ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಕಾಂ‌ಗ್ರೆಸ್ ಸರಕಾರದ ದುರಾಡಳಿತವನ್ನು ಜನರ ಗಮನಕ್ಕೆ ತರುತ್ತೇವೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: Tulu Times | ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ಬಿಜೆಪಿ ವಿಶೇಷವಾದ ಗಮನ ಕೊಡಲಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳಗಳ ಜೊತೆ ಮಾತನಾಡಿದ ಅವರು, ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಇವತ್ತಿನಿಂದ ರಾಜ್ಯಾಧ್ಯಕ್ಷರು ಮತ್ತು ಎಲ್ಲ ಪ್ರಮುಖರು ಸೇರಿ ಪ್ರತಿ ಜಿಲ್ಲಾ ಪ್ರಮುಖರ ಸಮಾವೇಶವನ್ನು ಮಾಡುತ್ತಿದ್ದೇವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚಿಸುತ್ತಿದ್ದೇವೆ. ಈ ಸರಕಾರದ ದುರಾಡಳಿತವನ್ನು ಜನರ ಗಮನಕ್ಕೆ ತರುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ವಿಶೇಷವಾದ ಗಮನ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:‌ ಮಾಂಟೆಸರಿ ಆಟಗಳು ಎಂದರೇನು ? ಇದು ಮಕ್ಕಳ ಮೇಲೆ ನಿಜವಾಗಿಯೂ ಪ್ರಭಾವ ಬೀಳುತ್ತವೆಯೇ ?

ಸಿದ್ದರಾಮಯ್ಯನವರು ಅತಿ ಹೆಚ್ಚು ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜ ಅರಸು ಅವರ ಆಡಳಿತ ವೈಖರಿಯೇ ಬೇರೆ; ಇವರ ಆಡಳಿತ ವೈಖರಿಯೇ ಬೇರೆ ಎಂದು ತಿಳಿಸಿದರು. ಅವರ ಜೊತೆ ಇವರನ್ನು ಹೋಲಿಸಲಾಗದು ಎಂದರು. ಈ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಈ ಸಂದರ್ಭದಲ್ಲಿ ಸಮಾವೇಶದ ಮೂಲಕ ಸಾಧನೆ ಮಾಡುವುದಾಗಿ ಹೊರಟಿರುವುದನ್ನು ಜನರು ಮೆಚ್ಚುವುದಿಲ್ಲ. ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಪಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:‌ ವೈಯಕ್ತಿಕ ಔಷಧಿಗಳನ್ನು ಕೊಂಡೊಯ್ಯಲು ಸೌದಿ ಅರೇಬಿಯಾಗೆ ತೆರಳುವ ಭಾರತೀಯರಿಗೆ ಆನ್‌ಲೈನ್ ಅನುಮತಿ ಕಡ್ಡಾಯ

ಮುಂದಿನ ಚುನಾವಣೆಯಲ್ಲೂ ನಾವು ನಿಶ್ಚಿತವಾಗಿ ದೊಡ್ಡ ಬಹುಮತದೊಂದಿಗೆ ಬಿಜೆಪಿ ಸರಕಾರ ರಚಿಸಬೇಕೆಂಬ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮ ಕಾರ್ಯಕರ್ತರೂ ತುಂಬ ಉತ್ಸಾಹದಿಂದ ಮುಂದೆ ಬಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದನ್ನು ತಾವು ಗಮನಿಸಲಿದ್ದೀರಿ ಎಂದು ವಿಶ್ವಾಸದಿಂದ ನುಡಿದರು.

We will bring this government’s mismanagement to the attention of the people: B.S. Yediyurappa- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 156

You cannot copy content of this page