ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಪೋಲಿಸ್ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ : ಪ್ರಾಮಾಣಿಕ ವಿದ್ಯಾವಂತರಿಗೆ ಎಲ್ಲಿದೆ ನ್ಯಾಯ ?

ಬೆಂಗಳೂರು : Tulu Times |  ಪೊಲೀಸ್ ಇಲಾಖೆ ಸಮಾಜದ ಶಾಂತಿ, ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಹೊತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಈ ವ್ಯವಸ್ಥೆಯ ಮೇಲೆ ಜನರ ನಂಬಿಕೆಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿವೆ.

 ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ;

ಪೊಲೀಸ್ ಅಧಿಕಾರಿಗಳ ಮೇಲೆ ಸಾಮಾನ್ಯವಾಗಿ ಕೇಳಿಬರುವ ಆರೋಪಗಳಲ್ಲಿ ಲಂಚ ಸ್ವೀಕಾರ, ಅಧಿಕಾರ ದುರುಪಯೋಗ, ನಿರಪರಾಧಿಗಳ ಮೇಲೆ ದೌರ್ಜನ್ಯ, ತನಿಖೆಯಲ್ಲಿ ಪಕ್ಷಪಾತ, ರಾಜಕೀಯ ಒತ್ತಡಕ್ಕೆ ಒಳಗಾಗುವುದು ಹಾಗೂ ಸಾಕ್ಷ್ಯ ನಾಶ ಮಾಡುವಂತಹ ಗಂಭೀರ ವಿಷಯಗಳು ಸೇರಿವೆ. ಇವು ಕಾನೂನು ರಕ್ಷಕರೇ ಕಾನೂನು ಉಲ್ಲಂಘಿಸುವ ಸ್ಥಿತಿಯನ್ನು ತೋರಿಸುತ್ತವೆ. ಹೌದು… ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಇದೀಗ ಬಿಜೆಪಿ ನಾಯಕರಷ್ಟೇ ಅಲ್ಲದೇ ಮಾಜಿ ಐಪಿಎಸ್ ಅಧಿಕಾರಿ​ಯೂ ಆದ ಭಾಸ್ಕರ್ ರಾವ್ ಪೊಲೀಸ್ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದು, ಅವರ ಎಕ್ಸ್ ಪೋಸ್ಟ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ಎಕ್ಸ್ ಖಾತೆ ಮೂಲಕ ಗೃಹ ಸಚಿವರಿಗೆ ಟಾಂಗ್ ಕೊಟ್ಟ ಭಾಸ್ಕರ್, ಕರ್ನಾಟಕ ರಾಜ್ಯದ ಡಿಜಿ & ಐಜಿಪಿ ಕಚೇರಿಯಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ನೇಮಕಾತಿಗಾಗಿ ಕಾಯುತ್ತಿದ್ದಾರೆ. ಅನೇಕ ಹುದ್ದೆಗಳು ಖಾಲಿಯಾಗಿಯೇ ಉಳಿದಿವೆ. ಒಂದು ಪೊಲೀಸ್ ಠಾಣೆಯಲ್ಲಿ ಖಾಲಿಯಿದ್ದ ಹುದ್ದೆಗೆ 55 ಲಕ್ಷ ರೂ. ಬೇಡಿಕೆ ಇಡಲಾಗಿತ್ತು. ನಮ್ಮ ಅಭ್ಯರ್ಥಿಗೆ ಆ ಮೊತ್ತವನ್ನು ಹೊಂದಿಸಲು ಸಾಧ್ಯವಾಗಲಿಲ್ಲ. ನಂತರ ಅವರು ಮಧ್ಯವರ್ತಿಗೆ ಕಚೇರಿ ಹುದ್ದೆ ನೀಡುವಂತೆ ಮನವಿ ಮಾಡಿದರು. ಆರಂಭದಲ್ಲಿ ಮೂರು ಲಕ್ಷ ರೂ. ಕೇಳಲಾಗಿದ್ದು, ಅಂತಿಮವಾಗಿ ಒಂದು ಲಕ್ಷ ರೂ.ಗೆ ವ್ಯವಹಾರ ನಿಶ್ಚಯವಾಯಿತು. ಇದು ಇಂದಿನ ವ್ಯವಸ್ಥೆಯ ಸ್ಥಿತಿ. ತಕ್ಷಣ ಫಲಿತಾಂಶ ಪಡೆಯಲು ಪ್ರಭಾವಿ ವ್ಯಕ್ತಿಗಳ ಪುತ್ರರಿಗೆ ಕೆಲಸ ಸುಲಭವಾಗಿ ಆಗುತ್ತದೆ. ನಮ್ಮ ಗೃಹ ಸಚಿವರು ಪ್ರಾಮಾಣಿಕರು, ಅವರಿಗೆ ಆದೇಶ ಬಂದಾಗ ಸಹಿ ಮಾಡುವುದರ ಹೊರತು ಬೇರೆ ಗೊತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.

Corruption in police recruitment too: Where is the justice for honest educated people? – ತುಳು ಟೈಮ್ಸ್

ಇದನ್ನೂ ಓದಿ :ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು?: ಶೋಭಾ ಕರಂದ್ಲಾಜೆ

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/Md1OEd9glA4?si=xC7Gn2poEks_yXdS

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page