ಬ್ರೇಕಿಂಗ್ ನ್ಯೂಸ್
ಕರ್ನಾಟಕ

‘ಕೋಗಿಲು ಒತ್ತುವರಿ ತೆರವು’ ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಕಿರುಕುಳ : ಪಾಕಿಸ್ತಾನ ಹೇಳಿಕೆ

ಬೆಂಗಳೂರು : Tulu Times l ಕೋಗಿಲು ಒತ್ತುವರಿ ತೆರವು ಇದೀಗ ಪಾಕಿಸ್ತಾನದ ಚರ್ಚೆಗೆ ಕಾರಣವಾಗಿದ್ದು ಹಾಗೂ ಅಲ್ಪಸಂಖ್ಯಾತರ ಮೇಲೆ ಭಾರತದಲ್ಲಿ ದೌರ್ಜನ್ಯವಾಗುತ್ತಿದೆ ಎಂಬ ಬಗ್ಗೆ ಪಾಕಿಸ್ತಾನ ಹೇಳಿಕೆ ನೀಡಿರುವುದು ವರದಿಯಾಗಿದೆ. ಈ ಅಲ್ಪಸಂಖ್ಯಾತರನ್ನು ವ್ಯವಸ್ಥಿತವಾಗಿ ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂಬ ಹೇಳಿಕೆಯನ್ನು ನೀಡಲಾಗುತ್ತಿದೆ.

ನೋಟಿಸ್ ನೀಡಿದ ಬಳಿಕ ತೆರವು ;

ಸೋಮವಾರ ಮುಖ್ಯಮಂತ್ರಿಯ ಸರಕಾರಿ ನಿವಾಸ ಕಾವೇರಿಯಲ್ಲಿ ಉಪ ಮುಖ್ಯಮಂತ್ರಿ, ಸಚಿವರು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೋಗಿಲು ಬಳಿ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಸುಮಾರು 167 ಶೆಡ್‍ಗಳನ್ನು ನೋಟಿಸ್ ನೀಡಿದ ಬಳಿಕವೇ ತೆರವುಗೊಳಿಸಲಾಗಿದೆ. ಮಾನವೀಯ ನೆಲೆಯಲ್ಲಿ ಈ ಒಂದು ಪ್ರಕರಣಕ್ಕೆ ಸೀಮಿತವಾಗಿ ಅರ್ಹರಿಗೆ ಸರಕಾರದ ವತಿಯಿಂದ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ; 

ಯಾರಿಗೆ ನಿವೇಶನ, ಮನೆ ಇಲ್ಲವೋ ಅಂತಹವರಿಗೆ ಬೆಂಗಳೂರಿನಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಈ ಪ್ರಕರಣದಲ್ಲಿಯೂ ಯಾರಿಗೆ ನಿವೇಶನ, ಮನೆಗಳು ಇಲ್ಲವೋ ಅಂತಹ ಅರ್ಹರನ್ನು ಗುರುತಿಸಿ ಮನೆಗಳನ್ನು ನೀಡಲು ಕ್ರಮ ಕೈಗೊಳ್ಳುತ್ತೇವೆ. 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‍ಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರು. ಈ ಬಗ್ಗೆ ಗಮನ ಹರಿಸದ ಆ ಭಾಗದ ಕಂದಾಯ ಹಾಗೂ ಪಾಲಿಕೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ತಹಶೀಲ್ದಾರ್, ಗ್ರಾಮ ಆಡಳಿತಾಧಿಕಾರಿಯ ಗಮನಕ್ಕೆ ಬಾರದೆ ಇಂತಹ ಒತ್ತುವರಿ ಆಗಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

ನಿರಾಶ್ರಿತರಿಗೆ ತಾತ್ಕಾಲಿಕವಾಗಿ ಊಟ, ವಸತಿ ಸೌಕರ್ಯ ಕಲ್ಪಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರಾವ್‌ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾ‌ರ್ ಗಿರಿನಾಥ್ ಅವರಿಗೆ ತಿಳಿಸಿದ್ದೆ. ಮೂರು ಕಡೆ ಅವರಿಗಾಗಿ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಅಲ್ಲಿರುವವರು ಯಾರು ಹೋಗಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

‘Eviction of Cuckoo encroachment’ is persecution against minorities in India: Pakistan statement – ತುಳುಟೈಮ್ಸ್

ಇದನ್ನೂ ಓದಿ :ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ..ಸೆಕೆಂಡ್‌ ಮ್ಯಾರೇಜ್‌ ಗೆ ಅವಕಾಶ ಇಲ್ಲ!

====

ವಿಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/SDL5CAMpIQ0?si=z-EXuSo1lqDl_fxx

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 152

You cannot copy content of this page