ಪುತ್ತೂರು: Tulu Times | ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಅರ್ಚಕ ದಂಪತಿಯಗಳನ್ನು ಬಂಧಿಸಲಾಗಿದೆ. ಇದೀಗ ಈ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಮಧ್ಯರಾತ್ರಿಮನೆಗೆ ನುಗ್ಗಿದ ದಂಪತಿಗಳು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ್ದಾರೆ. ಈ ಪ್ರಕರಣ ಕಂಡುಬಂದಂತೆ, ಪುರೋಹಿತ ಕೆಲಸ ಮಾಡುವ ಅರ್ಚಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುತ್ತೂರು ಮುಡೂರು ನಿವಾಸಿ ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿರುವ ಕಾರ್ತಿಕ್ ರಾವ್ (31) ಹಾಗೂ ಆತನ ಪತ್ನಿ ಕೆ.ಎಸ್ ಸ್ವಾತಿ ರಾವ್ (25) ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಈ ಖದೀಮ ದಂಪತಿಗಳು, ಎ.ವಿ ನಾರಾಯಣ ಮತ್ತು ಅವರ ಪತ್ನಿಯನ್ನು ಬೆದರಿಸಿ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ, ನೂಕಿದಾಗ ನಾರಾಯಣ ಅವರ ಪತ್ನಿಗೆ ಗಾಯವಾಗಿದೆ. ಮಹಿಳೆ ಹೆದರಿಕೆಯಿಂದ ಜೋರಾಗಿ ಕಿರುಚಿದ್ದಾರೆ. ಇದರಿಂದ ಭಯಗೊಂಡ ಆರೋಪಿಗಳು ಹಿಂಬಾಗಿಲಿನ ಮೂಲಕ ಪರಾರಿಯಾಗಿದ್ದಾರೆ. ಇನ್ನು ಮನೆಯಿಂದ ಯಾವುದೇ ವಸ್ತು ಕಳವಾಗಿಲ್ಲ. ಆದ್ರೆ, ಯಾರೋ ಇಬ್ಬರು ಸೇರಿ ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ ಎಂದು ನಾರಾಯಣ ದೂರು ನೀಡಿದ್ದಾರೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆಯನ್ನು ಕೈಗೆತ್ತಿಗೊಂಡ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡುತ್ತಿರುವುದು ತನಿಖೆಯಿಂದ ಗೊತ್ತಾಗಿದೆ, ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೊಕ್ಕಡದಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
ಪ್ರತ್ಯೇಕ ಪ್ರಕರಣದಲ್ಲಿ, ಕೊಕ್ಕಡ ಗ್ರಾಮದ ಹಳ್ಳಿಗೇರಿ ಎಂಬಲ್ಲಿ ಅಜಯ್ ಕುಮಾರ್ (39) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಸಂಭವಿಸಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಏನು..?
ಅಜಯ್ ಕುಮಾರ್ ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರರಾಗಿದ್ದಾರೆ. ಮಧ್ಯಾಹ್ನ ಊಟ ಮುಗಿಸಿದ ನಂತರ ಅಜಯ್ ತಮ್ಮ ಮನೆಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಕೆಲವು ಸಮಯದಿಂದ ಅವರು ಸ್ವಂತ ಆಟೋ ರಿಕ್ಷಾ ಚಾಲನೆ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಇನ್ನು ಅಜಯ್ ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
Puttur: Attempted robbery at principal’s house! Thieves arrested- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











