ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಕೇಂದ್ರ ಸರ್ಕಾರದ ಅನುಮೋದನೆ ಬಾಕಿಯಿರುವ ಯೋಜನೆಗಳು ಯಾವುವು..?

ಕರ್ನಾಟಕ: Tulu Times | ಮನರೇಗಾ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕದ ಎನ್.ಡಿ.ಎ ನಾಯಕರು ಬಹಿರಂಗ ಚರ್ಚೆಗೆ ಸಿದ್ದ ಎಂದು ಹೇಳುವುದರ ಮೂಲಕ ತಮ್ಮ ಬೌದ್ಧಿಕ ದಿವಾಳಿತನವನ್ನು ಸಾಬೀತು ಪಡಿಸಿದ್ದಾರೆ. ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ವಿರೋಧ ಪಕ್ಷದ ನಾಯಕರಾದ R ಅಶೋಕ್ ಜಂಟಿ ಪತ್ರಿಕಾ ಗೋಷ್ಠಿ ಮುಖಾಂತರ ಬಹಿರಂಗ ಚರ್ಚೆಗೆ ಕರೆ ನೀಡಿದ್ದಾರೆ.

ಬಹಿರಂಗ ಚರ್ಚೆಗೆ ವಿಶೇಷ ವಿಧಾನ ಸಭೆಯ ಅಧಿವೇಶನ ಮೂಲಕ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರ ಈಗಾಗಲೇ ಅವರಿಗೆ ಮುಕ್ತ ಅವಕಾಶವನ್ನು ನೀಡಿದೆ. ಮನರೇಗಾ ಯೋಜನೆಗೆ ಸಂಬಂಧಪಟ್ಟಂತೆ ಲೋಕಸಭೆಯಲ್ಲಿ ಮತ್ತು ರಾಜ್ಯಸಭೆಯಲ್ಲಿ ವಿರೋಧಪಕ್ಷಗಳು ಚರ್ಚೆಗೆ ಮುಂದಾದಾಗ ಪಲಾಯನ ಮಾಡಿರುವ ಕೇಂದ್ರ ಸರ್ಕಾರಕ್ಕೆ ಬಹುಶಃ HD ಕುಮಾರಸ್ವಾಮಿ ಅವರ ಸಲಹೆ ಅವಶ್ಯಕತೆ ಇರುತ್ತದೆ! ಮನರೇಗಾ ಯೋಜನೆಯನ್ನು ಜನವಿರೋಧಿ ಯೋಜನೆ ಯಾಗಿ ರೂಪಿಸಿರುವ ಕೇಂದ್ರ ಸರ್ಕಾರದ ಕಾಯಿದೆಯನ್ನು ಬೆತ್ತಲೆ ಗೊಳಿಸಲು ಕರ್ನಾಟಕದಲ್ಲಿ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲಾಗುತ್ತಿದೆ. ಬಹುತೇಕ ಅಲ್ಲಿ ಬಹಿರಂಗ ಚರ್ಚೆಗೆ ಅವಕಾಶವಿದ್ದು ಎಚ್ ಡಿ ಕುಮಾರಸ್ವಾಮಿ ಅವರಿಗೆ ಲೋಕಸಭೆಯ ಬದಲು ಕರ್ನಾಟಕದ ವಿಧಾನಸಭೆಯಲ್ಲಿ ಚರ್ಚೆ ಮಾಡಲು ಅಷ್ಟೊಂದು ಆಸಕ್ತಿ ಇದ್ದರೆ ಗೌರವಾನ್ವಿತ ರಾಷ್ಟ್ರಪತಿಗಳಿಂದ ವಿಶೇಷ ಅನುಮತಿಯನ್ನು ಪಡೆದುಕೊಂಡು ಕರ್ನಾಟಕ ವಿಧಾನಸಭೆಯಲ್ಲಿ ಚರ್ಚೆಗೆ ಬರಲಿ!  HD ಕುಮಾರಸ್ವಾಮಿಯವರು ಕರ್ನಾಟಕದ ಬಗ್ಗೆ ಬದ್ಧತೆ ಇದ್ದರೆ ಕೆಳಕಂಡ ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಅನುಮತಿಯನ್ನು ದೊರಕಿಸಿಕೊಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪರವಾಗಿ ಒತ್ತಾಯಿಸುತ್ತೇನೆ ಎಂದು ಮಾಧ್ಯಮ ಮತ್ತು ಸಂವಹನ ವಿಭಾಗ  ಅಧ್ಯಕ್ಷರು ರಮೇಶ್ ಬಾಬು ತಿಳಿಸಿದ್ದಾರೆ.

ಇದನ್ನೂ ಓದಿ: Bangalore : ಈ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಏರಿಕೆ: ತಡೆರಹಿತ ಪೂರೈಕೆಗೆ ಬೆಂಗಳೂರು ಸಿದ್ಧತೆ

ಕೇಂದ್ರ ಸರ್ಕಾರದ ಅನುಮೋದನೆ ಬಾಕಿಯಿರುವ ಕರ್ನಾಟಕದ ಪ್ರಮುಖ ಕೈಗಾರಿಕಾ ಯೋಜನೆಗಳನ್ನು ನೋಡೋದಾದ್ರೆ,  ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Second Airport), ಕರ್ನಾಟಕ ಸರ್ಕಾರವು ಬೆಂಗಳೂರು ಸುತ್ತಮುತ್ತ 3 ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಪೂರ್ವ-ಸಾಧ್ಯತಾ (Pre-feasibility) ಅಧ್ಯಯನ ನಡೆಸಿದೆ. ಕೇಂದ್ರ ಅನುಮೋದನೆ ಬಾಕಿ ಇದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL) ಒಪ್ಪಂದದ ಪ್ರಕಾರ, 2033ರ ವರೆಗೆ 150 ಕಿ.ಮೀ ವ್ಯಾಪ್ತಿಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ BIAL ಒಪ್ಪಿಗೆ ಅಗತ್ಯ. ಹುಬ್ಬಳ್ಳಿ – ಬೆಳಗಾವಿ – ವಿಜಯಪುರ ವಿಮಾನ ನಿಲ್ದಾಣ ವಿಸ್ತರಣೆ / ಉನ್ನತಿ, ರಾಜ್ಯ ಸರ್ಕಾರ ಸಿದ್ಧವಾಗಿದೆ. ಕೇಂದ್ರ ಸರ್ಕಾರದ ಅನುಮತಿ ಬಾಕಿ ಇದೆ. ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ (MoEFCC) ಪರಿಸರ ಅನುಮತಿ. ನಾಗರಿಕ ವಿಮಾನಯಾನ ಸಚಿವಾಲಯದ ಅಂತಿಮ ಒಪ್ಪಿಗೆ,  ರಕ್ಷಣಾ ಕೈಗಾರಿಕಾ ಕಾರಿಡಾರ್‌ಗಳು (Defence Industrial Corridors) ಉತ್ತರ ಕರ್ನಾಟಕ (ಹುಬ್ಬಳ್ಳಿ–ಬೆಳಗಾವಿ–ವಿಜಯಪುರ),ದಕ್ಷಿಣ ಕರ್ನಾಟಕ (ಕೋಲಾರ–ಚಿಕ್ಕಬಳ್ಳಾಪುರ–ಬೆಂಗಳೂರು ಗ್ರಾಮಾಂತರ)

ರಾಜ್ಯ ಸರ್ಕಾರ ಅನುಮೋದನೆ ನೀಡಿದ ಹಲವು ಪ್ರಮುಖ ಕೈಗಾರಿಕಾ ಮತ್ತು ಮೂಲಸೌಕರ್ಯ ಯೋಜನೆಗಳು, ಕೇಂದ್ರದ ಅನುಮತಿ ವಿಳಂಬದಿಂದ ಸ್ಥಗಿತಗೊಂಡಿವೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣ, ಡಿಫೆನ್ಸ್ ಕಾರಿಡಾರ್ ಮತ್ತು ದೊಡ್ಡ ಕೈಗಾರಿಕಾ ಪಾರ್ಕ್‌ಗಳು ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆಗೆ ನಿರ್ಣಾಯಕ.

ಇದನ್ನೂ ಓದಿ: SSLC : ಎಸ್‌.ಎಸ್‌.ಎಲ್‌.ಸಿ ಪ್ರಶ್ನೆಪತ್ರಿಕೆ ಸೋರಿಕೆ : ಎಚ್ಚೆತ್ತುಕೊಳ್ಳದ ಪರೀಕ್ಷಾ ಮಂಡಳಿ ಅಧಿಕಾರಿಗಳು

ಕೇಂದ್ರದ ಎನ್‌ಡಿಎ ಸರ್ಕಾರದ ಅಸಹಕಾರದಿಂದ ಕರ್ನಾಟಕದ ಕೈಗಾರಿಕಾ ವೇಗಕ್ಕೆ ಅಡ್ಡಿಯಾಗುತ್ತಿದೆ. ನೀರಾವರಿ ಯೋಜನೆಗಳು ಸ್ಥಗಿತಗೊಂಡಿವೆ. ಕೇಂದ್ರದ ಬಿಜೆಪಿಯನ್ನು ಮೆಚ್ಚಿಸಲು ಅಥವಾ ಕೇಂದ್ರದ ನಾಯಕರನ್ನು ಮೆಚ್ಚಿಸಲು ಹೇಳಿಕೆ ನೀಡುವ ಬದಲು ಕೇಂದ್ರ ಸರ್ಕಾರದ ಸಚಿವರಾದ ಹೆಚ್‍ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಬಿಜೆಪಿ ಸಚಿವರು ತಮ್ಮ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನಿರ್ವಹಣೆ ಮಾಡಲಿ. ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರಕ್ಕೆ ಪಾಠ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಪ್ರಾಮಾಣಿಕ ಪ್ರಯತ್ನ ಮಾಡಲಿ. ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ, ತಮ್ಮ ಧ್ವನಿಯನ್ನು ರಾಜ್ಯದ ಪರವಾಗಿ ಗಟ್ಟಿಗೊಳಿಸಲಿ ಎಂದು ಪ್ರದೇಶ ಕಾಂಗ್ರೆಸ್ ಪಕ್ಷದ ಪರವಾಗಿ ಒತ್ತಾಯಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ  ಮಾಧ್ಯಮ ಮತ್ತು ಸಂವಹನ ಅಧ್ಯಕ್ಷ  ರಮೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What are the projects pending approval from the central government?- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 157

You cannot copy content of this page