ಬೆಂಗಳೂರು : Tulu Times | ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗುವ ಸೂಚನೆಗಳಿದ್ದು, ಬುಧವಾರ ಬೆಳಿಗ್ಗೆಯಿಂದಲೇ ಜನರು ಚಳಿಯನ್ನು ಅನುಭವಿಸುವ ಸಾಧ್ಯತೆಯಿದ್ದು, ಮುಂದಿನ 48 ಗಂಟೆಗಳ ಅವಧಿಯಲ್ಲಿ ತಾಪಮಾನದಲ್ಲಿ ಗಮನಾರ್ಹ ಇಳಿಕೆ ಸಂಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಾಮಾನ್ಯಕ್ಕಿಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ;
ನಗರದ ಹಲವೆಡೆ ಬೆಳಗಿನ ಸಮಯದಲ್ಲಿ ಚದುರಿದ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಉದ್ಯಾನಗಳು ಹಾಗೂ ಕಡಿಮೆ ಎತ್ತರದ ಪ್ರದೇಶಗಳಲ್ಲಿ ಮಂಜಿನ ಪ್ರಭಾವ ಹೆಚ್ಚು ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ಮೇಲ್ವಿಚಾರಣಾ ಕೇಂದ್ರ ಮಾಹಿತಿಯಂತೆ, ಪ್ರಸ್ತುತ ಮುಂದುವರಿಯುತ್ತಿರುವ ಒಣ ಹವಾಮಾನವೇ ಚಳಿಗೆ ಪ್ರಮುಖ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅನೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.
ಮಕ್ಕಳು ಮತ್ತು ಹಿರಿಯ ನಾಗರಿಕರು ಹೆಚ್ಚಿನ ಎಚ್ಚರ ವಹಿಸುವಂತೆ ಸಲಹೆ ;
ಬೆಳಿಗ್ಗೆ ಹಾಗೂ ರಾತ್ರಿ ಸಮಯದಲ್ಲಿ ಚಳಿ ಹೆಚ್ಚು ಕಾಡುವ ನಿರೀಕ್ಷೆಯಿದೆ. ಆದರೆ, ಮಳೆಯ ಆತಂಕ ಇಲ್ಲದೆ ವಾರಪೂರ್ತಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜನರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ವೈದ್ಯರು ಮತ್ತು ಆರೋಗ್ಯ ತಜ್ಞರು ಚಳಿಯಿಂದ ರಕ್ಷಿಸಿಕೊಳ್ಳಲು ಬಿಸಿ ಬಟ್ಟೆ ಧರಿಸುವಂತೆ, ವಿಶೇಷವಾಗಿ ಮಕ್ಕಳು ಮತ್ತು ಹಿರಿಯ ನಾಗರಿಕರು ಹೆಚ್ಚಿನ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ. ಹವಾಮಾನ ಇಲಾಖೆ ಮುಂದಿನ ದಿನಗಳಲ್ಲೂ ತಾಪಮಾನ ಮತ್ತು ಮಂಜಿನ ಸ್ಥಿತಿಗತಿಯ ಬಗ್ಗೆ ನಿರಂತರವಾಗಿ ಮಾಹಿತಿ ನೀಡುವುದಾಗಿ ತಿಳಿಸಿದ್ದು, ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದೆ.
Bangalore: Cold intensity increases: Morning fog, low temperature warning – ತುಳು ಟೈಮ್ಸ್
ಇದನ್ನೂ ಓದಿ :ಕಡಬ: ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ವೃದ್ಧ ಸಾವು
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/SDL5CAMpIQ0?si=LsSvXVhrSIMoXFUz











