ಮಂಗಳೂರು: Tulu Times | ಮಂಗಳೂರಿನ ಗುರುಪುರ ಸೇತುವೆಯ ಬಲಿ ತನ್ನ ಗೆಳತಿಯ ಎದುರಲ್ಲಿಯೇ ಯುವತಿಯೋರ್ವಳು ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಮೃತ ಯುವತಿಯಾಗಿದ್ದು, ಈಕೆ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಆತ ತನಗೆ ಮೋಸ ಮಾಡಿದ್ದಾನೆ ಎನ್ನುವ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ನವ್ಯಾ ತನ್ನ ಸ್ನೇಹಿತೆಯ ಜೊತೆ ಸ್ಕೂಟರ್ ನಲ್ಲಿ ಬಂದು ಮಧ್ಯಾಹ್ನ ವೇಳೆಗೆ ಗುರುಪುರ ಸೇತುವೆ ಬಳಿ ತಲುಪಿದಾಗ ಸ್ಕೂಟರ್ ನಿಲ್ಲಿಸಿ ತಾನು ನದಿಗೆ ಹಾರುತ್ತೇನೆ ಎಂದು ಹೇಳಿ ನೀರಿಗೆ ಹಾರಿದ್ದಾಳೆ ಎನ್ನಲಾಗಿದೆ.
ಯುವತಿ ನೀರಿಗೆ ಹಾರಲು ಕಾರಣವೇನು..?
ತಕ್ಷಣವೇ ನವ್ಯಾಳ ಗೆಳತಿ ಕೈ ಹಿಡಿದು ಎಳೆದರೂ ಬದುಕಿಸಲು ಸಾಧ್ಯವಾಗಲಿಲ್ಲ. ಈ ವೇಳೆ ಕೂಡಲೇ ಪೊಲೀಸರು, ಅಗ್ನಿ ಶಾಮಕ ದಳದ ಸಿಬಂದಿಗೆ ಫೋನ್ ಮಾಡಿ ತಿಳಿಸಿದ್ದಾರೆ. ನಂತರ, ಅಗ್ನಿ ಶಾಮಕ ದಳದವರು ಶವವನ್ನು ಮೇಲಕ್ಕೆತ್ತಿದ್ದಾರೆ. ಹತ್ತಿರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಸೂಸೈಡ್ ಕೇಸ್ ಬಗ್ಗೆ, ನವ್ಯಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ನಂತರ ಆತ ಮದುವೆಯಾಗುವುದಾಗಿ ವಂಚಿಸಿದ್ದಾನೆ ಎನ್ನಲಾಗಿದೆ. ಆತನ ಭೇಟಿಗೂ ಮುಂದಾಗಿ ಕರೆ ಮಾಡಿ, ಬಳಿಕ ಡೆತ್ ನೋಟ್ ಬರೆದಿದ್ದಾಳೆ ಎನ್ನಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಚಿತ್ರಮಂದಿರದ ಮಹಿಳಾ ಶೌಚಾಲಯದಲ್ಲಿ ವೀಡಿಯೋ : ಅಪ್ರಾಪ್ತ ಬಾಲಕನ ಬಂಧನ
ಬೆಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ, ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಚಿತ್ರಮಂದಿರದ ಮಹಿಳಾ ಶೌಚಾಲಯದ ಒಳಗೆ ಮಹಿಳೆಯರ ವಿಡಿಯೋಗಳನ್ನು ಗುಪ್ತವಾಗಿ ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಚಿತ್ರಮಂದಿರದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿದ್ದ ಪೇಟ್ರೋಲಿಂಗ್ ಪೊಲೀಸ್ ಸಿಬ್ಬಂದಿಯ ಗಮನಕ್ಕೆ ಬಂದಿರುವುದು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮಾಧ್ಯಮದ ವರದಿಗಳ ಪ್ರಕಾರ, ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಚಿತ್ರಮಂದಿರದಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ದೊಡ್ಡ ಗುಂಪೊಂದು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ಕಂಡು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎನ್ನಲಾಗಿದೆ.
Mangaluru: A young woman committed suicide by jumping into a river in front of her girlfriend!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











