ಮಂಗಳೂರು: Tulu Times | ಜ.4ರಂದು ಸಂಜೆ 4 ಗಂಟೆಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣದಲ್ಲಿ ಉಡುಪಿಯ ಶೀರೂರು ಮಠಾಧೀಶರಾದ ವೇದವರ್ಧನ ತೀರ್ಥರು ಮಂಗಳೂರಿಗೆ ಪುರ ಪ್ರವೇಶ ಮಾಡಲಿದ್ದಾರೆ.
ವೇದವರ್ಧನ ತೀರ್ಥರನ್ನು ಪರ್ಯಾಯದ ಮಂಗಳೂರು ಸ್ವಾಗತ ಸಮಿತಿ ಹಾಗೂ ಭಕ್ತ ಸಮೂಹದಿಂದ ಉರ್ವಸ್ಟೋರ್ ಮಹಾ ಗಣಪತಿ ದೇವಸ್ಥಾನದ ಆವರಣದಲ್ಲಿ ಶ್ರೀಗಳನ್ನು ಪೂರ್ಣಕುಂಭ ದೊಂದಿಗೆ ಸ್ವಾಗತಿಸಲಾಗುತ್ತದೆ. ಶೀರೂರು ಮಠಾಧೀಶರು ಪ್ರಥಮ ಬಾರಿಗೆ ಪರ್ಯಾಯ ಸರ್ವಜ್ಞ ಪೀಠವನ್ನು ಅಲಂಕರಿಸುತ್ತಿದ್ದಾರೆ.
ಉಡುಪಿ ಶೀರೂರು ಪರ್ಯಾಯ -2026 ಸ್ವಾಗತ ಸಮಿತಿಯ ಮಂಗಳೂರು ಗೌರವಾಧ್ಯಕ್ಷ ಡಾ.ಎಂ.ಬಿ. ಪುರಾಣಿಕ್ ಸುದ್ದಿಗೋಷ್ಠಿ ನಡೆಸಿ, ಜ. 4ರಿಂದ 8 ರವರೆಗೆ ಶ್ರೀಗಳು ಜ. 4ರಿಂದ 8ತನಕ ಮಂಗಳೂರಿನ ಭಕ್ತಾದಿಗಳ ಮನೆಗೆ ಭೇಟಿ, ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದು ನಂತರ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪರ್ಯಾಯ ರಾಯಸವನ್ನು ಭಕ್ತಾದಿಗಳಿಗೆ ನೀಡಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸಮಿತಿ ಕಾರ್ಯಾಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಸಮಿತಿ ಪ್ರಧಾನ ಕಾರ್ಯದರ್ಶಿ ಸುಧಾಕರ ರಾವ್ ಪೇಜಾವರ, ಪ್ರಧಾನ ಸಂಚಾಲಕ ಗುರುಪ್ರಸಾದ್ ಕಡಂಬಾರ್, ಕೋಶಾಧಿಕಾರಿ ಬಿ. ಸುಬ್ರಹ್ಮಣ್ಯ ರಾವ್, ಉಪಾಧ್ಯಕ್ಷ ಎಂ. ರವೀಂದ್ರ ಶೇಟ್ ಇನ್ನಿತರರು ಉಪಸ್ಥಿತರಿದ್ದರು.
ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ದೇವಸ್ಥಾನ!
ಸುಬ್ರಮಣ್ಯ: ಸುಬ್ರಹ್ಮಣ್ಯ ದೇವಸ್ಥಾನದ ಮೇಲಿನ ನಂಬಿಕೆಯಿಂದ ಬರುವ ಭಕ್ತರ ಸಂಖ್ಯೆ ವರ್ಷ ವರ್ಷ ಜಾಸ್ತಿಯಾಗುತ್ತಿದೆ. ಇಲ್ಲಿ ಪೂಜೆ, ಸೇವೆ ಮಾಡಿಸಿದರೆ ಇಷ್ಟಾರ್ಥ ಸಿದ್ಧಿ ಜೊತೆಗೆ ಹರಕೆ ಸಂದಾಯವಾಗುತ್ತದೆ ಎನ್ನುವ ಹಲವು ಸನ್ನಿವೇಶಗಳಿವೆ. ನಾಗದೋಷ ಪರಿಹಾರಕ್ಕಾಗಿ ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಧರ್ಮಭೇದವಿಲ್ಲದೆ ಜನರು ಬರುತ್ತಾರೆ. ನಾಗದೋಷ ಪರಿಹಾರವೂ ಆಗುತ್ತದೆ. ಇಲ್ಲಿಗೆ ಬರುವ ಭಕ್ತರಿಗೆ ಇದೀಗ ವಿಶೇಷ ಮಾಹಿತಿಯು ಹೊರಬಿದ್ದಿದ್ದು, ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ದೇವಸ್ಥಾನವೆಂದು ಸ್ಥಾನಗಳಿಸಿದೆ.
ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳ ಪೈಕಿ ಪ್ರಸಿದ್ದ ನಾಗಕ್ಷೇತ್ರವಾಗಿರುವ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದು, ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿ ಗುರುತಿಸಿಕೊಂಡಿದೆ. ಕೊಲ್ಲೂರು ಮೂಕಾಂಬಿಕಾ ದೇವಾಲಯ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಗಳಿಸಿದೆ.
ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟಗಳ ಮಧ್ಯೆ ನೆಲೆಸಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ದೇಶದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿ ಖ್ಯಾತಿಯಾಗಿದ್ದು, ನಿಸರ್ಗ ಸೌಂದರ್ಯ, ಪುರಾಣ ಹಿನ್ನೆಲೆ ಮತ್ತು ವಿಶಿಷ್ಟ ಆಚರಣೆಗಳಿಂದ ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದೆ. ಅಲ್ಲದೇ, ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯದ ದೇವಸ್ಥಾನಗಳ ಆದಾಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿ ಹೊರಹೊಮ್ಮಿದೆ .
Mangaluru: Vedavardhana Theertha to enter Mangaluru on January 4th- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











