ಬ್ರೇಕಿಂಗ್ ನ್ಯೂಸ್
ಕರ್ನಾಟಕ

ರಾಜ್ಯಾದ್ಯಂತ ತಣ್ಣನೆಯ ಚಳಿ ವಾತಾವರಣ..ಹವಾಮಾನ ಇಲಾಖೆ ಸೂಚನೆ!

ಕರ್ನಾಟಕ: Tulu Times | ರಾಜ್ಯದಲ್ಲಿ  ಬಹುತೇಕ ಜಿಲ್ಲೆಗಳಲ್ಲಿ  ಶೀತಗಾಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಚಳಿ ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಿಲ್ಲೆಗಳಲ್ಲಿ ಹವಾಮಾನ ಹೇಗಿದೆ..?

ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 15.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ನಗರ ಹೊರವಲಯ ಪ್ರದೇಶಗಳಲ್ಲಿ ಚಳಿ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಚ್ಚಗಿದ್ದು, ದಕ್ಷಿಣ ಕನ್ನಡದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಮತ್ತು ಉಡುಪಿಯಲ್ಲಿ 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಚಳಿ ದಾಖಲಾಗಿದೆ. ರಾತ್ರಿ ಕನಿಷ್ಠ ತಾಪಮಾನ 9.7 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 9.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಹಾಗೂ ಮಧ್ಯ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ ಸುತ್ತಮುತ್ತ ದಾಖಲಾಗಿದೆ. ಜನವರಿ 9 ಮತ್ತು 10 ರಂದು  ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ:‌ ಬೀದಿನಾಯಿಗಳ ಹಾವಳಿ ಪ್ರಕರಣ ಬಗ್ಗೆ ಕೋರ್ಟ್ ಅಭಿಪ್ರಾಯಕ್ಕೆ ನಟಿ ರಮ್ಯಾ ಟಾಂಗ್!

ಇನ್ನು ಚಳಿಯಿಂದ ವಯೋವೃದ್ಧರು, ಮಕ್ಕಳು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.  ಮುಂದಿನ 5 ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೂ ಇಳಿಕೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಲ್ಲಿ ರಾಜ್ಯದ ಅತ್ಯಂತ ಕಡಿಮೆ ತಾಪಮಾನ6.3°C ದಾಖಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಶೀತಗಾಳಿ ಮುಂದುವರಿಯಲಿದೆ ಎಂದು IMD Bengaluru ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಿನ ಜಾವ ಮತ್ತು ರಾತ್ರಿ ಸಮಯ ತೀವ್ರ ಚಳಿ ಇರುವುದರಿಂದ ಬೆಚ್ಚಗಿನ ಉಡುಪುಗಳನ್ನು ಧರಿಸಲು ಸೂಚಿಸಲಾಗಿದೆ. ದಟ್ಟ ಮಂಜಿನ ಕಾರಣದಿಂದ ವಾಹನ ಸವಾರರು ಜಾಗರೂಕರಾಗಿರಲು ತಿಳಿಸಲಾಗಿದೆ.

ಇದನ್ನೂ ಓದಿ: ಕಾಂ‌ಗ್ರೆಸ್ ಸರಕಾರದ ದುರಾಡಳಿತವನ್ನು ಜನರ ಗಮನಕ್ಕೆ ತರುತ್ತೇವೆ: ಬಿ.ಎಸ್.ಯಡಿಯೂರಪ್ಪ

Cold weather conditions across the state.. Meteorological Department warns!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page