ಬ್ರೇಕಿಂಗ್ ನ್ಯೂಸ್
ಕರ್ನಾಟಕ

ವಿಟ್ಲದಲ್ಲಿ ರೌಡಿಶೀಟರ್‌ ಗಡಿಪಾರಿಗೆ ಆದೇಶ !

ವಿಟ್ಲ: Tulu Times | ಕೇಪು ಗ್ರಾಮದ ಬಡಕೋಡಿ ಮನೆಯ ಗಣೇಶ್ @ ಗಣೇಶ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆಸಿರು ಕುರಿತು ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ.

ಈತನ ಮೇಲೆ, ಒಟ್ಟು 14 ಪ್ರಕರಣಗಳು ದಾಖಲಾಗಿದೆ.  ದೊಂಬಿ, ಕೊಲೆ ಯತ್ನ, ಜೂಜು, ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಯಂತಹ  ಪ್ರಕರಣಗಳು ದಾಖಲಾಗಿದೆ.  ಮಂಗಳೂರು ರವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ.  ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯ ಮೇರೆಗೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಸಹಾಯಕ ಆಯುಕ್ತರ ಆದೇಶದಂತೆ ಗಣೇಶ್ ನನ್ನು ಸುರಕ್ಷಿತವಾಗಿ ಆಲೂರು ಪೊಲೀಸ್‌ ಠಾಣೆಗೆ ಶಿಫ್ಟ್‌ ಮಾಡಲಾಗಿದೆ.

ಇದನ್ನೂ ಓದಿ: ಜಮೀರ್ ಖಾನ್ ಬಿಡ್ಡಿಂಗ್ ಕಾರಣಕ್ಕೆ ಪವನ್ ನೆಜ್ಜೂರ್ ಬಲಿ: ಶೋಭಾ ಕರಂದ್ಲಾಜೆ ಆರೋಪ

ಉಡುಪಿ: ಕುಖ್ಯಾತ ಕಳ್ಳನನ್ನು ಬಂಧಿಸಿದ ಪೊಲೀಸರು !

ಉಡುಪಿ: ಕುಖ್ಯಾತ ಅಂತರ್ ರಾಜ್ಯ ಕಳ್ಳ ಉಮೇಶ್ ಬಳೆಗಾರ @ ಉಮೇಶ್ ಪಿ @ ಉಮೇಶ್ ರೆಡ್ಡಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದಲ್ಲಿ ನಡೆದ ಮನೆ ಕಳವು ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕುಖ್ಯಾತ ಅಂತರ್‌ರಾಜ್ಯ ಕಳ್ಳ ಉಮೇಶ್ ಬಳೆಗಾರ @ ಉಮೇಶ್ ಪಿ @ ಉಮೇಶ್ ರೆಡ್ಡಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸುಳ್ಯದಲ್ಲಿ ಕೆ.ಎಸ್.ಆ‌ರ್.ಟಿ.ಸಿ ಬಸ್ ಸಮಸ್ಯೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ!

ಕಳ್ಳತನ ಮಾಡಿದ್ದು ಎಲ್ಲೆಲ್ಲಿ..?

ಮಲ್ಲಾರು ಗ್ರಾಮದ ರಾಮನಾಥ ಕೃಪಾ ಎಂಬ ಮನೆಯ ನಿವಾಸಿ ರಾಘವೇಂದ್ರ ಕಿಣಿ ಅವರು ಮನೆಗೆ ಹೊರಗಿನಿಂದ ಬೀಗ ಹಾಕಿ ಕೀಲಿಯನ್ನು ವಿದ್ಯುತ್‌ ಮೀಟ‌ರ್ ಬಾಕ್ಸ್‌ನಲ್ಲಿ ಇಟ್ಟು ತೆರಳಿದ್ದ ವೇಳೆ, ಕಳ್ಳರು ಮೀಟರ್ ಬಾಕ್ಸ್‌ನಲ್ಲಿದ್ದ ಕೀಯನ್ನು ಬಳಸಿ ಮನೆ ಬಾಗಿಲು ತೆರೆದು ಒಳಗಿನಿಂದ ಲಾಕ್ ಮಾಡಿಕೊಂಡು, ಬೆಡ್ ರೂಂನ ಕಪಾಟಿನಲ್ಲಿ ಇಟ್ಟಿದ್ದ ಸುಮಾರು ₹3.90 ಲಕ್ಷ ಮೌಲ್ಯದ 72 ಗ್ರಾಂ ಚಿನ್ನದ ಆಭರಣಗಳು ಹಾಗೂ ಸುಮಾರು ₹1,500 ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿ ಎಸ್ಕೆಪ್ ಆಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Rowdy sheeter in Vitla ordered to be deported!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page