ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಪೃಥ್ವಿ ಅಂಬಾರ್ ನಟಿಸಿರುವ ಚೌಕಿದಾರ್ ರಿಲೀಸ್ ಡೇಟ್ ಫಿಕ್ಸ್‌ !

ಸಿನಿಮಾ: Tulu Times | ರಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ಚೌಕಿದಾರ್. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚೌಕಿದಾರ್ ರಿಲೀಸ್ ಡೇಟ್ ಅನೌನ್ಸ್ ಮಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಇದೇ ತಿಂಗಳ 30ರಂದು ಚೌಕಿದಾರ್ ಸಿನಿಮಾ ತೆರೆಗೆ ಬರಲಿದೆ.

ಪೃಥ್ವಿ ಅಂಬಾರ್ ನಾಯಕನಾಗಿ ಹಾಗೂ ಧನ್ಯ ರಾಮ್ ಕುಮಾರ್ ನಾಯಕಿಯಾಗಿ ನಟಿಸಿರುವ ಚೌಕಿದಾರ್ ಸಿನಿಮಾದಲ್ಲಿ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಧರ್ಮ, ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್ನಡಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ.ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ,‌ ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಫ್ಯಾಮಿಲಿ, ಅಪ್ಪ-ಮಗನ ಬಾಂಧವ್ಯದ ಕಥೆ ಹೊಂದಿರುವ ಈ ಸಿನಿಮಾವನ್ನ ಸೆನ್ಸಾರ್‌ ಮಂಡಳಿ ಸದಸ್ಯರು ಶ್ಲಾಘಿಸಿದ್ದಾರೆ. ಈ ಚಿತ್ರಕ್ಕೆ U/A ಸರ್ಟಿಫಿಕೇಟ್‌ ನೀಡಿದ್ದಾರೆ. ಮುರುಳಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ, ಜೈ ಸುಬ್ರಹ್ಮಣ್ಯ ಸಾಹಸ ದೃಶ್ಯಗಳು ಚಿತ್ರಕ್ಕಿದೆ.

ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಮುಂದಿನ ಸಿನಿಮಾ ಯಾವುದು ಗೊತ್ತಾ..?

ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಿಸಿರುವ ನೂತನ ಚಿತ್ರ ಪ್ಯಾರ್. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ನಾಯಕಿಯ ತಂದೆಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಿಶ್ವಿನ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.

ಆ್ಯನ್ ಎಮೋಷನಲ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಈಗಾಗಲೇ ರಿಲೀಸಾಗಿ, ಸಂಗೀತ ಪ್ರಿಯರ ಮನ ಗೆದ್ದಿರುವ ಒಂದೇ ಮಾತಲಿ*ಹೇಳೋದಾದರೆ ‘ ಎಂಬ ಹಾಡಿನ ಸುಂದರ ವೀಡಿಯೋ ಇನ್ ಸ್ಟಾಗ್ರಾಂನಲ್ಲಿ 100 ಮಿಲಿಯನ್ ಗೂ ಹೆಚ್ಚು ವೀಕ್ಷಣೆಯಾಗಿದೆ. ಅಲ್ಲದೆ ಮಿಲಿಯನ್ ಪ್ಲಸ್ ವ್ಯೂಸ್ ಆಗಿದೆ. ಪಳನಿ ಡಿ.ಸೇನಾಪತಿ ಅವರ ಸಂಗೀತ, ಕೆಎಸ್.ಚಂದ್ರಶೇಖರ್ ಅವರ ಕ್ಯಾಮೆರಾದಲ್ಲಿ ಲಡಾಕ್ ನ ರಮಣೀಯ ಪರಿಸರದಲ್ಲಿ ಈ ಹಾಡನ್ನು ಸೆರೆ ಹಿಡಿಯಲಾಗಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಹಾಡಿನ ಯಶಸ್ಸಿನ ಖುಷಿಯನ್ನು ಚಿತ್ರತಂಡ ಮಾಧ್ಯದೊಂದಿಗೆ ಹಂಚಿಕೊಂಡಿತು.

Prithvi Ambar’s Chowkidar release date fixed!-‌ ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess‌

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page