ಉಡುಪಿ: Tulu Times | ಕುಖ್ಯಾತ ಅಂತರ್ ರಾಜ್ಯ ಕಳ್ಳ ಉಮೇಶ್ ಬಳೆಗಾರ @ ಉಮೇಶ್ ಪಿ @ ಉಮೇಶ್ ರೆಡ್ಡಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದಲ್ಲಿ ನಡೆದ ಮನೆ ಕಳವು ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕುಖ್ಯಾತ ಅಂತರ್‌ರಾಜ್ಯ ಕಳ್ಳ ಉಮೇಶ್ ಬಳೆಗಾರ @ ಉಮೇಶ್ ಪಿ @ ಉಮೇಶ್ ರೆಡ್ಡಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಉಡುಪಿ: ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳ ರಾಶಿ ಕಂಡು ಜನ ಶಾಕ್ !
ಕಳ್ಳತನ ಮಾಡಿದ್ದು ಎಲ್ಲೆಲ್ಲಿ..?
ಮಲ್ಲಾರು ಗ್ರಾಮದ ರಾಮನಾಥ ಕೃಪಾ ಎಂಬ ಮನೆಯ ನಿವಾಸಿ ರಾಘವೇಂದ್ರ ಕಿಣಿ ಅವರು ಮನೆಗೆ ಹೊರಗಿನಿಂದ ಬೀಗ ಹಾಕಿ ಕೀಲಿಯನ್ನು ವಿದ್ಯುತ್ ಮೀಟರ್ ಬಾಕ್ಸ್ ನಲ್ಲಿ ಇಟ್ಟು ತೆರಳಿದ್ದ ವೇಳೆ, ಕಳ್ಳರು ಮೀಟರ್ ಬಾಕ್ಸ್‌ನಲ್ಲಿದ್ದ ಕೀಯನ್ನು ಬಳಸಿ ಮನೆ ಬಾಗಿಲು ತೆರೆದು ಒಳಗಿನಿಂದ ಲಾಕ್ ಮಾಡಿಕೊಂಡು, ಬೆಡ್ ರೂಂನ ಕಪಾಟಿನಲ್ಲಿ ಇಟ್ಟಿದ್ದ ಸುಮಾರು ₹3.90 ಲಕ್ಷ ಮೌಲ್ಯದ 72 ಗ್ರಾಂ ಚಿನ್ನದ ಆಭರಣಗಳು ಹಾಗೂ ಸುಮಾರು ₹1,500 ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಸುಳ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ!
ಆರೋಪಿ ಉಮೇಶ್ ಬಳೆಗಾರ ವಿರುದ್ಧ ಪ್ರಕರಣಗಳೇನು..?
ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 16 ಪ್ರಕರಣಗಳು ಹಾಗೂ ಕರ್ನಾಟಕದ ವಿವಿಧ ಠಾಣೆಗಳಲ್ಲಿ ಸುಮಾರು 17 ಪ್ರಕರಣಗಳು ದಾಖಲಾಗಿವೆ. ಉಮೇಶ್ ಬಳೆಗಾರ ವಿರುದ್ಧ ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ಕಡೆ ಪ್ರಕರಣಗಳು ದಾಖಲಾಗಿವೆ. ಸುಮಾರು 8 ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಯಾಗಿದೆ. ಕೇರಳದ ತನ್ನಿಪಲಂ, ಮಾವೂರು ತ್ರಿಶೂರ್ ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಬೆಳ್ತಂಗಡಿ, ಪುತ್ತೂರು ನಗರ, ಮೂಡಬಿದ್ರೆ, ಉತ್ತರ ಕನ್ನಡ ಜಿಲ್ಲೆಯ ಶಿರ್ಸಿ ಗ್ರಾಮಾಂತರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಬಸವನಹಳ್ಳಿ ಠಾಣೆಗಳಲ್ಲಿ ಜಾಮೀನುರಹಿತ ವಾರಂಟ್‌ಗಳು ಜಾರಿಯಾಗಿವೆ.
ಇದನ್ನೂ ಓದಿ: ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿಯುತ್ತಿದೆ : ಆರೋಗ್ಯ ಸಮಸ್ಯೆ ಹೆಚ್ಚಾಗುವ ಸಾಧ್ಯತೆ
Udupi: Police arrest notorious thief!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











