ಪುತ್ತೂರು : Tulu Times| ಅಪರಾಧಿಗಳು ಯಾವುದೇ ಭಯವಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತಿದ್ದು, ಜನಸಾಮಾನ್ಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ನಗರ ಹಾಗೂ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳ್ಳತನ, ದರೋಡೆ, ಸುಲಿಗೆ ಪ್ರಕರಣಗಳು ದಿನನಿತ್ಯದ ಸಂಗತಿಗಳಾಗಿವೆ ಎಂದು ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ , ಪುತ್ತೂರಿನಲ್ಲಿ ಹೆಚ್ಚಾಗುತ್ತಿರುವ ಕಳ್ಳತನ, ದರೋಡೆ ಈ ತರಹದ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಈ ಹೇಳಿಕೆ ನೀಡಿರುತ್ತಾರೆ.
ಪೊಲೀಸ್ ಇಲಾಖೆ ಮೌನ ವಹಿಸಿರುವುದು ಅನುಮಾನಕ್ಕೆ ಕಾರಣ ;
ರಾಜ್ಯದಲ್ಲಿ ಕಾನೂನು ಎಂಬುದೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದು ಆಡಳಿತದ ಸಂಪೂರ್ಣ ವೈಫಲ್ಯ. ಅಪರಾಧಿಗಳಿಗೆ ಮುಕ್ತ ಲೈಸೆನ್ಸ್ ನೀಡಿದಂತಾಗಿದೆ. ಸರ್ಕಾರ ಜನರ ಜೀವ ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಪೊಲೀಸ್ ಇಲಾಖೆ ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಪರಾಧಿಗಳಿಗೆ ರಾಜಕೀಯ ರಕ್ಷಣೆ ದೊರೆಯುತ್ತಿದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಇಂತಹ ಸ್ಥಿತಿಗೆ ಸರ್ಕಾರವೇ ನೇರ ಹೊಣೆ ಎಂದು ಅವರು ಆರೋಪಿಸಿದರು.
ಜನಸಾಮಾನ್ಯರು ರಸ್ತೆಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣ ;
ಜನರ ಸುರಕ್ಷತೆ ಖಚಿತಪಡಿಸಲು ಪೊಲೀಸ್ ಗಸ್ತು ಹೆಚ್ಚಿಸಬೇಕು, ಅಪರಾಧ ಜಾಲವನ್ನು ಬೇರುಸಮೇತ ಕಿತ್ತೊಗೆಯಬೇಕು. ಇಲ್ಲದಿದ್ದರೆ ಜನಸಾಮಾನ್ಯರು ರಸ್ತೆಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ, ಜನರ ಆಕ್ರೋಶ ಸ್ಫೋಟಗೊಳ್ಳಲಿದೆ. ಅದೂ ಕೇವಲ ಭರವಸೆಗಳಿಂದಲ್ಲ, ಕಠಿಣ ಕ್ರಮಗಳಿಂದ ಮಾತ್ರ ಕಾನೂನು ಸುವ್ಯವಸ್ಥೆ ಮರುಸ್ಥಾಪನೆ ಸಾಧ್ಯ. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು, ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅರುಣ್ ಪುತ್ತಿಲ ಆಗ್ರಹಿಸಿದರು.
Government has completely failed to protect people’s lives: Arun Kumar Puttila -ತುಳು ಟೈಮ್ಸ್
ಇದನ್ನೂ ಓದಿ :ಇಂದಿನಿಂದ (ಡಿ.27) ಸುಳ್ಯದ ಸ.ಪ.ಪೂ ಕಾಲೇಜಿನಲ್ಲಿ ಅಮೃತ ಮಹೋತ್ಸವ
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/c3Lml4k6wi4?si=Y2Bvz2kVYsMjARVU











