ಬೆಂಗಳೂರು : Tulu Times | ಹೆಣ್ಣು ಮಕ್ಕಳು ಬಟ್ಟೆ ಬದಲಿಸುವ ಸಂದರ್ಭದಲ್ಲಿ ಚಿತ್ರೀಕರಣ ಮಾಡುವುದು ಕಾನೂನು ಬಾಹಿರವೆಂದು ಅರಿತಿದ್ದರೂ, ಇಲ್ಲೊಬ್ಬ ಕಿಡಿಗೇಡಿ ಸಿಬ್ಬಂದಿ, ತಮ್ಮ ಸಹದ್ಯೋಗಿಗಳು ಬಟ್ಟೆ ಬದಲಿಸುವ ವೀಡಿಯೋ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು… ನಾಗರಭಾವಿಯ ಖಾಸಗಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ, ಲೇಡಿ ನರ್ಸ್‌ಗಳು ಬಟ್ಟೆ ಬದಲಿಸುವ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ಸಿಬ್ಬಂದಿಯೊಬ್ಬ ಜೈಲು ಪಾಲಾಗಿದ್ದಾನೆ.
ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ಈತ ಮಹಿಳಾ ಸಹೋದ್ಯೋಗಿಗಳು ಬಟ್ಟೆ ಬದಲಿಸುವ ಕೊಠಡಿಯಲ್ಲಿ ರಹಸ್ಯವಾಗಿ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಿಸುತ್ತಿದ್ದ ಎನ್ನಲಾಗಿದೆ. ಆತನ ಚಲನವಲನ ಕಂಡ ನರ್ಸ್ ಒಬ್ಬರು, ಆತ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿರುವುದನ್ನು ರೆಡ್‌ಹ್ಯಾಂಡ್ ಆಗಿ ಪತ್ತೆ ಹಚ್ಚಿದ್ದಾರೆ. ತಕ್ಷಣವೇ ಈ ಕುರಿತು ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದಾರೆ.
ಕಳೆದ ಒಂದು ವರ್ಷದಿಂದ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದಾತನನ್ನು ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಬಯಲಿಗೆ ಬರುತ್ತಲೇ ಘಟನೆಯ ಗಂಭೀರತೆಯನ್ನು ಅರಿತ ವೈದ್ಯರು ಕೂಡಲೇ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವೈದ್ಯರ ದೂರಿನನ್ವಯ ಪೊಲೀಸರು ಸುವೆಂದು ಮೊಹಂತ ಎಂಬಾತನನ್ನು ಬಂಧಿಸಿ, ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈತನ ಮೊಬೈಲ್ ವಶಪಡಿಸಿಕೊಂಡ ಪೋಲಿಸರು ತನಿಖೆ ನಡೆಸುತ್ತಿರುವುದು ವರದಿಯಾಗಿದೆ.
Staff member arrested for videotaping lady nurses changing clothes – ತುಳು ಟೈಮ್ಸ್
ಇದನ್ನೂ ಓದಿ :ಅಬ್ಬಬ್ಬಾ ಗಗನಕ್ಕೇರಿದ ಮೀನಿನ ಬೆಲೆ..ಕೆ.ಜಿ. ಗೆ ಎಷ್ಟು ಅಂತೀರಾ..?
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/c3Lml4k6wi4?si=Y2Bvz2kVYsMjARVU











