ ವಿಳಾಸ ತಾಳೆಯಾಗದಿದ್ದರಿಂದ ಬೀಟ್ ಸಿಬ್ಬಂದಿ ಸಾಬು ಮಿರ್ಜ ಅವರು ಪರಿಶೀಲನೆ ಮಾಡಿ ನಾ-ಶಿಫಾರಸ್ಸು ಮಾಡಿರುತ್ತಾರೆ. ಶಕ್ತಿ ದಾಸ್ 2025 ಜೂನ್ ತಿಂಗಳಲ್ಲಿ ಮರು ಅರ್ಜಿ ಸಲ್ಲಿಸಿದಾಗ ಆರೋಪಿ ಪೊಲೀಸ್ ಸಿಬ್ಬಂದಿ ಪ್ರದೀಪ್ ಅರ್ಜಿದಾರ ವಿಳಾಸದ ಬೀಟ್ ಸಿಬ್ಬಂದಿ ಸಾಬಿ ಮಿರ್ಜಿ ಎಂಬವರ ಹೆಸರಿನಲ್ಲಿ ವರದಿ ತಯಾರಿಸಿ ಪೋರ್ಜರಿ ಸಹಿ ಹಾಕಿ ಮೇಲಾಧಿಕಾರಿಗಳಿಂದ ಶಿಫಾರಸ್ಸು ಮಾಡಿಸಿ ಕಳುಹಿಸಿ ಕೊಟ್ಟಿರುತ್ತಾರೆ.
ಇದನ್ನೂ ಓದಿ: ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್
ನಕಲಿ ದಾಖಲೆಗಳನ್ನು ನೀಡಿ ಪಾಸ್ ಪೋರ್ಟ್ ಪಡೆದ ಶಂಕಿತ ಬಾಂಗ್ಲಾದೇಶದ ಪ್ರಜೆ ಶಕ್ತಿ ದಾಸ್ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ತನಿಖೆ ಮಾಡಿದ ವಿಟ್ಲ ಪೊಲೀಸರು ಆರೋಪಿ ಪೊಲೀಸ್ ಸಿಬ್ಬಂದಿ ಪ್ರದೀಪ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೀಗ, ನ್ಯಾಯಾಲಯ ಆರೋಪಿ ಪೇದೆ ಪ್ರದೀಪ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Vitla: Arrest made for helping Bangladeshi citizen get passport!- ತುಳುಟೈಮ್ಸ್
ಇದನ್ನೂ ಓದಿ: ಚೀನಾದ ಸಾಗರದಲ್ಲಿದೆ 20 ಕೋಟಿ ಟನ್ ಚಿನ್ನ
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











