Kollam: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಣ್ಣೂರು ಮೂಲದ ಬಂಧಿತ ವ್ಯಕ್ತಿ ಬಾಲಕಿಯ ತಾಯಿಯ ಸ್ನೇಹಿತ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ತಾಯಿ ಹಾಗೂ ಆರೋಪಿ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದರು.
ಒಂಭತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿಗೆ 48 ವರ್ಷದ ವ್ಯಕ್ತಿ ಬೆದರಿಕೆಯೊಡ್ಡಿ ನಿರಂತರ ಅತ್ಯಾಚಾರ ಎಸಗುತ್ತಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರ ಪ್ರಕಾರ, ಹೋಟೆಲ್ ಉದ್ಯೋಗಿಯಾಗಿರುವ ಆರೋಪಿ, ಬಾಲಕಿಯ ತಾಯಿಯೊಂದಿಗೆ ಎರಡು ವರ್ಷಗಳಿಂದ ವಾಸಿಸುತ್ತಿದ್ದ. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ಮನೆಯಿಂದ ಪರಾರಿಯಾಗಿದ್ದಾನೆ. ಕಣ್ಣೂರಿನ ವಾಗಮೋನ್ನ ಹೋಟೆಲ್ವೊಂದರಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಇತ್ತೀಚೆಗೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆಸ್ಪತ್ರೆ ಅಧಿಕಾರಿಗಳು ತಿಳಿಸಿದ ನಂತರ ಲೈಂಗಿಕ ದೌರ್ಜನ್ಯ ಬೆಳಕಿಗೆ ಬಂದಿದೆ. ತಾಯಿ ಮನೆಯಲ್ಲಿ ಇಲ್ಲದಿದ್ದಾಗ ಆರೋಪಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಬಾಲಕಿ ಹೇಳಿದ್ದಾಳೆ.
ಬಾಲಕಿಯ ತಂದೆ ಕುಟುಂಬವನ್ನು ತೊರೆದ ನಂತರ ಆರೋಪಿಯು ತನ್ನ ತಾಯಿಯೊಂದಿಗೆ ವಾಸಿಸಲು ಪ್ರಾರಂಭಿಸಿದನು. ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ತಾಯಿ ಹೆಚ್ಚಿನ ಸಮಯ ಮನೆಯಲ್ಲಿರುತ್ತಿರಲಿಲ್ಲ. ಈ ಸನ್ನಿವೇಶದ ಲಾಭ ಪಡೆದು ಆರೋಪಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: KMF Deepawali Gift: ಮಧುವೇಹಿಗಳಿಗೆ ಶುಗರ್ ಫ್ರೀ ಸ್ವೀಟ್ ಬಿಡುಗಡೆ
ವೀಡಿಯೋ ಸುದ್ದಿಗಳನ್ನು ವೀಕ್ಷಿಸಲು ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ Subscribe ಮಾಡಿ:https://www.youtube.com/watch?v=JJgZvG3Eep4











