ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮೈಸೂರು, ಬೆಂಗಳೂರಿನಲ್ಲಿ ಕೆಲಸ ಅರಸುತ್ತಿರುವ ಅಭ್ಯರ್ಥಿಗಳಿಗಾಗಿ ಇಲ್ಲಿದೆ ಉದ್ಯೋಗ ಮಾಹಿತಿ

ಬಿಇಎಮ್ ಎಲ್ : Tulu Times | ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಭಾರತ ಸರ್ಕಾರದ ಅಧೀನದಲ್ಲಿರುವ ಪ್ರಮುಖ ಸಾರ್ವಜನಿಕ ವಲಯದ ಸಂಸ್ಥೆಯಾಗಿದ್ದು, ಮುಖ್ಯವಾಗಿ ಭೂಮಿ ತೋಡುವ ಯಂತ್ರೋಪಕರಣಗಳು, ಗಣಿಗಾರಿಕಾ ಉಪಕರಣಗಳು, ರಕ್ಷಣಾ ಕ್ಷೇತ್ರದ ವಾಹನಗಳು ಹಾಗೂ ರೈಲು ಮತ್ತು ಮೆಟ್ರೋ ಕೋಚ್‌ಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿದೆ. ದೇಶದ ಕೈಗಾರಿಕಾ, ರಕ್ಷಣಾ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಬಿಇಎಮ್‌ಎಲ್ ಮಹತ್ವದ ಪಾತ್ರ ವಹಿಸಿದೆ.

ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ;

ಇದೀಗ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಮೈಸೂರು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ ಎಂಬುವುದು ವರದಿಯಾಗಿದೆ.

BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿಎಂಎ, ಪದವಿ, ಬಿಇ/ಬಿಟೆಕ್, ಎಂಬಿಎ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, ಎಂಎ, ಪಿಜಿಡಿಸಿ ಅನ್ನು ಪೂರ್ಣಗೊಳಿಸಿರಬೇಕು. ಬಿಇಎಮ್ ಎಲ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. ಇದರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಗೆ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿದರೆ ಅಪ್ಲೈ ಆಗುತ್ತದೆ. ಇದರಲ್ಲಿ ಸಂದರ್ಶನಗಳಿದ್ದು, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮುಖಾಂತರ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.

Here is job information for candidates looking for work in Mysore and Bangalore – ತುಳು ಟೈಮ್ಸ್

ಇದನ್ನೂ ಓದಿ :ಮಾರ್ಕ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ..?

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/c3Lml4k6wi4?si=Y2Bvz2kVYsMjARVU

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page