ಬ್ರೇಕಿಂಗ್ ನ್ಯೂಸ್
ಕರ್ನಾಟಕಮಂಗಳೂರು

ಫ್ಲ್ಯಾಟ್ ನಲ್ಲಿ ಆಕಸ್ಮಿಕ ಬೆಂಕಿ: ಸಿಲಿಕಾನ್‌ ಸಿಟಿಯಲ್ಲಿ ಮಂಗಳೂರಿನ ಯುವತಿ ದುರ್ಮರಣ !

ಬೆಂಗಳೂರು: Tulu Times | ಬೆಂಗಳೂರಿನ ರಾಮ ಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಹ್ಮಣ್ಯ ಲೇಔಟ್‌ ಅಪಾರ್ಟ್ ಮೆಂಟ್‌ನಲ್ಲಿ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅನಾಹುತ ಉಂಟಾಗಿದ್ದು, ಮಂಗಳೂರಿನ ಯುವತಿಯೋರ್ವಳು ರೂಂ ನಲ್ಲಿ ಬೆಂಕಿಗೆ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಶಾರ್ಟ್‌ ಸರ್ಕ್ಯೂಟ್‌ ನಿಂದ ಹಬ್ಬಿದ ಬೆಂಕಿ!

ಕಳೆದ ಒಂದೂವರೆ ವರ್ಷದಿಂದ ಮಂಗಳೂರಿನ ಕಾವೂರು ಮೂಲದ ಶರ್ಮಿಳಾ (34)  ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಸ್ನೇಹಿತೆ ಜತೆ ಅಪಾರ್ಟ್ಮೆಂಟ್‌ ನಲ್ಲಿ  ವಾಸವಾಗಿದ್ದರು. ತನ್ನ ಮನೆಗೆ ಹತ್ತಿರ ಆಗುವಂತೆ ಆಫೀಸ್‌ ಕೂಡ ಇತ್ತು. ಹೀಗಾಗಿ ಓಡಾಡಲು ಸುಲಭವಾಗಲಿ ಎಂದು
ಮನೆ ಸಮೀಪದ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಶರ್ಮಿಳಾಳ ಗೆಳತಿ ರಜೆ ಇದ್ದುದರಿಂದ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಶರ್ಮಿಳಾ ಒಬ್ಬಳೇ ರೂಂನಲ್ಲಿ ಇದ್ದಳು ಎನ್ನಲಾಗಿದೆ. ರಾತ್ರಿ 11 ಗಂಟೆಗೆ ಮನೆಯ ಕೋಣೆಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮನೆಯ ರೂಂ ನ ತುಂಬಾ ಬೆಂಕಿ ಆವರಿಸಿಕೊಂಡಿದೆ. ಆಗ ಪಕ್ಕದ ಕೋಣೆಯಲ್ಲಿದ್ದ ಶರ್ಮಿಳಾ ಕೂಡಲೇ ಆ ಕೋಣೆ ಕಡೆ ಬರೋಕೆ ಪ್ರಯತ್ನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪವರ್‌ ಕೂಡ ಆಫ್‌ ಆಗಿದೆ. ಹೀಗಾಗಿ,  ಕತ್ತಲೆಯಲ್ಲಿ ಕಿಟಕಿ ಹಾಗೂ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: ಸುಳ್ಳು ಸೃಷ್ಟಿಸಿ, ಹರಡುವುದು ಕಾಂಗ್ರೆಸ್: ಪ್ರಲ್ಹಾದ ಜೋಶಿ

ಮನೆಯ ತುಂಬೆಲ್ಲ ದಟ್ಟವಾದ ಹೊಗೆ ಆವರಿಸಿ ಶರ್ಮಿಳಾ  ಸ್ಥಳದಲ್ಲೇ ಉಸಿರುಗಟ್ಟೆ  ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿಯಿದೆ. ಇನ್ನು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಳೆದ ಒಂದು ವರ್ಷಗಳ ಹಿಂದೆಯಷ್ಟೇ ಕೆಲಸ ಬೆಂಗಳೂರಿಗೆ ಬಂದ ಶರ್ಮಿಳಾ, ಬೆಂಕಿ ಅನಾಹುತಕ್ಕೆ ಸಾವನ್ನಪ್ಪಿರುವುದು ನಿಜಕ್ಕೂ ಕುಟುಂಬಸ್ಥರಿಗೆ ದುಃಖ ತಂದಿದೆ. ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ‘ಕರ್ನಾಟಕ ಉಳಿಸಿ, ಕಾಂಗ್ರೆಸ್ ತೊಲಗಿಸಿ’ ‘ಬೆಂಗಳೂರು ಉಳಿಸಿ’ ಹೋರಾಟ

Accidental fire in flat: Young woman from Mangalore dies in Silicon City!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:‌ https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 158

You cannot copy content of this page