ವಿಟ್ಲ: Tulu Times | ವಿಟ್ಲದ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ ಭಾರೀ ನಷ್ಟ ಉಂಟಾಗಿದೆ. ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಬೆಂಕಿ ಕಾಣಿಸಿಕೊಂಡಿದ್ದು ಹೇಗೆ..?
ವಿಟ್ಲ ಪೇಟೆಯ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಸುತ್ತಮುತ್ತಲಿನ ಅಂಗಡಿಗಳಿಗೂ ಹಬ್ಬಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸುತ್ತಮುತ್ತಲಿನ ಜನ ಬಂದು ನೋಡಿ ಶಾಕ್ ಆಗಿದ್ದಾರೆ, ಬೆಂಕಿಯನ್ನು ನಂದಿಸಲಾಗದೆ ನಿಂತುಕೊಂಡು ನೋಡಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಕೊಡಂಗೆ ಮಾಲೀಕತ್ವದ ಸಂತೋಷ್ ಕುಮಾರ್ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಈ ಅಂಗಡಿನ ಮಧ್ಯೆ ಇದ್ದಂತಹ, ಎಸ್. ಬಿ. ಟೈಲರಿಂಗ್ ಶಾಪ್, ಪಡೀಲ್ ಫಾಸ್ಟ್ ಫುಡ್ ಸಹಿತ ಸಣ್ಣ ಅಂಗಡಿಗಳೂ ಬೆಂಕಿ ತಗುಲಿದ್ದು ಸಂಪೂರ್ಣವಾಗಿ ಬೆಂಕಿ ಹರಡಿದೆ. ಅಮಿತ್ ಹೋಟೇಲ್ ಹಾಗೂ ಸ್ಮಾರ್ ವೈನ್ಸ್ ವರೆಗೂ ಹಬ್ಬಿದ್ದು, ಇದರ ನಡುವೆ ಇದ್ದಬಂಟ್ವಾಳದಿಂದ ಅಗ್ನಿಶಾಮಕ ವಾಹನ ಬಂದಿದೆ. ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದ್ದು, ಈ ಘಟನೆಯ ಪರಿಣಾಮವಾಗಿ ಭಾರೀ ನಷ್ಟ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ!
ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು.. ಹೌದು, ಅದು ಹೇಗೆ ಗೊತ್ತಾ? ನೋಡೋಣ ಈ ಸ್ಟೋರಿಲಿ..
ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಈ ಅರೆ-ಹೈ-ಸ್ಪೀಡ್ ರೈಲು ಸೇವೆ ಆರಂಭವಾಗಲಿದೆ. 9-10 ಗಂಟೆಗಳ ಪ್ರಯಾಣವನ್ನು 5 ಗಂಟೆಗೆ ಇಳಿಸಲಿದೆ. ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ನಡುವೆ ಶೀಘ್ರದಲ್ಲೇ ಸಂಚರಿಸಲಿದೆ. ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚರಿಸಲಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಯೋಜನೆಗೆ ಚಾಲನೆ ನೀಡಲಾಗುವುದು. ಈಗಾಗಲೇ ಈ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ ಎಂದು ಹೇಳಿದ್ದಾರೆ.
Vitla: Fire accident at electronics shop.. Shop burnt down!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











