ಉಪ್ಪಿನಂಗಡಿ: Tulu Times | ಜ್ಯೂಸ್ ಸೆಂಟರ್ ಗೆ ನುಗ್ಗಿ ಹಲ್ಲೆ ನಡೆಸಿರುವ ಪ್ರಕರಣದ 5 ಮಂದಿ ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೆರಿಯಡ್ಕ ಮನೆ ನಿವಾಸಿ ಮಹಮ್ಮದ್ ಎಂಬವರ ಮಗನಾದ ನೌಫ್ ದೂರುದಾರರಾಗಿದ್ದಾರೆ. ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಬಳಿ ಕಾಮತ್ ಜ್ಯೂಸ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ ತಾಹಿರಾ ಮತ್ತು ತಸ್ಮಿಯಾ ಎಂಬಿಬ್ಬರು, ಪೆರಿಯಡ್ಕದ ಘಟನೆಯನ್ನು ಉಲ್ಲೇಖಿಸಿ ಕೈಯಿಂದ ಹೊಡೆದು, ಜೀವ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.
ಘಟನೆ ನಡೆದದ್ದು ಯಾವಾಗ..?
ಉಪ್ಪಿನಂಗಡಿಯ ಜ್ಯೂಸ್ ಸೆಂಟರ್ ವೊಂದಕ್ಕೆ ಕಳೆದ ನವೆಂಬರ್ 8 ರಂದು ನುಗ್ಗಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ದೂರಿನಲ್ಲಿ ಜ್ಯೂಸ್ ಸೆಂಟರ್ ಹೊರಗಡೆ ನಿಂತಿದ್ದ ಯಾಹ್ಯಾ, ಸಿರಾಜ್, ಖಾದರ್ ಆದರ್ಶನಗರ ಎಂಬವರು ಜೀವ ಬೆದರಿಕೆಯೊಡ್ಡಿರುತ್ತಾರೆ ಎಂದು ಬರೆಯಲಾಗಿದೆ. ಈ ಘಟನೆಯ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ದೂರು ದಾಖಲಾಗದೇ ಇದ್ದ ಕಾರಣ ಹಲ್ಲೆಗೀಡಾದ ನೌಫ್ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಗಡಿಪಾರು ಆದೇಶ ಪ್ರಕರಣವನ್ನು ರದ್ದು ಕೋರಿ ತಿಮರೋಡಿ ಹೈಕೋರ್ಟ್ ಮೊರೆ !
ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ ತನ್ನ ಗಡಿಪಾರು ಆದೇಶ ಪ್ರಕರಣವನ್ನು ರದ್ದು ಕೋರಿ ತಿಮರೋಡಿ ಇದೀಗ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕೆಲವು ದಿನಗಳ ಹಿಂದೆ, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ಯ ತಾಲೂಕಿಗೆ 2025 ಡಿ. 17 ರಂದು 10 ತಿಂಗಳ ಕಾಲ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೈಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಇದೀಗ ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಗಡಿಪಾರು ಆದೇಶದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ನ್ಯಾಯಪೀಠದ ಮುಂದೆ ಬರಬೇಕಾಗಿದೆ. ಅರ್ಜಿ ವಿಚಾರಣೆ ನ್ಯಾಸೂರಜ್ ಗೋವಿಂದರಾಜು ಪೀಠದಲ್ಲಿ ನಡೆಯಿತು. ಈ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನು ಪ್ರಕಾರವಾಗಿ ಆದೇಶ ಮಾಡಲು ಪುತ್ತೂರು ಎಸ್ಪಿಗೆ ಹೈಕೋರ್ಟ್ ಸೂಚಿಸಿದ್ದರು.
Uppinangady: Juice center break-in and assault case: Case filed against accused- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











