ಬಂಟ್ವಾಳ : Tulu Times l ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸುಗಮ ಸಂಚಾರಕ್ಕೆ ಟೋಲ್ ಗೇಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ಟೋಲ್ ಗೇಟ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಪ್ರತಿದಿನ ಲಕ್ಷಾಂತರ ವಾಹನಗಳ ಸಂಚಾರವನ್ನು ನಿಯಂತ್ರಿಸುವ ಹೊಣೆ ಹೊತ್ತಿರುತ್ತಾರೆ. ಅವರ ಕರ್ತವ್ಯಗಳು ಕೇವಲ ಹಣ ಸಂಗ್ರಹಕ್ಕೆ ಮಾತ್ರ ಸೀಮಿತವಾಗಿಲ್ಲ. ಸಾರ್ವಜನಿಕ ಸುರಕ್ಷತೆ, ಸಮಯದ ನಿಯಂತ್ರಣ ಮತ್ತು ಶಿಸ್ತಿನ ಸಂಚಾರ ವ್ಯವಸ್ಥೆಯಲ್ಲಿಯೂ ಮಹತ್ವದ್ದಾಗಿವೆ.
ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;
ಟೋಲ್ ಗೇಟ್ ಸಿಬ್ಬಂದಿಗಳ ಮುಖ್ಯ ಕರ್ತವ್ಯವೆಂದರೆ ನಿಯಮಾನುಸಾರ ವಾಹನಗಳಿಂದ ಟೋಲ್ ಶುಲ್ಕವನ್ನು ಸಂಗ್ರಹಿಸುವುದು. ವಾಹನದ ವರ್ಗ, ದೂರ ಮತ್ತು ಸರ್ಕಾರದ ನಿಗದಿತ ದರದ ಆಧಾರದ ಮೇಲೆ ಸರಿಯಾದ ಮೊತ್ತ ವಸೂಲಿ ಮಾಡಬೇಕು. ಹಣಕಾಸಿನ ಪಾರದರ್ಶಕತೆ ಮತ್ತು ಲೆಕ್ಕಪತ್ರಗಳ ನಿಖರತೆಯನ್ನು ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯ. ನಿಯಮಗಳೇ ಹೀಗಿರುವಾಗ ಇಲ್ಲೊಂದು ಕಡೆ ಹಣ ವಸೂಲಿ ಸಂದರ್ಭ ಹಲ್ಲೆ ಮಾಡಿರುವುದು ಬೆಳಕಿಗೆ ಬಂದಿದೆ. ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಡಿ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಟು ಟೋಲ್ ಬಳಿ ರಸ್ತೆಯ ವಿರುದ್ದ ಧಿಕ್ಕಿನಿಂದ ಬಂದ್ದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಟೋಲ್ ಗೇಟಿಗೆ ಹಾನಿ ಮಾಡಿದ್ದಾರೆ. ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸೇರಿ ಟೋಲ್ ಗೇಟ್ ಸಿಬ್ಬಂದಿಗಳಾದ ಅಂಕಿತ್ ಹಾಗೂ ರೋಹಿತ್ ಎಂಬವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದು ಟೋಲ್ ಬೂತ್ ಒಳಗಡೆ ಅಕ್ರಮ ಪ್ರವೇಶಗೈದು ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳಾಗಿದ್ದಾರೆ.
ಈ ಬಗ್ಗೆ ಟೋಲ್ ಇನ್ ಚಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು-ಮುಳ್ಳೇರಿಯಾ ನಿವಾಸಿ ಪ್ರಶಾಂತ್ ನೀಡಿದ ದೂರಿನಂತೆ ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Toll gate staff attacked: Two arrested – ತುಳುಟೈಮ್ಸ್
ಇದನ್ನೂ ಓದಿ :ಪುತ್ತೂರು: ಮಗು ಆಗಿ 6 ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ..! ಈಕೆಯ ನೋವು ಕೇಳೋರಿಲ್ಲ
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/yek8Z0SdHr4?si=GwSReb0C_lc8S0TD











