ಬೆಂಗಳೂರು : Tulu Times l ಮುಂದಿನ ಹಣಕಾಸು ವರ್ಷದಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರು ಬಳಸುವ ವಿದ್ಯುತ್ಗೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ ಎಂದು ವಿದ್ಯುತ್ ನಿಯಂತ್ರಣ ಆಯೋಗ ತಿಳಿಸಿದೆ. ಇದು 2026 ರ ಹೊಸ ಕ್ಯಾಲೆಂಡರ್ ವರ್ಷಕ್ಕೆ ಗ್ರಾಹಕರಿಗೆ ಆತಂಕ ಮೂಡಿಸಲಿದೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಬೇಕಿರುವುದರಿಂದ ದರದಲ್ಲಿ ಕಡಿತ ಸಾಧ್ಯವಿಲ್ಲ. ಬದಲಾಗಿ ಈ ವರ್ಷವೂ ವಿದ್ಯುತ್ ದರದಲ್ಲಿ ಏರಿಕೆ ಸಂಭವಿಸಲಿದೆ. ಇದನ್ನು ದರ ಪರಿಷ್ಕರಣೆ ಎಂದು ಕರೆಯದೆ ‘ಟಾಪ್-ಅಪ್’ ಎಂದು ಪರಿಗಣಿಸಲಾಗುತ್ತದೆ ಎಂದು ಕೆಇಆರ್ಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಾಪ್ ಅಪ್ ಎಂದರೇನು ?
ಹಿಂದೆ ಮೂರು ವರ್ಷಗಳ ಕಾಲ ಸುಂಕಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿತ್ತು. ಆದರೆ ಮಾರುಕಟ್ಟೆಯ ಏರಿಳಿತಗಳು ಮತ್ತು ವಿದ್ಯುತ್ ಸರಬರಾಜು ಕಂಪನಿಗಳಲ್ಲಿರುವ ಬಾಕಿಗಳನ್ನು ಆಧರಿಸಿ ಇದೀಗ ವಾರ್ಷಿಕವಾಗಿ ಸಣ್ಣ ಪ್ರಮಾಣದ ತಿದ್ದುಪಡಿ ಮಾಡಲಾಗುತ್ತಿದೆ. ಇದನ್ನೇ ಟಾಪ್-ಅಪ್ ಎಂದು ಕರೆಯಲಾಗುತ್ತದೆ ಎಂದು ಕೆಇಆರ್ಸಿ ಅಧ್ಯಕ್ಷ ಪಿ. ರವಿ ಕುಮಾರ್ ತಿಳಿಸಿದ್ದಾರೆ.
ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಒತ್ತು ;
2025–26 ಹಣಕಾಸು ವರ್ಷದಲ್ಲಿ ಕಲ್ಲಿದ್ದಲು ಬೆಲೆ ಸ್ಥಿರವಾಗಿದ್ದು, ಉಷ್ಣ ವಿದ್ಯುತ್ ಸ್ಥಾವರಗಳಿಗೆ ನಿರಂತರ ಕಲ್ಲಿದ್ದಲು ಪೂರೈಕೆ ಲಭ್ಯವಿದ್ದ ಕಾರಣ ಆಮದು ಕಲ್ಲಿದ್ದಲಿನ ಅವಶ್ಯಕತೆ ಕಡಿಮೆಯಾಗಿದೆ. ಜೊತೆಗೆ ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಉತ್ಪಾದನೆ ಮತ್ತು ಸರಬರಾಜು ವೆಚ್ಚಗಳು ವಿಭಿನ್ನವಾಗಿವೆ. ರಾಜ್ಯದಲ್ಲಿ ಕೃಷಿ ವಿದ್ಯುತ್ ಸಬ್ಸಿಡಿ ಈಗ ಆರ್ಥಿಕ ಹೊರೆ ಆಗುತ್ತಿರುವ ಹಿನ್ನೆಲೆಯಲ್ಲಿ, ವಿದ್ಯುತ್ ಸರಬರಾಜು ಕಂಪನಿಗಳಿಗೆ ಅದರ ಮೊತ್ತವನ್ನು ಕಡಿಮೆ ಮಾಡುವಂತೆ ಚಿಂತನೆ ನಡೆಸಿದೆ ಎಂದು ಇಂಧನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಂತೆ ಎಸ್ಕಾಂಗಳು ತಮ್ಮ ಲೆಕ್ಕಾಚಾರವನ್ನು ಪರಿಷ್ಕರಿಸಿ, ಪ್ರತಿ ಯೂನಿಟ್ಗೆ 8.3 ರೂ.ಇದ್ದ ಕೃಷಿ ಸಬ್ಸಿಡಿಯನ್ನು 7.7 ಕ್ಕೆ ಇಳಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
ಯೂನಿಟ್ಗೆ ಗರಿಷ್ಠ 8–10 ಪೈಸೆ ಮಾತ್ರ ಹೆಚ್ಚಳವಾಗುವ ಸಾಧ್ಯತೆ;
ಈ ಹೊಸ ಮಾದರಿಯಲ್ಲಿ ಮೂರು ವರ್ಷಕ್ಕೊಮ್ಮೆ ಮಾತ್ರ ದರ ಪರಿಷ್ಕರಣೆ ನಡೆಯಲಿದೆ. ಟಾಪ್-ಅಪ್ ಎಲ್ಲಾ ಎಸ್ಕಾಂಗಳಿಗೆ ಸಮಾನವಾಗಿ ಅನ್ವಯವಾಗಲಿದ್ದು, ಪ್ರತಿ ಯೂನಿಟ್ಗೆ ಗರಿಷ್ಠ 8–10 ಪೈಸೆ ಮಾತ್ರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ ಕಾರಣ ಬಳಕೆದಾರರು ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಫ್ರೀ ಕರೆಂಟ್ ಅಂತ ಬೇಕಾಬಿಟ್ಟಿ ವಿದ್ಯುತ್ ಬಳಕೆ ಮಾಡಿದ್ರೆ ಇನ್ಮುಂದೆ ಹೆಚ್ಚಿನ ದರ ಪಾವತಿಸಬೇಕಾಗಬಹುದು ಎಂಬ ಮುನ್ನಚ್ಚರಿಕೆಯನ್ನೂ ಗಮನಹರಿಸಬೇಕಾಗಿದೆ.
Discussion on electricity tariff hike in 2026: Is Gruha Jyoti the one who got hit? – ತುಳುಟೈಮ್ಸ್
ಇದನ್ನೂ ಓದಿ :ಯುಗಾದಿ ನಂತರ ಸಾವು – ನೋವು ಹೆಚ್ಚಾಗಲಿದೆಯಾ ?
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/HsJtl7d3RiI?si=lZ_jaJ7HjW3Hz8du











