ಸುಳ್ಯ: Tulu Times | ಸುಳ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬಸ್ ಸಮಸ್ಯೆ ಖಂಡಿಸಿ, ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬಸ್ ಸಮಸ್ಯೆ ನಿವಾರಣೆ ಆಗದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸೋದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಪ್ರತಿಭಟನೆಯ ಮುಖ್ಯ ಬೇಡಿಕೆ ಏನು..?
ಸಮಯಪಾಲನೆಯಿಲ್ಲದ ಬಸ್ ಸಂಚಾರ, ಬಸ್‌ಗಳ ಕೊರತೆ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ತಕ್ಷಣವೇ ಪರಿಹರಿಸಬೇಕು ಎಂಬುದು ಪ್ರತಿಭಟನೆಯ ಮುಖ್ಯ ಬೇಡಿಕೆಯಾಗಿದ್ದು, ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಜ.3ರಂದು ಪ್ರತಿಭಟನೆ ನಡೆಸಲಾಯಿತು.
ಎಬಿಪಿಪಿ ವಿದ್ಯಾರ್ಥಿಗಳು ಹೇಳೋದೇನು..?
ಈ ವೇಳೆ ಮಾತನಾಡಿದ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮುಳಿಯ ಸಾತ್ವಿಕ್, ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗುತ್ತಿದೆ. ಗ್ರಾಮೀಣ ಭಾಗಗಳಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ವಿದಾರೆ. ಹೀಗಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳೊಂದಿಗೆ ನಿಂತಿದೆ. ಬಸ್ ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ. ಇನ್ನು ನಗರ ಕಾರ್ಯದರ್ಶಿಗಳಾದ ಪುನೀತ್ ಮಾತನಾಡಿ, ವಿದ್ಯಾರ್ಥಿಗಳ ಸಹನಶೀಲತೆಗೆ ಮಿತಿ ಇದೆ. ಸಮಸ್ಯೆಯನ್ನು ತಕ್ಷಣವೇ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದರು. ಪ್ರೀತೇಶ್ ಕಣೆಮರಡ್ಕ, ಶ್ರೀಶರಣ್ ಮೊಗ್ರ, ಅಮಿತ್ ನಾಯಕ್, ಹೋರಾಟ ಪ್ರಮುಖ್ ಕೀರ್ತನ್, ಮಾನ್ವಿತ್ ಸೇರಿದಂತೆ ಅನೇಕ ವಿದ್ಯಾರ್ಥಿ ನಾಯಕರು ಭಾಗವಹಿಸಿ ಕೆ. ಎಸ್.ಆರ್.ಟಿ.ಸಿ ಆಡಳಿತದ ವಿರುದ್ಧ ಘೋಷಣೆ ಕೂಗಿ, ಪ್ರತಿಭಟನೆ ನಡೆಸಿದರು.
ಜೆಇಇ ಮೇನ್ 2026 ಅಭ್ಯರ್ಥಿಗಳು ಗುರುತಿನ ಚೀಟಿ ಪರಿಶೀಲನೆ ಮಾಡಿಕೊಳ್ಳಬೇಕು: ಎನ್‌ಟಿಎ ಸೂಚನೆ
ನವದೆಹಲಿ: Tulu Times | ಜಂಟಿ ಎಂಟ್ರನ್ಸ್ ಎಕ್ಸಾಂ (ಜೆಇಇ)ನ 2026 ರ ನೋಂದಣಿ ವೇಳೆ ಸಲ್ಲಿಸಿರುವ ಗುರುತಿನ ಚೀಟಿ ಪಿಡಿಎಫ್ ದಾಖಲೆಗಳನ್ನು ಜನವರಿ 15, 2026ರೊಳಗೆ ಪರಿಶೀಲಿಸಿಕೊಳ್ಳುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಅಭ್ಯರ್ಥಿಗಳಿಗೆ ಸೂಚಿಸಿದೆ.
ಎನ್‌ಟಿಎ ಹೊರಡಿಸಿದ ಅಧಿಕೃತ ಪ್ರಕಟಣೆಯಲ್ಲಿ ಕೆಲವು ಅಭ್ಯರ್ಥಿಗಳು ಆಧಾರ್ ಕಾರ್ಡ್ ಹೊರತುಪಡಿಸಿ ಇತರ ಗುರುತಿನ ದಾಖಲೆಗಳನ್ನು ಬಳಸಿ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಕೆಲ ಪ್ರಕರಣಗಳಲ್ಲಿ, ಅರ್ಜಿ ಪ್ರಕ್ರಿಯೆ ವೇಳೆ ಅಭ್ಯರ್ಥಿಗಳು ತೆಗೆದ ಲೈವ್ ಫೋಟೋಗಳು ಯುಐಡಿಎಐ ದಾಖಲೆಗಳಲ್ಲಿ ಇರುವ ಫೋಟೋಗಳಿಗೆ ಹೊಂದಿಕೆಯಾಗಿಲ್ಲ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರಿಣಾಮಗೊಂಡ ಅಭ್ಯರ್ಥಿಗಳಿಗೆ ತಮ್ಮ ಗುರುತನ್ನು ದೃಢೀಕರಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಸಹಿ ಮಾಡಲಾದ ಹಾಗೂ ದೃಢೀಕರಿಸಲಾದ ಪ್ರಮಾಣಪತ್ರದೊಂದಿಗೆ ಇತ್ತೀಚಿನ ಫೋಟೋವನ್ನು ತಮ್ಮ ಶಾಲೆ/ಕಾಲೇಜಿನ ಪ್ರಾಂಶುಪಾಲರು ಅಥವಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಅಪ್‌ಲೋಡ್ ಮಾಡಬೇಕು ಎಂದು ಸೂಚಿಸಲಾಗಿದೆ.
ಕೆಲವು ಅಭ್ಯರ್ಥಿಗಳಿಗೆ ದೃಢೀಕರಣಾಧಿಕಾರಿಗಳನ್ನು ಸಂಪರ್ಕಿಸಲು ತೊಂದರೆ ಉಂಟಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇದೀಗ ಕ್ಲಾಸ್-1 ಗಜೆಟೆಡ್ ಅಧಿಕಾರಿಗಳಿಂದಲೂ ದೃಢೀಕರಣ ಪಡೆಯಲು ಅವಕಾಶ ನೀಡಲಾಗಿದೆ. ಇದರಲ್ಲಿ ತಹಸೀಲ್ದಾರ್, ಆದಾಯ ಅಧಿಕಾರಿ, ಎಸ್‌ಡಿಎಂ. ಡಿಎಂ ಅಥವಾ ಎನ್‌ಆರ್‌ಐ ಅಭ್ಯರ್ಥಿಗಳಿಗಾಗಿ ಭಾರತೀಯ ರಾಯಭಾರ ಕಚೇರಿಯ ಕ್ಲಾಸ್-1 ಗಜೆಟೆಡ್ ಅಧಿಕಾರಿಗಳು ಸೇರಿದ್ದಾರೆ ಎಂದು ಎನ್‌ಟಿಎ ತಿಳಿಸಿದೆ.
ABVP students protest in Sullia, condemning the KSRTC bus problem!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











