Surathkal: ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಶ್ವಾನಗಳ ದಾಳಿಯ ಪರಿಣಾಮ ಬಾಲಕಿ ಗಾಯಗೊಂಡಿದ್ದಾಳೆ. ಈ ಘಟನೆ ಅ. 15ರ ಬುಧವಾರ ಸಂಜೆ ಕಾನ ಮೈದಗುರಿಯಲ್ಲಿ ನಡೆದಿದೆ.
ಸುರತ್ಕಲ್ ಕಾನ ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ. ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ತೆರಳುತ್ತಿದ್ದಳು.
ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬಂದ ಬೀದಿನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ ಬಾಲಕಿ ಮನೆಗೆ ಹಿಂದಿರುಗಿ ಓಡಿದ್ದಾಳೆ. ಓಡುವ ಭರದಲ್ಲಿ ಕೈಯ್ಯಲ್ಲಿದ್ದ ಹಣ ಕೆಳಗೆ ಬಿದ್ದಿದೆ. ಅದನ್ನು ಹೆಕ್ಕುವಷ್ಟರಲ್ಲಿ ಬೀದಿನಾಯಿಗಳು ಬಾಲಕಿಯ ಮೇಲೆ ದಾಳಿ ನಡೆಸಿವೆ. ದಾಳಿಯಿಂದ ಬಾಲಕಿಯ ಕೈ, ಕಾಲಿಗೆ ಕಚ್ಚಿದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Udupi ಶ್ರೀ ಕೃಷ್ಣ ಮಠಕ್ಕೆ ಟೆನಿಸ್ ತಾರೆ ಸೈನಾ ನೆಹ್ವಾಲ್ ಭೇಟಿ
ವೀಡಿಯೋ ಸುದ್ದಿಗಳನ್ನು ವೀಕ್ಷಿಸಲು ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ Subscribe ಮಾಡಿ:https://www.youtube.com/watch?v=JJgZvG3Eep4











