ದಕ್ಷಿಣಕನ್ನಡ: Tulu Times | ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು.. ಹೌದು, ಅದು ಹೇಗೆ ಗೊತ್ತಾ? ನೋಡೋಣ ಈ ಸ್ಟೋರಿಲಿ..
ಸೆಮಿ ಹೈ-ಸ್ಪೀಡ್ ರೈಲು ಆರಂಭ!
ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಈ ಅರೆ-ಹೈ-ಸ್ಪೀಡ್ ರೈಲು ಸೇವೆ ಆರಂಭವಾಗಲಿದೆ. 9-10 ಗಂಟೆಗಳ ಪ್ರಯಾಣವನ್ನು 5 ಗಂಟೆಗೆ ಇಳಿಸಲಿದೆ. ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ನಡುವೆ ಶೀಘ್ರದಲ್ಲೇ ಸಂಚರಿಸಲಿದೆ. ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚರಿಸಲಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ,
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಯೋಜನೆಗೆ ಚಾಲನೆ ನೀಡಲಾಗುವುದು. ಈಗಾಗಲೇ ಈ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ ಎಂದು ಹೇಳಿದ್ದಾರೆ.
ಸೆಮಿ ಹೈ-ಸ್ಪೀಡ್ ರೈಲು ಹೇಗೆ ಕೆಲಸ ಮಾಡುತ್ತದೆ..?
ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಹೇಳಿರುವ ಸೋಮಣ್ಣ, ಇದು ಸಂಪೂರ್ಣ ವಿದ್ಯುತ್ ಶಕ್ತಿಯಿಂದ ಚಲಿಸುವ ಕಾರಣ, ಇದು ಪ್ರಯಾಣದ ವೇಗವನ್ನು ಹೆಚ್ಚಿಸುತ್ತದೆ. ಜತೆಗೆ, ಸ್ವಚ್ಛವಾದ ಗಾಳಿ, ಮಾಲಿನ್ಯರಹಿತ ಪರಿಸರವನ್ನು ಉಂಟು ಮಾಡುತ್ತದೆ. ಇದರ ಇಂಧನ ಬಳಕೆಯನ್ನು ಕಡಿಮೆ ಮಾಡುತ್ತದೆ. ಇದು ಸರಿಸುಮಾರು 9 ರಿಂದ 10 ಗಂಟೆಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ.
ಇನ್ನು ಕೆಲವು ವರದಿಗಳ ಪ್ರಕಾರ, ಸೆಮಿ ಹೈ-ಸ್ಪೀಡ್ ಸೇವೆಯು ದೈನಂದಿನ ಪ್ರಯಾಣಿಕರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ, ಇದಕ್ಕೆ 50,000 ಕೋಟಿ ರೂ. ಬಜೆಟ್ ನೀಡಲಾಗಿದೆ ಪ್ರವಾಸೋದ್ಯಮ, ವ್ಯಾಪಾರ ಪ್ರವಾಸಗಳಿಗೆ ಇದೊಂದು ಉತ್ತಮ ಆಯ್ಕೆಯಾಗಿರುತ್ತದೆ.ಬೆಂಗಳೂರು, ತುಮಕೂರು, ಹಾಸನ ಮತ್ತು ಮಂಗಳೂರು ಎಂಬ ನಾಲ್ಕು ಜಿಲ್ಲೆಗಳಿಗೆ ಇದು ಅನುಕೂಲವಾಗಲಿದೆ. ಇದು ವ್ಯಾಪಾರ ಪ್ರಯಾಣಿಕರು ಮತ್ತು ರಜಾದಿನಗಳಲ್ಲಿ ಈ ರೈಲು ಹೆಚ್ಚು ಸಹಾಯವಾಗಲಿದೆ.
Wow.. good news from the central government for the people of Dakshina Kannada!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











