ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಸುಳ್ಯ

ಸುಳ್ಯದ ಯುವತಿಯೋರ್ವಳು ಮೆದುಳಿನ ರಕ್ತ ಸ್ರಾವದಿಂದ ಮೃತ್ಯು

ಸುಳ್ಯ: Tulu Times | ಸುಳ್ಯದ ಯುವತಿಯೋರ್ವಳು ಮೆದುಳಿನ ತೀವ್ರ ರಕ್ತ ಸ್ರಾವದಿಂದ ಮೃತಪಟ್ಟಿರುವ ಘಟನೆ ನಡೆದಿದೆ.  ಇದೀಗ ಮೃತ ಯುವತಿಯ ಕುಟುಂಬಸ್ಥರು ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆ ಅಂಗಾಂಗಗಳನ್ನು ದಾನ ಮಾಡಿ,ಮಾದರಿಯಾಗಿದ್ದಾರೆ.

ಘಟನೆ ನಡೆದದ್ದು ಹೇಗೆ..?
ಮಮತಾ ಎಂಬವರ ಪುತ್ರಿ ಸಿಂಧು ಮೃತಪಟ್ಟ ಯುವತಿ. ಪುತ್ತೂರು ಆದರ್ಶ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದ ಸಿಂಧು ಡಿ. 16 ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್ ನಲ್ಲಿ ಬರುತ್ತಿದ್ದ ವೇಳೆ ಅಡ್ಕಾರ್ ನಲ್ಲಿ ಬಸ್ ನ ಸೀಟಿನಿಂದ ಜಾರಿ ಬಿದ್ದಿದ್ದಾರೆ.  ನಂತರ,  ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ನರದ ಸಮಸ್ಯೆ ಉಂಟಾಗಿರುವುದು ತಿಳಿದುಬಂತು. ಮರುದಿನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಫರ್ಸ್ಟ್ ನ್ಯೂರೋ ಆಸ್ಪತ್ರೆಗೆ ಕೊಂಡೊಯ್ದಲಾಗಿತ್ತು. ಮೆದುಳಿನ ರಕ್ತ ಸ್ರಾವ ಉಂಟಾದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಗಿತ್ತು. ನಂತರ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು ಕೋಮಾಗೆ ಜಾರಿದ್ದರು.

ಇದನ್ನೂ ಓದಿ: ಮಾರ್ಕ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ..?

ಯುವತಿಯ ಅಂಗಾಂಗ ದಾನ ಮಾಡಲು ನಿರ್ಧಾರ!

ಇದೀಗ ಈಕೆಯ ಕುಟುಂಬಸ್ಥರು, ಅಂಗಾಂಗಗಳನ್ನು ದಾನ ಮಾಡಲು ಮನೆಯವರು ನಿರ್ಧರಿಸಿದ್ದಾರೆ. ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯಗೊಂಡರೂ, ಯಂತ್ರಗಳ ಸಹಾಯದಿಂದ ಹೃದಯ, ಶ್ವಾಸಕೋಶ, ಕಿಡ್ನಿ, ಲಿವರ್, ಕಣ್ಣುಗಳನ್ನು ಉಳಿಸಬಹುದಾಗಿದೆ. ಈ ಹಿನ್ನೆಲೆ ತಾಯಿ ಮಮತಾ ಅವರು ಮನೆಯವರೊಂದಿಗೆ ಚರ್ಚಿಸಿ ಅಂಗಾಂಗಗಳನ್ನು ದಾನಮಾಡುವ ನಿರ್ಧಾರ ಮಾಡಿದರು. ಅದರಂತೆ ಮೈಸೂರಿನ ಅಪೊಲೋ ಆಸ್ಪತ್ರೆ, ನಿಟ್ಟೆ, ಎ.ಜೆ. ಮತ್ತು ಕೆ.ಎಂ.ಸಿ. ಆಸ್ಪತ್ರೆಗಳಿಗೆ ಅಂಗಾಂಗ ದಾನ ಮಾಡಲಾಗಿತ್ತು.  22 ವರ್ಷ ಸಿಂಧು ಅವರಿಗೆ ತಾಯಿ, ಸಹೋದರಿ ಇದ್ದಾರೆ. ಇವರು, ಸುಳ್ಯದ ಶಾಂತಿನಗರ, ಜಟ್ಟಿಪ್ಪಳ್ಳ ಗಳಲ್ಲಿ ಪತಿ, ಮಕ್ಕಳೊಂದಿಗೆ ವಾಸ್ತವ್ಯದಲ್ಲಿದ್ದರು. ಮಕ್ಕಳಿಗೆ ಶಿಕ್ಷಣ ಕೊಡಿಸಿ ಓರ್ವಳಿಗೆ ಮದುವೆ ಮಾಡಿಸಿದ್ದು, ಸಿಂಧು ಅವರಿಗೆ ಉದ್ಯೋಗ ಕೊಡಿಸಿದ್ದಾರೆ. ಈ ದುಃಖದ ಸನ್ನಿವೇಶದಲ್ಲೂ ಮಗಳ ಅಂಗಾಂಗ ದಾನ ಮಾಡುವ ಮೂಲಕ ಮತ್ತೊಬ್ಬರಿಗೆ ಬದುಕು ನೀಡಿದ್ದಾರೆ. ಯುವತಿಯ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

A young woman from Sullia died of a brain hemorrhage- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 172

You cannot copy content of this page