ಬ್ರೇಕಿಂಗ್ ನ್ಯೂಸ್
ಕರ್ನಾಟಕಸುಳ್ಯ

ಸಂಪಾಜೆಯಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಉಪವಾಸ ಸತ್ಯಾಗ್ರಹ

ಮಡಿಕೇರಿ: Tulu Times | ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಎಲ್. ಸುರೇಶ್ ಅವರು ಸಂಪಾಜೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನೇದಿನೇ ನೀರಿನ ಸಮಸ್ಯೆ ಕಾಡುತ್ತಿದ್ದು,  ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ, ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಎಲ್. ಸುರೇಶ್ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ನೀರಿನ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ಗ್ರಾಮಸ್ಥರ ಪರವಾಗಿ ಈ ಸತ್ಯಾಗ್ರಹ ನಡೆಯುತ್ತಿದೆ. ಜನಸಾಮಾನ್ಯರ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ಎಂದು ಸುರೇಶ್  ತಿಳಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಂಚಾಯತ್ ಆಡಳಿತ ಕೂಡಲೇ ಎಚ್ಚೆತ್ತು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ. ಹಾಗೂ ಸಮರ್ಪಕ ಪರಿಹಾರ ಒದಗಿಸಬೇಕೆಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸುಳ್ಯದಲ್ಲಿ ಆರ್‌ಎಸ್‌ಎಸ್ ಶತಾಬ್ದಿ ವರ್ಷ: ಹಿಂದೂ ಸಂಗಮ ಸಮಿತಿ ಉದ್ಘಾಟನೆ !

ಸುಳ್ಯ:  ಪ್ರತ್ಯೇಕ ಪ್ರಕರಣದಲ್ಲಿ, ಸುಳ್ಯದಲ್ಲಿ ಆರ್‌ಎಸ್‌ಎಸ್‌ ಶತಾಬ್ದಿ ವರ್ಷ ಆಚರಣೆ ಹಿನ್ನೆಲೆ ಹಿಂದೂ ಸಂಗಮ ಸಮಿತಿ ಉದ್ಘಾಟನೆ ಕಾರ್ಯಕ್ರಮವು ಶ್ರೀ ದುರ್ಗಾ ಪರಮೇಶ್ವರಿ ಕಲಾ ಮಂದಿರ ಕೇರ್ಪಳದಲ್ಲಿ ನಡೆಯಿತು.

ಈ ವೇಳೆ ಆರ್ ಎಸ್ ಎಸ್ ಗೆ ನೂರು ವರ್ಷದ ತುಂಬಿದ ಹಿನ್ನಲೆ ಮಂಡಲಗಳಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು. ಈ ಬಗ್ಗೆ ಸೀತಾರಾಮ್ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸಂಘಚಾಲಕ್ ಚಂದ್ರಶೇಖರ ಭಟ್ ತಳೂರು, ರವೀಂದ್ರ ಪುತ್ತೂರು, ಉದ್ಯಮಿ ಎಂ.ಬಿ ಸದಾಶಿವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶತಾಬ್ದಿ ವರ್ಷದಲ್ಲಿ ಸಮಾಜದಲ್ಲಿ ಐದು ಪ್ರಮುಖ ಬದಲಾವಣೆಗಳನ್ನು ತರಲು ಸಂಘವು ಗುರಿ ಇಟ್ಟುಕೊಂಡಿದೆ. ಅವುಗಳೆಂದರೆ: ಸಾಮಾಜಿಕ ಸಮರಸತೆ, ಕುಟುಂಬ ಪ್ರಬೋಧನ, ಪರಿಸರ ಸಂರಕ್ಷಣೆ, ಸ್ವದೇಶಿ ಜೀವನಶೈಲಿ ಮತ್ತು ನಾಗರಿಕ ಕರ್ತವ್ಯ ಪ್ರತಿ ಗ್ರಾಮ, ಪ್ರತಿ ಬಸ್ತಿ, ಪ್ರತಿ ಮನೆ’ ಎಂಬ ಅಭಿಯಾನದ ಮೂಲಕ ದೇಶಾದ್ಯಂತ ಲಕ್ಷಾಂತರ ಮನೆಗಳನ್ನು ತಲುಪಲು ಸಂಘ ಯೋಜಿಸಿದೆ. ಭಾರತದಾದ್ಯಂತ ಸುಮಾರು 1,500 ರಿಂದ 1,600 ಬೃಹತ್ ಹಿಂದೂ ಸಮ್ಮೇಳನಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಈ ಶತಾಬ್ದ ವರ್ಷವು ಸಂಘದ ಶಾಖೆಗಳ ವಿಸ್ತರಣೆ ಮತ್ತು ದೇಶಾದ್ಯಂತ ಸಾಮಾಜಿಕ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.

Fasting for a solution to the water problem in Sampaje- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 125

You cannot copy content of this page