ಸ್ಯಾಂಡಲ್ ವುಡ್ : Tulu Times | ಕಿಚ್ಚ ಸುದೀಪ್ ಹುಬ್ಬಳ್ಳಿಯಲ್ಲಿ ಸಿನೆಮಾ ವಿಷಯವಾಗಿ ‘ಯುದ್ಧಕ್ಕೆ ಸಿದ್ಧ’ ಎಂಬ ಮಾತಿಗೆ ಪ್ರತಿಯಾಗಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಅದನ್ನು ನಟ ದರ್ಶನ್ ವಿರುದ್ಧವಾಗಿ ಹೇಳಲಾಗಿತ್ತು ಎಂಬುವುದಾಗಿ ಉಲ್ಲೇಖಿಸಿರುವುದನ್ನು ನೋಡಿರುತ್ತೇವೆ. ಆದರೆ ಇದರ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಯುದ್ಧಕ್ಕೆ ಸಿದ್ದ ಮಾತಿಗೆ ಬದ್ಧ’, ಹೊರಗೆ ಒಂದು ಪಡೆ ಯುದ್ಧಕ್ಕೆ ಸಜ್ಜಾಗುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ‘ಮಾರ್ಕ್’ ಸಿನಿಮಾ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ತಮ್ಮ ಹೇಳಿಕೆಯ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದೀಪ್ ಆಡಿದ್ದ ಮಾತು ವೈರಲ್ ಆಗಿ ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದಕ್ಕೆ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಇದ್ದಾಗ ಸದ್ದಿಲ್ಲದೇ ಇರುತ್ತಿದ್ದವರು ಈಗ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದರು. ನಂತರದಲ್ಲಿ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ಯುದ್ಧ ಜಾಲತಾಣದಲ್ಲಿ ಮುಂದುವರೆದಿತ್ತು.
ನಾನು ಯುದ್ಧಕ್ಕೆ ಸಿದ್ದ ಎಂದಿದ್ದು ಚಿತ್ರನಟ ದರ್ಶನ್ ಅವರಿಗಲ್ಲ, ದರ್ಶನ್ ಜೈಲಿಗೆ ಹೋಗುವ ವೇಳೆಯಲ್ಲಿ ಸುಮ್ಮನಿದ್ದ ನಾನು ಈಗ ಯಾಕೆ ಅವರ ವಿರುದ್ಧ ಮಾತನಾಡಲಿ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ ಸುದೀಪ್ ಸ್ಪಷ್ಟನೆ ನೀಡಿದ್ದು, ತಾವು ಮಾತನಾಡಿದ್ದು ಪೈರಸಿ ವಿರುದ್ಧ ಎಂದು ಹೇಳಿದ್ದಾರೆ. ಈಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಸುದೀಪ್, ನಮ್ಮ ಸಿನಿಮಾ ಪೈರಸಿ ಮಾಡಲು ದೊಡ್ಡ ಯೋಜನೆ ಸಿದ್ಧವಾಗುತ್ತಿರುವ ವಿಚಾರ ನಮಗೆ ಗೊತ್ತಾಯಿತು. ಪೈರಸಿ ಬಗ್ಗೆ ಸುಮ್ಮನಿದ್ದು ಸಾಕಾಗಿದೆ. ಅದರ ವಿರುದ್ಧ ಹೋರಾಟಕ್ಕೆ ಯೋಚಿಸುತ್ತಿದ್ದೇನೆ. ಅದೇ ರೀತಿ ಇತರರ ಬಗ್ಗೆ ಮಾತನಾಡಬೇಕಾಗಿ ಬಂದಾಗ ನಾನು ನೇರವಾಗಿಯೇ ಮಾತನಾಡುತ್ತೇನೆ. ವಿಜಯಲಕ್ಷ್ಮಿ ಅವರು ನನ್ನ ಹೆಸರನ್ನು ಪ್ರಸ್ತಾಪಿಸಿಲ್ಲ. ವೇದಿಕೆ ಹತ್ತಿದವರು, ಮೀಡಿಯಾದಲ್ಲಿ ಮಾತನಾಡಿದವರು ಸಾಕಷ್ಟು ಮಂದಿ ಇದ್ದಾರೆ. ನನ್ನ ಬಗ್ಗೆಯೇ ಮಾತನಾಡಿದ್ದಾರೆ ಎಂದುಕೊಳ್ಳುವುದು ತಪ್ಪು ಎಂದು ಸ್ಪಷ್ಟನೆ ನೀಡಿದರು. Kiccha Sudeep clarifies his statement ‘Ready for war…’ – ತುಳು ಟೈಮ್ಸ್
ಇದನ್ನೂ ಓದಿ :ವಿಟ್ಲ: ಬಾಂಗ್ಲಾ ದೇಶದ ಪ್ರಜೆಗೆ ಪಾಸ್ ಪೋರ್ಟ್ ಗೆ ಸಹಾಯ ಮಾಡಿದಾದ ಅರೆಸ್ಟ್ !
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/FGONMu5gqxQ?si=QFAo0VHBqtafBDpX











