ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿ

ಬೆಳ್ತಂಗಡಿ: ಹಕ್ಕುಪತ್ರಗಳನ್ನು ವಿತರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: Tulu Times | ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜ ವಿತರಿಸಿದ್ದಾರೆ.  108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆಯನ್ನು ಹರೀಶ್ ಪೂಂಜ ವಿತರಣೆ ಮಾಡಿದ್ದಾರೆ.

ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು  ಜ.10 ರಂದು ವಿತರಿಸಿದರು. ತಾಲೂಕಿನ 48 ಗ್ರಾಮ ಪಂಚಾಯತ್ ಹಾಗೂ ಒಂದು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆದ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಶಾಸಕರಲ್ಲಿ ವಿನಂತಿಸಿದ್ದರು. ಇದರ ಫಲಶ್ರುತಿಯಾಗಿ 108 ಮಂದಿಗೆ ಹಕ್ಕು ಪತ್ರ  ಹಾಗೂ 54 ಮಂದಿಗೆ ನಡವಾಳಿ ವಿತರಿಸಿದರು.

ಕಳೆದ ಮೂರು ತಿಂಗಳಿಂದ  ಜನಸ್ಪಂದನ ಸಭೆಯಲ್ಲಿ ಜನರಿಂದ 94ಸಿ ವಿತರಣೆಗೊಳಿಸಲು ಅಡ್ಡಿಯಾಗಿರುವ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿದ್ದು ಮುಂದೆ ಈ ಬಗ್ಗೆ ಅಧಿಕಾರಿಗಳಿಗೆ ಸ್ಥಳ ತನಿಖೆ ನಡೆಸಲು ಸೂಚಿಸಲಾಗಿತ್ತು. ಕೆಲ ಕಡತಗಳಲ್ಲಿ ಅರಣ್ಯದ ಎನ್ ಒಸಿ ನೀಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ರಾಜ್ಯದಲ್ಲಿಯೇ 32 ಇಲಾಖೆಗಳ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಪ್ರಥಮವಾಗಿದೆ ಎಂದು ಹಕ್ಕು ಪತ್ರ ವಿತರಿಸಿ ಶಾಸಕ ಹರೀಶ್ ಪೂಂಜ ತಿಳಿಸಿದರು. ಈ ಸಂದರ್ಭದಲ್ಲಿ ಮಲವಂತಿಗೆಯ ಪ್ರಕಾಶ್ ಜೈನ್ ಎಳನೀರು, ಪಟ್ರಮೆಯ ಮನೋಜ್, ಕುಕ್ಕೇಡಿಯ ಅನಿತಾ ಕೆ. ಹಾಗೂ ಉಪ ತಹಶೀಲ್ದಾರ್ ಜಯ ಉಪಸ್ಥಿತರಿದ್ದರು.

ಕರಾವಳಿ ಪ್ರವಾಸೋದ್ಯಮವನ್ನು ಪರಂಪರೆ ಆಧಾರಿತ ವಿಷನ್ ಆಗಿ ರೂಪಿಸಲು ಬ್ರಿಜೇಶ್‌ಚೌಟ ಆಗ್ರಹ!

ಮಂಗಳೂರು: ಕರಾವಳಿ ಪ್ರವಾಸೋದ್ಯಮವನ್ನು ಜನ ಕೇಂದ್ರೀಕೃತ ಹಾಗೂ ಪರಂಪರೆ ಆಧಾರಿತ ವಿಷನ್‌ ರೂಪಿಸಬೇಕೆಂದು ಸಂಸದ ಕ್ಯಾ, ಬ್ರಿಜೇಶ್‌ಚೌಟ ಅವರು ತಿಳಿಸಿದ್ದಾರೆ. ಉಳ್ಳಾಲವನ್ನು ಹೆರಿಟೇಜ್ ವಿಲೇಜ್ ಆಗಿ ಗುರುತಿಸಲು ಸಂಸದ ಆಗ್ರಹಿಸಿದ್ದಾರೆ.

ಉಳ್ಳಾಲವನ್ನು ಹೆರಿಟೇಜ್ ವಿಲೇಜ್ ಆಗಿಯೂ ಘೋಷಿಸಲು ಚಿಂತನೆ !

ದಕ್ಷಿಣ ಕನ್ನಡವು ದಶಕಗಳಿಂದ ಹಾಗೆಯೇ ಉಳಿದಿಕೊಂಡಿದೆ. ಇಲ್ಲಿನ ಇತಿಹಾಸ-ಪರಂಪರೆ, ಸ್ಥಳೀಯ ಜೀವನೋಪಾಯ ಮತ್ತು ಸುಸ್ಥಿದ ಆರ್ಥಿಕ ಮಾದರಿಗಳಲ್ಲಿ ನೆಲೆಗೊಳ್ಳಬೇಕು. ಪೋರ್ಚ್‌ಗೀಸ್ ವಿರುದ್ಧ ಧೀರವಾಗಿ ಹೋರಾಡಿದ್ದ ವೀರವನಿತೆ ರಾಣಿ ಅಬ್ಬಕ್ಕನ ಆಡಳಿತ ಕೇಂದ್ರ ಉಳ್ಳಾಲ. ಇದು ಭಾರತೀಯ ನಾರೀಶಕ್ತಿಯ ಮೊದಲ ಪ್ರತಿರೋಧದ ಗುರುತು. ಇಂಥಹ ಪಾರಂಪರಿಕ ಇತಿಹಾಸದ ಶ್ರೀಮಂತಿಕೆ ಹೊಂದಿರುವ ಉಳ್ಳಾಲದಲ್ಲಿ ಅರಮನೆ, ಸೋಮನಾಥೇಶ್ವರ ದೇವಾಲಯ, ಕೃಷಿ, ಮ್ಯೂಸಿಯಂ ಒಳಗೊಂಡಂತೆ ಒಂದು ಕೇಂದ್ರೀಕೃತ ಪ್ರವಾಸೋದ್ಯಮ ವಲಯ ನಿರ್ಮಾಣ ಮಾಡಬಹುದು. ಹೀಗಾಗಿ, ಉಳ್ಳಾಲವನ್ನು ಕೇವಲ ಒಂದು ಪ್ರವಾಸಿ ತಾಣವಾಗಿ ಮಾತ್ರ ಗುರುತಿಸದೆ ಅದನ್ನು ಒಂದು ಹೆರಿಟೇಜ್ ವಿಲೇಜ್ ಆಗಿಯೂ ಘೋಷಿಸಬೇಕು. ಎಂದು ಸಂಸದ ಕ್ಯಾ, ಚೌಟ ಹೇಳಿದ್ದಾರೆ.

Belthangady: MLA Harish Poonja distributes rights certificates- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 158

You cannot copy content of this page