ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿ

ಬೆಳ್ತಂಗಡಿ: ಬೈಕ್‌ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ: Tulu Times | ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು-ಅಂಬಟೆಮಲೆ ರಸ್ತೆಯಲ್ಲಿ ಉಂಟಾದ ಅಪಘಾತದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜಿ.(52)  ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಅಪಘಾತ ಸಂಭವಿಸಿದ್ದು ಎಲ್ಲಿ..?

ಡಿ.25ರಂದು  ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಕೆಲವು ದಿನಗಳ ಹಿಂದೆ  ಗಂಡಿಬಾಗಿಲು-ಅಂಬಟೆಮಲೆ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಕೃಷಿಕರಾಗಿದ್ದ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.  ಗಾಯಗೊಂಡ ಜಾನ್‌ ಅವರನ್ನುಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.  ಆ ವೇಳೆ ಕೋಮಾದಲ್ಲಿಯೇ ಇದ್ದರು ಎನ್ನಲಾಗಿದೆ. ನಂತರ  ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಕುರಿತು  ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲಿಪಾಷಾಣ ಸೇವಿಸಿ ಯುವಕ ಆತ್ಮಹತ್ಯೆ !

ಸವಣೂರು: ಕಡಬ ಸಮೀಪದ ಸವಣೂರು ಗ್ರಾಮದ ಅಗರಿ ನಿವಾಸಿ ಯುವಕನೋರ್ವ ಇಲಿಪಾಷಾಣ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ರಾಮಚಂದ್ರ ಎಂಬವರ ಪುತ್ರ ಮೇಘರಾಜ್ (24) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ಕಾರಣವೇನು..?

ಯುವಕ ಮೇಘರಾಜ್ ವೈದ್ಯರು ಹೇಳಿಯೂ ಹೆಚ್ಚಿನ ಚಿಕಿತ್ಸೆ ಪಡೆಯಲು ನಿರಾಕರಿಸಿ ಅಂದು ಮನೆಗೆ ಮರಳಿದ್ದರು. ನಂತರ, ಡಿಸೆಂಬರ್ 28ರಂದು ಮನೆಯಲ್ಲಿ ವಿಪರೀತ ವಾಂತಿ ಮಾಡಿಕೊಂಡು ಮತ್ತೆ ಅಸ್ವಸ್ಥಗೊಂಡಿದ್ದರು. ಕೂಡಲೇ ಕುಟುಂಬಸ್ಥರು ಅವರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ಕರೆತಂದಿದ್ದರು. ಇನ್ನು ಡಿಸೆಂಬರ್ 25ರಂದು ಮೇಘರಾಜ್ ತಮ್ಮ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದರು. ಆ ಬಳಿಕ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಪರಿಸ್ಥಿತಿ ಗಂಭೀರವಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದರು. ಆದರ್ಶ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಕೂಡಲೇ ಹೆಚ್ಚಿನ ಚಿಕಿತ್ಸೆ ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಘರಾಜ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ಮೇಘರಾಜ್ ಅವರ ತಂದೆ ರಾಮಚಂದ್ರ ಅವರು ದೂರು ನೀಡಿ ತನಿಖೆಗೆ ಆಗ್ರಹಿಸಿದ್ದಾರೆ.

Belthangady: Man receiving treatment in bike accident dies- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 159

You cannot copy content of this page