ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆ : ‘ಆರೋಗ್ಯಕ್ಕಾಗಿ ಓಟ’

ಸುಳ್ಯ : Tulu Times | ಕೆವಿಜಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಪ್ರಯುಕ್ತ ಡಿ.26ರಂದು ಮ್ಯಾರಥಾನ್‌ ಸ್ಪರ್ಧೆ ನಡೆಯಿತು. ಮ್ಯಾರಥಾನ್‌ನ ವಿವಿಧ ವಿಭಾಗದಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ದಶಮಾನೋತ್ಸವದ ಪೂರ್ವಭಾವಿಯಾಗಿ ಸಂಸ್ಥಾಪಕರಾದ ಡಾ.ಕುರುಂಜಿ ವೆಂಕಟರಮಣ ಗೌಡರ 97ನೇ ಜನ್ಮದಿನಾಚರಣೆಯ ಪ್ರಯುಕ್ತ ‘ಆರೋಗ್ಯಕ್ಕಾಗಿ ಓಟ’ ಎಂಬ ಮ್ಯಾರಥಾನ್ ಆಯೋಜಿಸಲಾಗಿತ್ತು. ಸ್ಪರ್ಧೆಯ ಕೊನೆಯಲ್ಲಿ ವಿಜೇತರಿಗೆ ಬಹುಮಾನವನ್ನೂ ವಿತರಿಸಲಾಯಿತು.

ಈ ಸಂದರ್ಭ ವಿಜೇತರಿಗೆ ಬಹುಮಾನ ವಿತರಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಅಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಮಾತನಾಡಿ, ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಇಂದು ಜಾಗತಿಕ ಮಟ್ಟದಲ್ಲಿ ಬೆಳೆದಿದೆ. ನಗರಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶವಾದ ಸುಳ್ಯದಲ್ಲಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.

ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಪ್ರಧಾನ ಕಾರ್ಯದರ್ಶಿ ಡಾ.ಜ್ಯೋತಿ ಆರ್.ಪ್ರಸಾದ್ ಮಾತನಾಡಿ, ‘ಪ್ರತೀ ವರ್ಷ ಕೆವಿಜಿ ಹುಟ್ಟು ಹಬ್ಬದ ದಿನ ಏನಾದರೊಂದು ವಿಶೇಷ ಈವೆಂಟ್ ಮಾಡಬಹುದು. ಮ್ಯಾರಥಾನ್ ಪ್ರತಿ ವರ್ಷ ಮಾಡಿದರೆ ಉತ್ತಮ. ಆರೋಗ್ಯಕ್ಕೆ ಎಲ್ಲರೂ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸುಳ್ಯ ಪೊಲೀಸ್‌ ಉಪನಿರೀಕ್ಷ ಸಂತೋಷ್ ಬಿ.ಪಿ. ವಿದ್ಯಾರ್ಥಿಗಳಿಗೆ ಉತ್ಸಾಹದ‌ ಮಾತುಗಳನ್ನಾಡಿದರು. ಈ ಸಂದರ್ಭ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಕಾರ್ಯನಿರ್ವಾಹಕ ನಿರ್ದೇಶಕರಾದ ಮೌರ್ಯ ಆ‌ರ್.ಕುರುಂಜಿ, ಕಮಿಟಿ ಬಿ ನಿರ್ದೇಶಕಿ ಡಾ.ಅಭಿಜ್ಞಾ, ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶೋಧ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ. ಆರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರಾಜೇಶ್, ಅಕ್ಷತಾ, ಪ್ರಶಾಂತ್, ಆಶಾ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಾಚಾರ್ಯರು ಯಶೋಧ ರಾಮಚಂದ್ರ ಸ್ವಾಗತಿಸಿ, ಅಕಾಡೆಮಿ ಕಮಿಟಿ ಬಿ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ವಂದಿಸಿದರು. ಮಲ್ಲಿಕಾ ಹಾಗೂ ರೀತಾ ಕಾರ್ಯಕ್ರಮ ನಿರೂಪಿಸಿದರು.

Marathon competition held in Sullia: ‘Running for health’ – ತುಳು ಟೈಮ್ಸ್

ಇದನ್ನೂ ಓದಿ :ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಮಧ್ಯೇ ಏನೂ ಇಲ್ಲ,ಒಂದೇ ಹೆಲಿಕಾಪ್ಟರ್ ನಲ್ಲಿ ಪ್ರಯಾಣ!?

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/c3Lml4k6wi4?si=Y2Bvz2kVYsMjARVU

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 6

You cannot copy content of this page