ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಹೊಸ ಕ್ಯಾಲೆಂಡರ್ ವರ್ಷಕ್ಕೆ ಇನ್ನೇನು ಕೆಲವೇ ನಿಮಿಷ !

2026 : Tulu Times l 2026 ರ ಹೊಸ ಕ್ಯಾಲೆಂಡರ್ ವರ್ಷಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇವೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಜನರು ಪೋಸ್ಟ್ ಮಾಡ್ತಾ ತಾವು ಕಳೆದ 2025 ರ ಸವಿ ನೆನಪಿನ ಜೊತೆ, 2026 ರ ಆಗಮನಕ್ಕೆ ಕಾಯುವ ಖುಷಿಯಲ್ಲಿದ್ದಾರೆ. ಆದರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಭ್ರಮದ ನೆಪದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ನಿಗಾ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಸರ್ಕಾರದಿಂದಲೇ ಕಾನೂನು ಜಾರಿಯಾಗಿದ್ದು, ಕುಡಿದು ವಾಹನ ಚಾಲನೆ ಮಾಡುವವರ ಮೇಲೆ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ. ತಪಾಸಣೆ ನಡೆಸಲು ನಗರದ 160 ಕಡೆಗಳಲ್ಲಿ ಸ್ಥಳ ಗುರುತಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ ಅಪಘಾತವೆಸಗಿ, ಬೇರೆಯವರ ಜೀವಕ್ಕೆ ಕುತ್ತು ತರುತ್ತಾರೆ. ಹೀಗಾಗಿ, ಬಿಗಿ ಕಾರ್ಯಾಚರಣೆ ಕೈಗೊಳ್ಳುವಂತೆ ಸಂಚಾರ ಪೊಲೀಸರಿಗೆ ತಿಳಿಸಲಾಗಿದೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ, ಹೊಸ ವರ್ಷದ ಆಚರಣೆ ಸಂಭ್ರಮದಲ್ಲಿ ಯಾರೂ ಮೈಮರೆಯಬಾರದು. ವಿಶೇಷವಾಗಿ ಹೆಣ್ಣುಮಕ್ಕಳು ಎಚ್ಚರದಿಂದ ಇರಬೇಕು. ಕೆಲ ಯುವತಿಯರು ಪ್ರಜ್ಞೆ ಇರದ ಮಟ್ಟಿಗೆ ಇರುತ್ತಾರೆ. ಈ ವೇಳೆ ಏನು ಬೇಕಾದರೂ ಆಗಬಹುದು. ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ವಿಭಾಗದ 14 ಸಾವಿರ ಪೊಲೀಸರು, 2,500 ಸಂಚಾರ ಪೊಲೀಸರು, 88 ಕೆಎಸ್‌ಆರ್‌ಪಿ ತುಕಡಿಗಳು, 21 ಸಿಎಆರ್, 266 ಹೊಯ್ಸಳ ವಾಹನ, 250 ಕೋಬ್ರಾ ವಾಹನಗಳು ಹಾಗೂ 400 ಟ್ರಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನದಟ್ಟಣೆ ನಿಯಂತ್ರಿಸಲು ವಾಟ‌ರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಿವಿಲ್ ಡಿಫೆನ್ಸ್, ಗೃಹರಕ್ಷಕ ದಳ ಸೇರಿದಂತೆ ಒಟ್ಟು 20 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬೆಂಗಳೂರು ಮೈಸೂರು, ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಬೆಂಗಳೂರು ನಗರಕ್ಕೆ ಹೊರಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅಲ್ಲದೆ ಅನ್ಯ ಭಾಷಿಕರು ಸಹ ಸಂಭ್ರಮ ಆಚರಣೆಗೆ ಬರುತ್ತಾರೆ. ಈ ವೇಳೆ ಶುಭಾಶಯ ಕೋರುವ ನೆಪದಲ್ಲಿ ನೂಕುನುಗ್ಗಲು ಆಗುತ್ತದೆ. ಈ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿದೆ.

Just a few minutes left until the new calendar year! – ತುಳುಟೈಮ್ಸ್

ಇದನ್ನೂ ಓದಿ :ರಿಷಭ್‌ ಶೆಟ್ಟಿ ಫ್ಯಾಮಿಲಿ ಜೊತೆ ಗೋವಾ ಟ್ರಿಪ್..! ನ್ಯೂ ಈಯರ್‌ ಗೆ ಹೆಂಡ್ತಿಗೆ ಕೊಟ್ಟ ಗಿಫ್ಟ್‌ ಏನು ಗೊತ್ತಾ..?

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/3hCZb-Tbw3c?si=R32Odk1PS8–oUi3

 

———–

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page