ಬ್ರೇಕಿಂಗ್ ನ್ಯೂಸ್
ಕಡಬಕರ್ನಾಟಕ

ತಾಯಿ ಮಗು ಕೆರೆಗೆ ಹಾರಿ ಆತ್ಮಹತ್ಯೆ ಕೇಸ್‌ ಬಗ್ಗೆ ಅನುಮಾನದ ಹುತ್ತ!

ಬೆಳ್ಳಾರೆ: Tulu Times | ಇತ್ತೀಚೆಗೆ ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ 34 ವರ್ಷದ ಮಗಳು ಆಕೆಯ 3 ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಮೃತಪಟ್ಟಿರುವ ಕೇಸ್‌ ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ರುಮ್ಮಯ್ಯ ಗೌಡ (66) ಅವರ 34 ವರ್ಷದ ಮಗಳು ಆಕೆಯ 3 ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಮೃತ ಪಟ್ಟಿರುವ ಘಟನೆಗೆ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ವುಚಾರಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ತಂದೆ ರುಮ್ಮಯ್ಯ ಗೌಡ ಅವರು ನೀಡಿದ ದೂರಿನ ಅನ್ವಯ, ಕಳೆದ 4ರಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 01/2026 ಕಲಂ 103 BNS-2023ರಂತೆ ಪ್ರಕರಣ ದಾಖಲಾಗಿದ್ದು, ನಮ್ಮ ಮಗಳ ಮರಣದಲ್ಲಿ ಸಂಶಯವಿದೆ ಎಂದು ರತ್ನಾವತಿ (55 ವ) ಎಂಬವರು ದೂರು  ನೀಡಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಿನಾಂಕ 4.1.20260ರಂದು ಯು.ಡಿ.ಆರ್ ನಂಬ್ರ 01/2026 ಕಲಂ: 194(3)(i) (iv) BNSS-2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಈ ಘಟನೆಗೆ ಸಂಬಂಧಿಸಿದಂತೆ ಮೇಲಿನ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮಂಗಳೂರು ಪೊಲೀಸ್ ಮುಖ್ಯಸ್ಥ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಸೂಪರಿಂಟೆಂಡೆಂಟ್‌ರನ್ನು ವರ್ಗಾಯಿಸುವ ಯತ್ನ!

ಮಂಗಳೂರು: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ನ್ಯಾಯವನ್ನು ಕಾಪಾಡುವ ಪ್ರಮುಖ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ. ಅಪರಾಧ, ಅಕ್ರಮ, ಅನ್ಯಾಯಗಳ ವಿರುದ್ಧ ಧೈರ್ಯವಾಗಿ ನಿಲ್ಲುವ ಪೊಲೀಸ್ ಅಧಿಕಾರಿಗಳು ನಿಜಾರ್ಥದಲ್ಲಿ ಸಮಾಜದ ನಿಜವಾದ ರಕ್ಷಕರು. ಅನ್ಯಾಯವನ್ನು ಮಟ್ಟ ಹಾಕುವ ಪೊಲೀಸ್‌ಗಳು ಯಾವುದೇ ಒತ್ತಡ, ಪ್ರಭಾವ ಅಥವಾ ಬೆದರಿಕೆಗಳಿಗೆ ಮಣಿಯದೆ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತಾರೆ.

ಇಂತಹ ಪೊಲೀಸ್ ಅಧಿಕಾರಿಗಳು ಭ್ರಷ್ಟಾಚಾರ, ಮಾಫಿಯಾ, ಅಕ್ರಮ ಜೂಜು, ಮಾದಕ ವಸ್ತು ಜಾಲ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ. ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ದುರ್ಬಲ ವರ್ಗದವರ ರಕ್ಷಣೆಯಲ್ಲಿ ಇವರ ಪಾತ್ರ ಅತ್ಯಂತ ಮಹತ್ವದ್ದು. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಹೆದರಿರುವವರಿಗೆ ಪೊಲೀಸ್‌ಗಳು ಧೈರ್ಯ ತುಂಬುತ್ತಾರೆ.

ಆದರೆ ಇದೀಗ ಮಂಗಳೂರಿನಲ್ಲಿ ನಡೆದ ಅನ್ಯಾಯಗಳನ್ನು ತಡೆದ ಪೋಲಿಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಪ್ಲಾನ್ ನಡಿತಾ ಇರೋದು ಬೆಳಕಿಗೆ ಬಂದಿದೆ. ಹೌದು… ಸುಧೀರ್ ಕುಮಾರ್ ರೆಡ್ಡಿ ಮತ್ತು ಡಾ. ಅರುಣ್ ಜಿಲ್ಲೆಗೆ ಆಗಮಿಸಿದ ಬಳಿಕ ಅಕ್ರಮ ಚಟುವಟಿಕೆ ನಡೆಸುವವರಿಗೆ ಕಾರ್ಯನಿರ್ವಹಿಸುವುದು ಕಷ್ಟಕರವಾಗಿದ್ದು, ಅದರಿಂದಾಗಿ ಇವರ ವರ್ಗಾವಣೆಗೆ ಬೇರೆಬೇರೆ ತಂತ್ರಗಳನ್ನು ಬಳಸಲಾಗುತ್ತಿದೆ ಎನ್ನಲಾಗಿದೆ.

ಇದಕ್ಕೂ ಮುನ್ನ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಸಂದರ್ಭಗಳಲ್ಲಿ ಧ್ವನಿವರ್ಧಕ (ಲೌಡ್‌ ಸ್ಪೀಕರ್) ವಿಚಾರವನ್ನು ಮುಂದಿಟ್ಟುಕೊಂಡು ಅಧಿಕಾರಿಗಳ ವಿರುದ್ದ ಪ್ರತಿಭಟನೆಗಳು ನಡೆದಿದ್ದವು. ಇದೀಗ ಧಾರ್ಮಿಕ ಭಾವನೆ, ಆಚರಣೆ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಅಧಿಕಾರಿಗಳನ್ನು ಗುರಿಯಾಗಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆಡಳಿತಾರೂಢ ಪಕ್ಷದ ಕೆಲ ನಾಯಕರು ವರ್ಗಾವಣೆಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು, ಕೆಪಿಸಿಸಿ ಹಿರಿಯ ನಾಯಕರು ಹಾಗೂ ಬೆಂಗಳೂರಿನ ಉನ್ನತ ನಾಯಕತ್ವ ಈ ಹಂತದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಲ್ಲ ಎನ್ನಲಾಗಿದೆ.

Suspicion mounts over mother-child suicide case after jumping into lake!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page