ಸವಣೂರು: Tulu Times | ಕಡಬ ಸಮೀಪದ ಸವಣೂರು ಗ್ರಾಮದ ಅಗರಿ ನಿವಾಸಿ ಯುವಕನೋರ್ವ ಇಲಿಪಾಷಾಣ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ರಾಮಚಂದ್ರ ಎಂಬವರ ಪುತ್ರ ಮೇಘರಾಜ್ (24) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು..?
ಯುವಕ ಮೇಘರಾಜ್ ವೈದ್ಯರು ಹೇಳಿಯೂ ಹೆಚ್ಚಿನ ಚಿಕಿತ್ಸೆ ಪಡೆಯಲು ನಿರಾಕರಿಸಿ ಅಂದು ಮನೆಗೆ ಮರಳಿದ್ದರು. ನಂತರ, ಡಿಸೆಂಬರ್ 28ರಂದು ಮನೆಯಲ್ಲಿ ವಿಪರೀತ ವಾಂತಿ ಮಾಡಿಕೊಂಡು ಮತ್ತೆ ಅಸ್ವಸ್ಥಗೊಂಡಿದ್ದರು. ಕೂಡಲೇ ಕುಟುಂಬಸ್ಥರು ಅವರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ಕರೆತಂದಿದ್ದರು. ಇನ್ನು ಡಿಸೆಂಬರ್ 25ರಂದು ಮೇಘರಾಜ್ ತಮ್ಮ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದರು. ಆ ಬಳಿಕ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಪರಿಸ್ಥಿತಿ ಗಂಭೀರವಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದರು. ಆದರ್ಶ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಕೂಡಲೇ ಹೆಚ್ಚಿನ ಚಿಕಿತ್ಸೆ ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಘರಾಜ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ಮೇಘರಾಜ್ ಅವರ ತಂದೆ ರಾಮಚಂದ್ರ ಅವರು ದೂರು ನೀಡಿ ತನಿಖೆಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಸೊಳ್ಳೆ ಕಾಯಿಲ್ ಉಪಯೋಗಿಸುವ ಮುನ್ನ ಎಚ್ಚರ : ಇದಕ್ಕೆ ಪರ್ಯಾಯ ಮಾರ್ಗ ಇಲ್ಲಿವೆ !
ಪೊಲೀಸ್ ನೇಮಕಾತಿಯಲ್ಲಿ ಭ್ರಷ್ಟಾಚಾರ!
ಪ್ರತ್ಯೇಕ ಪ್ರಕರಣದಲ್ಲಿ, ಪೊಲೀಸ್ ಇಲಾಖೆ ಸಮಾಜದ ಶಾಂತಿ, ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಹೊತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಈ ವ್ಯವಸ್ಥೆಯ ಮೇಲೆ ಜನರ ನಂಬಿಕೆಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿವೆ.
ಇದನ್ನೂ ಓದಿ: ಆಹಾರ ವ್ಯಾಪಾರ ಸಂಸ್ಥೆಗಳಿಗೆ 2026, ಜನವರಿ 01 ರಿಂದ ಹೊಸ ನಿಯಮ ಜಾರಿ
ಅಧಿಕಾರಿಗಳ ಮೇಲೆ ಸಾಮಾನ್ಯವಾಗಿ ಕೇಳಿಬರುವ ಆರೋಪಗಳಲ್ಲಿ ಲಂಚ ಸ್ವೀಕಾರ, ಅಧಿಕಾರ ದುರುಪಯೋಗ, ನಿರಪರಾಧಿಗಳ ಮೇಲೆ ದೌರ್ಜನ್ಯ, ತನಿಖೆಯಲ್ಲಿ ಪಕ್ಷಪಾತ, ರಾಜಕೀಯ ಒತ್ತಡಕ್ಕೆ ಒಳಗಾಗುವುದು ಹಾಗೂ ಸಾಕ್ಷ್ಯನಾಶ ಮಾಡುವಂತಹ ಗಂಭೀರ ವಿಷಯಗಳು ಸೇರಿವೆ. ಇವು ಕಾನೂನು ರಕ್ಷಕರೇ ಕಾನೂನು ಉಲ್ಲಂಘಿಸುವ ಸ್ಥಿತಿಯನ್ನು ತೋರಿಸುತ್ತವೆ. ಹೌದು… ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಇದೀಗ ಬಿಜೆಪಿ ನಾಯಕರಷ್ಟೇ ಅಲ್ಲದೇ ಮಾಜಿ ಐಪಿಎಸ್ ಅಧಿಕಾರಿಯೂ ಆದ ಭಾಸ್ಕರ್ ರಾವ್ ಪೊಲೀಸ್ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದು, ಅವರ ಎಕ್ಸ್ ಪೋಸ್ಟ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ತಮ್ಮ ಎಕ್ಸ್ ಖಾತೆ ಮೂಲಕ ಗೃಹ ಸಚಿವರಿಗೆ ಟಾಂಗ್ ಕೊಟ್ಟ ಭಾಸ್ಕರ್, ಕರ್ನಾಟಕ ರಾಜ್ಯದ ಡಿಜಿ & ಐಜಿಪಿ ಕಚೇರಿಯಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ನೇಮಕಾತಿಗಾಗಿ ಕಾಯುತ್ತಿದ್ದಾರೆ. ಅನೇಕ ಹುದ್ದೆಗಳು ಖಾಲಿಯಾಗಿಯೇ ಉಳಿದಿವೆ. ಒಂದು ಪೊಲೀಸ್ ಠಾಣೆಯಲ್ಲಿ ಖಾಲಿಯಿದ್ದ ಹುದ್ದೆಗೆ 55 ಲಕ್ಷ ರೂ. ಬೇಡಿಕೆ ಇಡಲಾಗಿತ್ತು. ನಮ್ಮ ಅಭ್ಯರ್ಥಿಗೆ ಆ ಮೊತ್ತವನ್ನು ಹೊಂದಿಸಲು ಸಾಧ್ಯವಾಗಲಿಲ್ಲ. ನಂತರ ಅವರು ಮಧ್ಯವರ್ತಿಗೆ ಕಚೇರಿ ಹುದ್ದೆ ನೀಡುವಂತೆ ಮನವಿ ಮಾಡಿದರು. ಆರಂಭದಲ್ಲಿ ಮೂರು ಲಕ್ಷ ರೂ. ಕೇಳಲಾಗಿದ್ದು, ಅಂತಿಮವಾಗಿ ಒಂದು ಲಕ್ಷ ರೂ.ಗೆ ವ್ಯವಹಾರ ನಿಶ್ಚಯವಾಯಿತು. ಇದು ಇಂದಿನ ವ್ಯವಸ್ಥೆಯ ಸ್ಥಿತಿ. ತಕ್ಷಣ ಫಲಿತಾಂಶ ಪಡೆಯಲು ಪ್ರಭಾವಿ ವ್ಯಕ್ತಿಗಳ ಪುತ್ರರಿಗೆ ಕೆಲಸ ಸುಲಭವಾಗಿ ಆಗುತ್ತದೆ. ನಮ್ಮ ಗೃಹ ಸಚಿವರು ಪ್ರಾಮಾಣಿಕರು, ಅವರಿಗೆ ಆದೇಶ ಬಂದಾಗ ಸಹಿ ಮಾಡುವುದರ ಹೊರತು ಬೇರೆ ಗೊತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.
Savanur: Youth commits suicide by consuming rat poison- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











