ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಮೋದಿ ಸರ್ಕಾರ ಜೀವನೋಪಾಯದ ಹಕ್ಕು ಕಸಿದಿದೆ: ಪ್ರಿಯಾಂಕ್ ಖರ್ಗೆ

ಕರ್ನಾಟಕ: Tulu Times | ಮೋದಿ ಸರ್ಕಾರ ಸಂಸತ್ತಿನಲ್ಲಿ ಯಾವುದೇ ಚರ್ಚೆ ಮಾಡದೇ ವಿಬಿ ಜಿ ರಾಮ್ ಜಿ ಮಸೂದೆ ಅಂಗೀಕರಿಸಿದ್ದಾರೆ. ಮನರೇಗಾ ಯೋಜನೆ ಕಾಯ್ದೆ ಸುಧಾರಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಇವರು ಸುಧಾರಿಸಿಯೂ ಇಲ್ಲ, ಸಬಲೀಕರಣ ಮಾಡಿಲ್ಲ. ಮನರೇಗಾ ಕಾಯ್ದೆಯನ್ನು ತೆಗೆದು ಹಾಕಿದ್ದಾರೆ.

ಕಳೆದ 19-20 ವರ್ಷಗಳಿಂದ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಜೀವನೋಪಾಯದ ಗ್ಯಾರಂಟಿ ನೀಡಿತ್ತು. ಮೋದಿ ಸರ್ಕಾರ ಈ ಗ್ಯಾರಂಟಿ ಕಸಿದುಕೊಂಡಿದೆ. ಬೇಡಿಕೆ ಆಧಾರಿತ ಯೋಜನೆ, ವಿತರಣೆ ಆಧಾರಿತ ಯೋಜನೆಯಾಗಿದೆ. ಈ ಹಿಂದೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿತ್ತು. ಈಗ ಇದು ಕಾಯ್ದೆಯಾಗಿ ಉಳಿದಿಲ್ಲ. ಇತರೆ ಸರ್ಕಾರಿ ಯೋಜನೆಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ಸುಳ್ಯದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆ : ‘ಆರೋಗ್ಯಕ್ಕಾಗಿ ಓಟ’

ಮೋದಿ ಸರ್ಕಾರ ವಿಬಿ ಜಿ ರಾಮ್ ಜಿ ಬಿಲ್ ತಂರುವ ಮೂಲಕ 3 ಪ್ರಮುಖ ಸಂವಿಧಾನಿಕ ಹಕ್ಕು ಮೊಟಕುಗೊಳಿಸಿದೆ.ಜೀವನೋಪಾಯದ ಹಕ್ಕು ಕಸಿದಿರುವುದು, ಪಂಚಾಯಿತಿಗಳ ಹಕ್ಕು ಕಸಿದಿದೆ. ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆಯದೇ ರಾಜ್ಯದ ಮೇಲೆ ಆರ್ಥಿಕ ಹೊರೆ ಹಾಕಿದ್ದಾರೆ.

ಮನರೇಗಾದಲ್ಲಿ ಉದ್ಯೋಗದ ಹಕ್ಕು ಎಂದು ಇತ್ತು. ಹೊಸ ಯೋಜನೆಯಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಉದ್ಯೋಗ ಎಂದು ಮಾಡಲಾಗಿದೆ. ಈ ಮಸೂದೆಯ ಸೆಕ್ಷನ್ 5ನಲ್ಲಿ ಕೇಂದ್ರ ಸರ್ಕಾರ ಪ್ರತಿ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ನೀಡಲಾಗುವ ಅನುದಾನದ ಮೇಲೆ ಕೆಲಸ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಇನ್ನು ಸೆಕ್ಷನ್ 5(1)ರಲ್ಲಿ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಅಧಿಸೂಚನೆಗೊಳಿಸಿದ ಪ್ರದೇಶಗಳಲ್ಲಿ ಅನುದಾನ ನೀಡುತ್ತದೆ. ಈ ರೀತಿ ಅನುದಾನ ನೀಡಿದ ನಂತರ ಆ ಭಾಗದ ಉದ್ಯೋಗ ಕಾರ್ಡ್ ಹೊಂದಿರುವವರು ಕೆಲಸ ಮಾಡಬಹುದು ಎಂದು ಹೇಳಿದೆ. ಈ ಹಿಂದೆ ಒಬ್ಬ ವ್ಯಕ್ತಿ ಮನರೇಗಾ ಉದ್ಯೋಗ ಕಾರ್ಡ್ ಹೊಂದಿದ್ದರೆ ಆತ ಎಲ್ಲಿ ಬೇಕಾದರೂ ಹೇಗಿ ಕೆಲಸ ಮಾಡುವ ಅವಕಾಶವಿತ್ತು. ಈಗ ಈ ಅವಕಾಶವನ್ನು ಕಸಿದುಕೊಳ್ಳಲಾಗಿದೆ.

ಉದ್ಯೋಗ ಖಾತರಿ ಯೋಜನೆಯಲ್ಲಿ ಪ್ರತಿ ವರ್ಷ ವೇತನ ಪರಿಷ್ಕರಣೆಯಾಗುತ್ತಿತ್ತು. ಆದರೆ ಹೊಸ ಯೋಜನೆಯಲ್ಲಿ ಇದನ್ನು ತೆಗೆದುಹಾಕಲಾಗಿದೆ. ಮನರೇಗಾದಲ್ಲಿ ಪಂಚಾಯಿತಿಗಳ ಮೂಲಕ ಕೆಲಸ ಕೈಗೊಳ್ಳುತ್ತಿದ್ದರು. ಈಗ ಈ ಕೆಲಸಗಳನ್ನು ನಿರ್ಧರಿಸುವವರು ಗ್ರಾಮಸ್ಥರು ನಿರ್ಧರಿಸುವುದಿಲ್ಲ. ದೆಹಲಿಯಲ್ಲಿ ಕೂತಿರುವವರು ನಿರ್ಧಾರ ಮಾಡುತ್ತಾರೆ. ಪಿ.ಎಂ ಗತಿಶಕ್ತಿ ಮಾಸ್ಟರ್ ಪ್ಲಾನ್ ಜೊತೆ ಸೇರಿಸಿದ್ದಾರೆ. ಪಿಎಂ ಗತಿಶಕ್ತಿ ಎಂಬುದು 500 ಕೋಟಿಗೂ ಹೆಚ್ಚು ಮೊತ್ತದ ಕೇಂದ್ರ ಸರ್ಕಾರ ಯೋಜನೆಗಳ ಮೇಲುಸ್ತುವಾರಿ ಮಾಡುವ ಪೋರ್ಟಲ್ ಆಗಿದೆ. ನೀವು ಈ ಪಿಎಂ ಗತಿ ಶಕ್ತಿ ಪೋರ್ಟಲ್ ನಲ್ಲಿ ನಿಮ್ಮ ಹೊಲದ ಕೆಲಸದ ಬಗ್ಗೆ ಮಾಹಿತಿ ಹಾಕಲು ಸಾಧ್ಯವೇ? ಎಂದರು.

ಇದನ್ನೂ ಓದಿ: ಇಂದಿನಿಂದ (ಡಿ.27) ಸುಳ್ಯದ ಸ.ಪ.ಪೂ ಕಾಲೇಜಿನಲ್ಲಿ ಅಮೃತ ಮಹೋತ್ಸವ

ಮನರೇಗಾ ಯೋಜನೆಯಲ್ಲಿ ನಾವು ಗ್ರಾಮೀಣದ ಆಸ್ತಿಗಳನ್ನು ನಿರ್ಮಾಣ ಮಾಡಬಹುದಾಗಿತ್ತು. ಗ್ರಾಮ ಸಭೆ ನಡೆಸಿ, ಗ್ರಾಮಸ್ಥರಿಗೆ ಏನು ಬೇಕು, ಪಂಚಾಯ್ತಿಗಳಿಗೆ ಏನು ಬೇಕು ಎಂದು ನಿರ್ಧಾರ ಮಾಡಬಹುದಿತ್ತು. ಕಳೆದ ಎರಡೂವರೆ ವರ್ಷದಲ್ಲಿ 17 ಲಕ್ಷ ಹಳ್ಳಿ ಮಟ್ಟದಲ್ಲಿ ಆಸ್ತಿ ಸೃಜನೆ ಮಾಡಲಾಗಿದೆ. 80 ಲಕ್ಷ ಕುಟುಂಬಗಳಿಗೆ ಜೀವನೋಪಾಯ ನೀಡಿದ್ದೇವೆ. 21,144 ಕೋಟಿ ವೆಚ್ಚ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬದಲಾವಣೆಯಿಂದ ಈ ಯೋಜನೆಯಲ್ಲಿ ಗುತ್ತಿಗೆ ಆಧಾರಿತ ಕಾಮಗಾರಿಗಳತ್ತ ಸಾಗುವಂತಾಗಿದೆ. ಸೆಕ್ಷನ್ 21 (2)ನಲ್ಲಿ ಗುತ್ತಿಗೆದಾರರನ್ನು ಬಳಸಿಕೊಂಡು ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಮನರೇಗಾ ಯೋಜನೆಯಲ್ಲಿ ಗುತ್ತಿಗೆದಾರ ಎಂಬ ಹೆಸರೇ ಇರಲಿಲ್ಲ. ಉದಾಹರಣೆಗೆ ಪ್ರಾಥಮಿಕ ಶಾಲೆಯನ್ನು ಕಟ್ಟುತ್ತಿರುವಾಗ ಅದರ ಕಾಂಪೌಂಡ್ ಅನ್ನು ಉದ್ಯೋಗ ಖಾತರಿಯಿಂದ ಕಟ್ಟಿದರೆ ಇಲ್ಲಿ ಯೋಜನೆಗಳ ಸಮ್ಮಿಳಿತವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಕ್ರಾಮಿಕರು ಗುತ್ತಿಗೆದಾರರ ಅಡಿಯಲ್ಲಿ ದುಡಿಯಬೇಕಾಗುತ್ತದೆ. ಮನರೇಗಾದಲ್ಲಿ ಎಲ್ಲಾ ಪಂಚಾಯ್ತಿಗೆ ಅನುದಾನ ಬರುತ್ತಿತ್ತು. ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಅಧಿಸೂಚನೆಗೊಂಡ ಪಂಚಾಯ್ತಿಗಳಿಗೆ ಮಾತ್ರ ಅನುದಾನ ಬರುತ್ತದೆ ಎಂದರು.

ಇದನ್ನೂ ಓದಿ: ಡಿಸೆಂಬರ್ 27 ರ ನಿಮ್ಮ ದಿನ ಹೇಗಿದೆ ?

Modi government has taken away the right to livelihood: Priyank Kharge- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 125

You cannot copy content of this page